Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!

August 24, 2026 | Siddesh
Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನ!
Share Now:

2026-2027 ನೇ ಸಾಲಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತನವು ಬಡ ವರ್ಗದ ಕುಟುಂಬಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡಲು ಅರ್ಹ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ಲಕ್ಷ ವಿದ್ಯಾರ್ಥಿವೇತನವನ್ನು ನೀಡಿ ಅವರ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಸಹಾಯಕಾರಿಯಾಗಿದೆ.

ಇದನ್ನೂ ಓದಿ: Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲಾತಿಗಳನ್ನು ನೀಡಬೇಕು? ಅರ್ಜಿ ಸಲ್ಲಿಸುವ ಹಂತಗಳಾವುವು? ಕೊನೆಯ ದಿನಾಂಕ ಯಾವುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಸೆಪ್ಟೆಂಬರ್ 2026

Scholorship Amount-ಈ ಯೋಜನೆಯಡಿ ಒದಗುವ ಪ್ರಯೋಜನಗಳಾವುವು?

ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Sheep Farming Training-ಬೆಂಗಳೂರು ಕೃಷಿ ವಿವಿಯಿಂದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.

ಬಿ.ಟೆಕ್ ಅಥವಾ ಬಿ.ಇ ಕಾರ್ಯಕ್ರಮದ ಮೊದಲ ವರ್ಷದಲ್ಲಿ (ಶೈಕ್ಷಣಿಕ ವರ್ಷ 2026-27) ದಾಖಲಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಮೊದಲ ಪರಿಣಾಮ ಪಟ್ಟಿಯಲ್ಲಿ ಸೇರಿಸಲಾದ ಕಾಲೇಜುಗಳಲ್ಲಿ ಒಂದಕ್ಕೆ ಪ್ರವೇಶ ಪಡೆದಿರಬೇಕು ಅರ್ಹ ಕಾಲೇಜುಗಳ ಪಟ್ಟಿಯನ್ನು ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಮೀರಿರಬಾರದು.

ವಿದ್ಯಾರ್ಥಿಯು ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು.

IDFC FIRST ಬ್ಯಾಂಕ್ ಉದ್ಯೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದನ್ನೂ ಓದಿ: Parivartan Programme-ಪರಿವರ್ತನ್ ECSS ಕಾರ್ಯಕ್ರಮ ವತಿಯಿಂದ ₹18,000 ವಿದ್ಯಾರ್ಥಿವೇತನ!ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Documents Required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ
ಪ್ರವೇಶ ಪತ್ರ
ಶುಲ್ಕ ರಶೀದಿ ಪ್ರತಿ
10 ನೇ ತರಗತಿ ಅಂಕ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ
ಮೊಬೈಲ್ ನಂಬರ್
ಫೋಟೊ

ಇದನ್ನೂ ಓದಿ: Reliance Foundation Scholarship-ಪದವಿ ವಿದ್ಯಾರ್ಥಿಗಳಿಗೆ ₹2 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

Engineering Scholarship

ಇದನ್ನೂ ಓದಿ: Farmer Award Application-ಮುಂಗಾರು ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ!ರೂ 50,000/- ದ ವರೆಗೆ ಬಹುಮಾನ ನಿಗದಿ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ?

ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಪಡೆಯಲು ಕೆಳಗೆ ನೀಡಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಕೋರಿದೆ.

Step-1: ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "Engineering Scholarship" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ನಂತರ “Apply Now” ಬಟನ್ ಮೇಲೆ ಕ್ಲಿಕ್ ಮಾಡಬೇಕು. ವಿದ್ಯಾರ್ಥಿಗಳು ಈ ವೆಬ್ಸೈಟ್ ಅನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದರೆ “Create an Account” ಆಯ್ಕೆ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ಸಿದ್ದ ಮಾಡಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೂಲಕ ಅಗತ್ಯ ವಿವರಗಳನ್ನು ನಮೂದಿಸಿ Log In ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ನಂತರ ಅಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ನಮೂದಿಸಿ, ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿ್ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

More Information-ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: