Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026 | Siddesh
Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!
Share Now:

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ, ವಿಕಲಚೇತನ ವಿದ್ಯಾರ್ಥಿಗಳಿಗೆ (ಪಿಡಬ್ಲ್ಯೂಡಿ) ವಿಶೇಷ ಪರಿಗಣನೆಯನ್ನು ನೀಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈ ವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Crop Survey App-ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ, ಜುಲೈ 25 ಕೊನೆಯ ದಿನ!

ಪ್ರಸ್ತುತ ಈ ಅಂಕಣದಲ್ಲಿ ವೇತನವನ್ನು ಪಡೆಯಲು ಯಾರೆಲ್ಲ ಅರ್ಹರು? ಅರ್ಜಿಯನ್ನು ಸಲ್ಲಿಸಲು ಅಂತಿಮ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಯಾವೆಲ್ಲಾ ಪ್ರಯೋಜನವನ್ನು ಪಡೆಯಬಹುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Uses Of This Scheme- ಈ ಯೋಜನೆಯ ಅಡಿಯಲ್ಲಿ ಯಾವೆಲ್ಲ ಪ್ರಯೋಜನವನ್ನು ಪಡೆಯಬಹುದು?

ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 50,000 ರೂಪಾಯಿಗಳ ವಿದ್ಯಾರ್ಥಿವೇತನವನ್ನು ನಾಲ್ಕು ವರ್ಷಗಳವರೆಗೆ ನೀಡಲಾಗುತ್ತದೆ.

Last Date To APply-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 15 ಆಗಷ್ಟ್ 2026

ಇದನ್ನೂ ಓದಿ: Fish Farming Subsidy-ಮೀನು ಸಾಕಾಣಿಕೆ ಮಾಡಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Who Can APply-ಯಾವೆಲ್ಲ ಮಾನದಂಡಗಳನ್ನುಅನುಸರಿಸಬೇಕು?

ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು ಮಾನ್ಯತೆ ಪಡೆದ ಕಾಲೇಜಿನಲ್ಲಿ ಎಂಜಿನಿಯರಿಂಗ್ ಕಾರ್ಯಕ್ರಮದ ಮೊದಲ ವರ್ಷದಲ್ಲಿ ದಾಖಲಾಗಿರಬೇಕು.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು 5 ಲಕ್ಷ ದ ಒಳಗಿರಬೇಕು.

2025-26ನೇ ಶೈಕ್ಷಣಿಕ ವರ್ಷದಲ್ಲಿ 12ನೇ ತರಗತಿ (ವಿಜ್ಞಾನ ವಿಭಾಗ) ದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು . ಪಿಡಬ್ಲ್ಯೂಡಿ ಅರ್ಜಿದಾರರಿಗೆ, 12ನೇ ತರಗತಿ (ವಿಜ್ಞಾನ ವಿಭಾಗ)ದಲ್ಲಿ ಕನಿಷ್ಠ 40% ಅಂಕ ಪಡೆದಿರಬೇಕು.

ಸ್ಕೇಫ್ಲರ್ ಇಂಡಿಯಾ ಅಥವಾ ಬಡ್ಡಿ4ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: PUC Scholorship-ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

What Are The Steps-ಅರ್ಜಿ ಸಲ್ಲಿಸುವ ವಿಧಾನಗಳಾವುವು?

Step-1: ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Schaeffler India Hope Engineering Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿದಾರ ವಿದ್ಯಾರ್ಥಿಗಳು ಈ ಜಾಲತಾಣವನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Engineering Scholarship

ಇದನ್ನೂ ಓದಿ: KSOU Admission-2026-ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ವಿವಿಧ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ
ಆದಾಯ ಪ್ರಮಾಣ ಪತ್ರ
10 ಮತ್ತು 12 ನೇ ತರಗತಿಯ ಅಂಕಪಟ್ಟಿ
ಪ್ರವೇಶ ಪತ್ರ
ಇತ್ತೀಚಿನ ಶಾಲಾ/ಕಾಲೇಜು ಶುಲ್ಕ ರಶೀದಿ
ಬ್ಯಾಂಕ್ ಪಾಸ್‌ಬುಕ್
ಫೋಟೋ

ಇದನ್ನೂ ಓದಿ: Sasya Santhe 2026-ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಜುಲೈ 10 ರಿಂದ ಮೂರು ದಿನಗಳ ಕಾಲ ‘ಸಸ್ಯ ಸಂತೆ’

For More Information-ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ ಅನ್ನು ಭೇಟಿ ಮಾಡಿ: CLick Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: