Education Loan-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅರ್ಜಿ ಆಹ್ವಾನ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?

June 14, 2026 | Siddesh
Education Loan-ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅರ್ಜಿ ಆಹ್ವಾನ!ಯಾರೆಲ್ಲ ಅರ್ಜಿ ಸಲ್ಲಿಸಬಹುದು?
Share Now:

ಉನ್ನತ ಶಿಕ್ಷಣ ಪಡೆಯಬೇಕೆಂಬ ಹಂಬಲವಿದ್ದರೂ ಆರ್ಥಿಕ ಸಂಕಷ್ಟದಿಂದಾಗಿ ಹಿನ್ನಡೆ ಅನುಭವಿಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರವಸೆಯ ಬೆಳಕೊಂದನ್ನು ನೀಡಿದೆ. ರಾಜ್ಯದ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ 'ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮವು' 2026-27ನೇ ಸಾಲಿನ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ‘ಅರಿವು ವಿದ್ಯಾಭ್ಯಾಸ ಸಾಲ ಯೋಜನೆ/Arivu Education Loan'ಯನ್ನು ಪ್ರಕಟಿಸಿದೆ. ವೃತ್ತಿಪರ ಕೋರ್ಸ್‌ಗಳಲ್ಲಿ ಸೀಟು ಪಡೆದು, ಫೀಸ್ ಕಟ್ಟಲು ಪರದಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಮಾನ್ಯವಾಗಿ ವೃತ್ತಿಪರ ಕೋರ್ಸ್‌ಗಳೆಂದರೆ ಲಕ್ಷಾಂತರ ರೂಪಾಯಿ ವೆಚ್ಚ ತಗುಲುತ್ತದೆ. ಮಧ್ಯಮ ಹಾಗೂ ಬಡ ಕುಟುಂಬಗಳ ಪೋಷಕರಿಗೆ ಈ ವೆಚ್ಚವನ್ನು ಭರಿಸುವುದು ಅಷ್ಟು ಸುಲಭದ ಮಾತಲ್ಲ. ಇದನ್ನು ಮನಗಂಡು ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಸಿ.ಇ.ಟಿ (CET), ನೀಟ್ (NEET) ಅಥವಾ ಜೆಇಇ (JEE) ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಮುಂದಾಗಿದೆ. ಸರ್ಕಾರಿ, ಖಾಸಗಿ ಹಾಗೂ ಮ್ಯಾನೇಜ್‍ಮೆಂಟ್ ಕೋಟಾದಡಿ ಪ್ರವೇಶ ಪಡೆದಿರುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ(Arivu Education Loan Scheme) ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: PMEGP ಯೋಜನೆಯಡಿ ಸ್ವಂತ ಉದ್ಯೋಗಕ್ಕೆ ಸಿಗಲಿದೆ ಭರ್ಜರಿ ಸಬ್ಸಿಡಿ ಸಾಲ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ವಿದ್ಯಾರ್ಥಿಗಳು ಕೇವಲ ಮೆಡಿಕಲ್ ಅಥವಾ ಇಂಜಿನಿಯರಿಂಗ್ ಅಷ್ಟೇ ಅಲ್ಲದೆ, ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯಿರುವ ಕೃಷಿ, ತೋಟಗಾರಿಕೆ, ಫಾರ್ಮಸಿ ಸೇರಿದಂತೆ ಹತ್ತಾರು ವೃತ್ತಿಪರ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ಈ ಸಾಲವನ್ನು(Education Loan) ಬಳಸಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಸಾಲದ ನೆರವು ಸಿಗಲಿದ್ದು, ಇದು ವಿದ್ಯಾರ್ಥಿಗಳ ಮೇಲಿನ ಆರ್ಥಿಕ ಹೊರೆಯನ್ನು ಗಣನೀಯವಾಗಿ ತಗ್ಗಿಸಲಿದೆ. ಆಸಕ್ತ ವಿದ್ಯಾರ್ಥಿಗಳು ನಿಗಮದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಡಮಾಡದೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Education Loan Scheme In Karnataka-ಯೋಜನೆಯ ಪ್ರಮುಖ ಮುಖ್ಯಾಂಶಗಳು ಮತ್ತು ವಿವರಗಳು ಇಲ್ಲಿವೆ:

ಅರ್ಹ ಕೋರ್ಸ್‌ಗಳ ವ್ಯಾಪ್ತಿ:

ಈ ಯೋಜನೆಯಡಿ ಕೇವಲ ಸಾಂಪ್ರದಾಯಿಕ ಕೋರ್ಸ್‌ಗಳಿಗಷ್ಟೇ ಸೀಮಿತವಾಗದೆ ಎಂ.ಬಿ.ಬಿ.ಎಸ್, ಬಿಡಿಎಸ್, ಬಿಇ, ಬಿ.ಟೆಕ್, ಎಂಬಿಎ, ಎಂಸಿಎ, ಎಲ್‍ಎಲ್‍ಬಿ ಹಾಗೂ ಬಿಎಸ್‍ಸಿ ಕೃಷಿ, ಬಿ.ಫಾರ್ಮಾ ಸೇರಿದಂತೆ ಪ್ರಮುಖ ಪದವಿ ಮತ್ತು ಸ್ನಾತಕೋತ್ತರ ವೃತ್ತಿಪರ ಕೋರ್ಸ್‌ಗಳಿಗೆ ಸಾಲ ಸೌಲಭ್ಯ ಲಭ್ಯವಿರುತ್ತದೆ.

ಗರಿಷ್ಠ ಸಾಲದ ಮಿತಿ:

ಯೋಜನೆಯಡಿ ಆಯ್ಕೆಯಾಗುವ ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಗೆ ಅವರ ಶೈಕ್ಷಣಿಕ ವೆಚ್ಚವನ್ನು ಸರಿದೂಗಿಸಲು ವಾರ್ಷಿಕವಾಗಿ ಗರಿಷ್ಠ 5.00 ಲಕ್ಷ ರೂಪಾಯಿಗಳವರೆಗೆ ವಿದ್ಯಾಭ್ಯಾಸ ಸಾಲವನ್ನು ಮಂಜೂರು ಮಾಡಲಾಗುತ್ತದೆ.

ಇದನ್ನೂ ಓದಿ: Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಪ್ರವೇಶಾತಿ ಮಾನದಂಡ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಿ.ಇ.ಟಿ, ನೀಟ್ ಅಥವಾ ಜೆಇಇ ಪ್ರವೇಶ ಪರೀಕ್ಷೆಗಳ ಮೂಲಕ ಆಯ್ಕೆಯಾಗಿ ಸರ್ಕಾರಿ, ಖಾಸಗಿ ಹಾಗೂ ಮ್ಯಾನೇಜ್‍ಮೆಂಟ್ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಿಶೇಷ ಸೂಚನೆ:

ಇದೇ ಮಾದರಿಯಲ್ಲಿ ಪ್ರಸ್ತುತ ರಾಜ್ಯದಲ್ಲಿರುವ ವಿವಿಧ ವರ್ಗದ ನಿಗಮ-ಮಂಡಳಿಗಳಿಂದ ಅತೀ ಕಡಿಮೆ ಬಡ್ಡಿದರದಲ್ಲಿ ಶಿಕ್ಷಣ ಸಾಲವನ್ನು ಪಡೆಯಲು ಅವಕಾಶವಿದ್ದು ಆಸಕ್ತ ವಿದ್ಯಾರ್ಥಿಗಳು ಆಯಾ ನಿಗಮದ ಜಾಲತಾಣವನ್ನು ಪ್ರವೇಶ ಮಾಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದು.

ಇದನ್ನೂ ಓದಿ: GKVK Krishi Mele-2026: ಅಕ್ಟೋಬರ್ 15 ರಿಂದ 18 ರ ವರೆಗೆ ಜಿಕೆವಿಕೆಯಲ್ಲಿ ‘ಬೆಂಗಳೂರು ಕೃಷಿಮೇಳ-2026'

Arivu Education Loan Online Application-ಅರ್ಜಿ ಸಲ್ಲಿಸುವ ವಿಧಾನ:

ಈ ಸಾಲ ಸೌಲಭ್ಯವನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಯಾವುದೇ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ಜಾಲತಾಣವಾದ www.kccdclonline.karnataka.gov.in ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಕೆಳಗಿನ ವಿಧಾನವನ್ನು ಅನುಸರಿಸಿ:

Step-1: ವಿದ್ಯಾರ್ಥಿಗಳು ಮೊದಲಿಗೆ ಈ "Online Application" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ.

Education Loan Application

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಬಲ ಬದಿಯಲ್ಲಿ ಕಾಣಿಸುವ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಹೊಸ ಬಳಕೆದಾರಾಗಿದ್ದಲ್ಲಿ ನೋಂದಣಿಯನ್ನು ಮಾಡಿಕೊಂಡು ನೋಂದಾಯಿತ ಮೊಬೈಲ್ ನಂಬರ್ ಮತ್ತು ಪಾರ್ಸ್ವರ್ಡ್ ಅನ್ನು ಹಾಕಿ ಲಾಗಿನ್ ಅಗಬೇಕು.

Step-3: ಲಾಗಿನ್ ಅದ ನಂಬರ್ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣಿಸುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಓದಿ: Police Police Constable-ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

Required Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರಿವು ಶಿಕ್ಷಣ ಸಾಲ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ:

  • ನೀಟ್ ಪ್ರವೇಶ ಪತ್ರ
  • ವಿದ್ಯಾರ್ಥಿಯ SSLC / 10ನೇ ತರಗತಿಯ ಅಂಕಪಟ್ಟಿ
  • ಡಿಪ್ಲೋಮ/ಪಿ.ಯು.ಸಿ ಅಂಕಪಟ್ಟಿ
  • ವಿದ್ಯಾರ್ಥಿ ಮತ್ತು ಪೋಷಕರಿಂದ ನಷ್ಟಭರ್ತಿ ಬಾಂಡ್ (Indemnity Bond)
  • ವಿದ್ಯಾರ್ಥಿಯ ಕಾಲೇಜು ಬೊನಾಫೈಡ್ / ಸ್ಟಡಿ ಪ್ರಮಾಣಪತ್ರ
  • ಪೋಷಕರ ಸ್ವಯಂ-ಘೋಷಣಾ ಪತ್ರ
  • ವಿದ್ಯಾರ್ಥಿಯ ಕಾಲೇಜಿನ ಭೋದನಾ ಶುಲ್ಕ ರಶೀದಿ
  • ಪೋಷಕ / ಸಂರಕ್ಷರ ಇತ್ತೀಚಿನ ಪಾಸ್‌ಪೋರ್ಟ್‌ ಅಳತೆಯ ಫೋಟೋ
  • ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್‌-ಅಳತೆಯ ಫೋಟೋ
  • ಫಾರ್ಮ್ 16 (ವಿದ್ಯಾರ್ಥಿಯ ಪೋಷಕರು ಸರ್ಕಾರಿ ಅಧಿಕಾರಿ/ನೌಕರರಾಗಿದ್ದಲ್ಲಿ-ಕಡ್ಡಾಯ )
  • ಸಿಇಟಿ ಪ್ರವೇಶ ಪತ್ರ
  • ವಿದ್ಯಾರ್ಥಿಯ ಸ್ವಯಂ-ಘೋಷಣಾ ಪತ್ರ

ಇದನ್ನೂ ಓದಿ: PC Job Notification-3,395 ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟ!

Helpline-ಈ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಸಹಾಯವಾಣಿಯ ವಿವರ:

ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಅಥವಾ ಯೋಜನೆಯ ನಿಯಮಾವಳಿಗಳ ಕುರಿತು ಯಾವುದೇ ಗೊಂದಲಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: 63607 53075 ಅಥವಾ ಇಮೇಲ್: [email protected] ಮೂಲಕ ನಿಗಮದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಅಧಿಕೃತ ವೆಬ್ಸೈಟ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: