Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!

July 3, 2025 | Siddesh
Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!
Share Now:

ಫಾಸ್ಟ್ ಫುಡ್ ತಯಾರಿಕೆ ಮತ್ತು ಮಾರಾಟ ಕ್ಷೇತ್ರದಲ್ಲಿ(Free fast food training)ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಫಾಸ್ಟ್ ಫುಡ್(Fast food training) ಸ್ಟಾಲ್ ಉದ್ಯಮಿ ಕ್ಷೇತ್ರವು ಉತ್ತಮ ಆದಾಯ ತರಬಲ್ಲ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ದಿನೇ ದಿನೇ ಬೇಡಿಕೆಯು ಏರುಗತಿಯಲ್ಲಿ ಸಾಗುತ್ತಿದ್ದು, ಈ ವಿಭಾಗದಲ್ಲಿ ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಂಡು ತರಬೇತಿಯಲ್ಲಿ ಭಾಗವಹಿಸಬಹುದು.

ಇದನ್ನೂ ಓದಿ: Bele Vime Amount-2025: ಈ ಜಿಲ್ಲೆಯ ರೈತರ ಖಾತೆಗೆ 30 ಕೋಟಿ ಬೆಳೆ ವಿಮೆ ಬಿಡುಗಡೆ!

ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಯಲ್ಲಿ ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು?ತರಬೇತಿ ಪ್ರಾರಂಭ ದಿನಾಂಕ ಹಾಗೂ ಫಾಸ್ಟ್ ಫುಡ್ ಉದ್ದಿಮೆ ಆರಂಭಿಸಲು ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬಹುದು? ಎನ್ನುವ ಮಾಹಿತಿ ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

12 Days Fast Food Training-ಅರ್ಜಿ ಸಲ್ಲಿಸಲು ಅರ್ಹರು:

ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು. 

ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿರುತ್ತದೆ. 

ಗ್ರಾಮೀಣ ಭಾಗದಲ್ಲಿ ವಾಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

ಇದನ್ನೂ ಓದಿ: Diploma Veterinary Admission-ಪಶುಸಂಗೋಪನೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Fast food business- ಈ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ:

ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯು ಒಟ್ಟು 12 ದಿನ ನಡೆಯಲಿದ್ದು, ತರಬೇತಿಯಲ್ಲಿ ಬಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಕಟ್ಟುವ ಅವಶ್ಯಕತೆ ಇರುವುದಿಲ್ಲ.

Bank loan for fast food business- ಬ್ಯಾಂಕ್ ಮೂಲಕ ಸಾಲ ಸೌಲಭ್ಯ:

ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಉಚಿತವಾಗಿ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಹಾಯಧನದಲ್ಲಿ ಸಾಲವನ್ನು ತೆಗೆದುಕೊಂಡು ಉದ್ಯಮಿಯನ್ನು ಆರಂಭಿಸಬಹುದು ಎಂದು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.

Fast food Training-ತರಬೇತಿಯಲ್ಲಿ ಯಾವೆಲ್ಲ ವಿಷಯದ ಕುರಿತು ಮಾಹಿತಿ ತಿಳಿಸಲಾಗುತ್ತದೆ?

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಈ ಕೇಂದ್ರದಿಂದ ಪಾನಿಪುರಿ, ಮಸಾಲಪುರಿ, ಗೋಬಿ ಮಂಚೂರಿ, ಸಮೋಸ,ಕಚೋರಿ,ನೂಡಲ್ಸ್, ಕೇಕ್, ಪಪ್ಸ್ ಹಾಗೂ ಸಿಹಿ ತಿಂಡಿಗಳನ್ನು ತಯಾರಿಕೆ ಮಾಡುವ ವಿಧಾನದ ಕುರಿತು ಪ್ರಯೋಗಿಕವಾಗಿ ತಿಳಿಸಿಕೊಡಲಾಗುತ್ತದೆ.

ಇದನ್ನೂ ಓದಿ: Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Fast Food Training

ಇದನ್ನೂ ಓದಿ: Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

fast food Training Application-ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಎರಡು ವಿಧಾನ ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಒಂದು ಆನ್ಲೈನ್ ಮೂಲಕ ಈ ಲೇಖನದ ಕೊನೆಯಲ್ಲಿ ಹಾಕಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು ಇನ್ನೊಂದು ವಿಧಾನ ಎಂದರೆ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್-Apply Now

Required documents for fast food Training - ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ಅರ್ಜಿದಾರರ ಅಧಾರ್ ಕಾರ್ಡ ಪ್ರತಿ/Aadhar
  • ಫೋಟೋ/Photo
  • ಬ್ಯಾಂಕ್ ಪಾಸ್ ಬುಕ್/Bank Pass Book
  • ರೇಶನ್ ಕಾರ್ಡ/Ration Card
  • ಮೊಬೈಲ್ ಸಂಖ್ಯೆ/Mobile Number

ಇದನ್ನೂ ಓದಿ: Agri Diploma Admission-ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಗ್ರಿ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Fast food Training date- ತರಬೇತಿ ನಡೆಯುವ ಅವಧಿ:

ತರಬೇತಿ ಪ್ರಾರಂಭ ದಿನಾಂಕ: 21 ಜುಲೈ 2025 ರಿಂದ ಪ್ರಾರಂಭವಾಗಿ 01 ಆಗಸ್ಟ್ 2025ಕ್ಕೆ ಮುಕ್ತಾಯವಾಗಲಿದೆ.

Training Center Address- ತರಬೇತಿ ನಡೆಯುವ ಸ್ಥಳ:

ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343 ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612

Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಗೂಗಲ್ ಪಾರ್ಮ್ ತೆರೆದುಕೊಳ್ಳುತ್ತದೆ ಇದರಲ್ಲಿ ನಿಮ್ಮ ಹೆಸರು, ಮೇಲ್, ತಂದೆಯ ಹೆಸರು, ಮೊಬೈಲ್ ಸಂಖ್ಯೆ,  ಇತರೆ ವಿವರವನ್ನು ಭರ್ತಿ ಮಾಡಿ ಕೊನೆಯ ಕಾಲಂ ನಲ್ಲಿ "fast food stall udyami" ತರಬೇತಿಯನ್ನು ಆಯ್ಕೆ ಮಾಡಿಕೊಂಡು ಕೊನೆಯಲ್ಲಿ ಕೆಳಗೆ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: Best Saving Schemes-ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ಎಷ್ಟು ಬಡ್ಡಿ ಸಿಗುತ್ತದೆ?

Fast Food Business Subsidy Schemes- ಫಾಸ್ಟ್ ಫುಡ್ ಉದ್ದಿಮೆ ಆರಂಭಿಸಲು ಈ ಯೋಜನೆಯಡಿ ಸಹಾಯಧನ ಪಡೆಯಬಹುದು:

ಫಾಸ್ಟ್ ಫುಡ್ ಉದ್ದಿಮೆಯನ್ನು ಆರಂಭಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಅವುಗಳ ವಿವರ ಈ ಕೆಳಗಿನಂತಿದೆ.

1) PMEGP ಯೋಜನೆಯಡಿ ಆರ್ಥಿಕ ನೆರವು: ಫಾಸ್ಟ್ ಫುಡ್ ಉದ್ದಿಮೆಯನ್ನು ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವವರು ಕೇಂದ್ರ ಸರ್ಕಾರದ PMEGP ಯೋಜನೆಯಡಿ ಸಹಾಯಧನವನ್ನು ಪಡೆಯಲು ಅವಕಾಶವಿರುತ್ತದೆ.

ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಲಿಂಕ್-Click Here

2) ಪ್ರವಾಸೋದ್ಯಮ ಇಲಾಖೆಯ ಯೋಜನೆಯಡಿ ಸಹಾಯಧನ ಪಡೆಯಲು ಅವಕಾಶ: ಪ್ರವಾಸೋದ್ಯಮ ಇಲಾಖೆಯಿಂದ ಕೆಲವು ಆಯ್ದ ಪ್ರವಾಸಿ ತಾಣಗಳಲ್ಲಿ ಮೊಬೈಲ್ ಕ್ಯಾಂಟಿನ್ ಫಾಸ್ಟ್ ಫುಡ್ ಉದ್ದಿಮೆಯನ್ನು ಆರಂಭಿಸಲು 5 ಲಕ್ಷದ ವರೆಗೆ ಆರ್ಥಿಕ ನೆರವನ್ನು ಪಡೆಯಲು ಅವಕಾಶವಿದ್ದು ಒಮ್ಮೆ ನಿಮ್ಮ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now
Share Now: