Fellowship Application-ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ!

January 31, 2026 | Siddesh
Fellowship Application-ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ!
Share Now:

ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಶಿಕ್ಷಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ "ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ" ಒಂದು ಮಹತ್ವದ ಹೆಜ್ಜೆ ಇಟ್ಟಿದೆ. 2024ನೇ ಸಾಲಿನ ಸಿಇಟಿ (CET) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ, ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಈ ಶಿಷ್ಯವೇತನ(Fellowship Scheme) ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನವನ್ನು ನೀಡಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ಶಿಷ್ಯವೇತನವನ್ನು(Fellowship Application) ಒದಗಿಸಲಾಗುತ್ತಿದ್ದು ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಅಡಿಯಲ್ಲಿ ಪ್ರಸ್ತುತ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಪಡೆಯಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Adarsha Vidyalaya Admission-ಆದರ್ಶ ವಿದ್ಯಾನಿಯಲಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

ಶಿಷ್ಯವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ(Fellowship Online Application) ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವುವು ಎನ್ನುವ ಮಾಹಿತಿ ಸೇರಿದಂತೆ ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply Fellowship-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸಿಇಟಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ಶಿಷ್ಯವೇತನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಮಕ್ಕಳಾಗಿರಬೇಕು.

ಪೋಷಕರು ಈಗಾಗಲೇ ಶಿಕ್ಷಕರ ಕಲ್ಯಾಣ ನಿಧಿಯ ಆಜೀವ ಸದಸ್ಯತ್ವ (Life Membership Card) ಹೊಂದಿರಬೇಕು.

2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ವೈದ್ಯಕೀಯ (MBBS), ಇಂಜಿನಿಯರಿಂಗ್ (BE), ಕೃಷಿ ವಿಜ್ಞಾನ (B.Sc Agriculture) ಅಥವಾ ಪಶುವೈದ್ಯಕೀಯ (BVSc) ಕೋರ್ಸ್‌ಗಳಿಗೆ ಕೆ.ಇ.ಎ (KEA) ಮೂಲಕ ಪ್ರವೇಶ ಪಡೆದಿರಬೇಕು.

ಇದನ್ನೂ ಓದಿ: Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

ಸಿಇಟಿ ಅಥವಾ ನೀಟ್ (NEET) ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರಬೇಕು. ಈ ಯೋಜನೆಯಡಿ ಒಟ್ಟು 280 ವಿದ್ಯಾರ್ಥಿಗಳಿಗೆ (MBBS-70, BE-70, B.Sc Ag-70, BVSc-70) ಮಾತ್ರ ಅವಕಾಶವಿರುತ್ತದೆ.

ವಿದ್ಯಾರ್ಥಿಯು 1 ರಿಂದ 12ನೇ ತರಗತಿಯವರೆಗೆ ಕರ್ನಾಟಕದ ಸರ್ಕಾರಿ ಅಥವಾ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿಯೇ ವ್ಯಾಸಂಗ ಮಾಡಿರಬೇಕು.

ಸಿಬಿಎಸ್‌ಇ (CBSE) ಅಥವಾ ಐಸಿಎಸ್‌ಇ (ICSE) ಹೊರತುಪಡಿಸಿ, ಕೇವಲ ರಾಜ್ಯ ಪಠ್ಯಕ್ರಮದಲ್ಲಿ (State Syllabus) ಓದಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಸೀಮಿತವಾಗಿದೆ.

ಇದನ್ನೂ ಓದಿ: Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

Fellowship Application Important Dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: 01-02-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2026

ಕಚೇರಿಗೆ ಪ್ರಸ್ತಾವನೆ ಸಲ್ಲಿಸಲು ಕೊನೆಯ ದಿನ: 20-02-2026

ಇದನ್ನೂ ಓದಿ: Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

Fellowship Application

ಇದನ್ನೂ ಓದಿ: Diploma Scholorship-ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ!

Online Application For Fellowship-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಜಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯುತ್ತದೆ. ವಿದ್ಯಾರ್ಥಿಗಳು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

Step-1: ವಿದ್ಯಾರ್ಥಿಗಳು ಮೊದಲ ಹಂತದಲ್ಲಿ ಈ "Fellowship Online Application" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ನಂತರ ಲಾಗಿನ್ ಅಗಿ ಇಲ್ಲಿ ಕೇಳುವ ವಿದ್ಯಾರ್ಥಿಯ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.

Step-4: ಕೊನೆಯಲ್ಲಿ ಅಗತ್ಯವಿರುವ ಎಲ್ಲಾ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ Submit ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು, ಅದನ್ನು ಕಾಲೇಜಿನ ಮುಖ್ಯಸ್ಥರಿಂದ ಸಹಿ ಮತ್ತು ಮೊಹರಿನೊಂದಿಗೆ ದೃಢೀಕರಿಸಿ ಕಚೇರಿಗೆ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ: Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

Required Documents For Fellowship-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳೇನು?

ಶಿಷ್ಯವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

1 ರಿಂದ 12ನೇ ತರಗತಿಯವರೆಗೆ ಕರ್ನಾಟಕದಲ್ಲಿಯೇ ವ್ಯಾಸಂಗ ಮಾಡಿದ ಬಗ್ಗೆ ಶಾಲಾ ಮುಖ್ಯಸ್ಥರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ (BEO) ದೃಢೀಕರಿಸಲ್ಪಟ್ಟ ಪ್ರಮಾಣ ಪತ್ರ.

ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಅಂಕಪಟ್ಟಿಗಳು.

ಸಿಇಟಿ/ನೀಟ್ ಪ್ರವೇಶ ಪತ್ರ ಮತ್ತು ರಾಂಕಿಂಗ್ ಕಾರ್ಡ್: KEA ಮೂಲಕ ಹಂಚಿಕೆಯಾದ ಕಾಲೇಜಿನ ದಾಖಲಾತಿ ಪತ್ರ.

ಶಿಕ್ಷಕರ ಕಲ್ಯಾಣ ನಿಧಿಯ ಆಜೀವ ಸದಸ್ಯತ್ವದ (Life Membership Card) ಪ್ರತಿ.

ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವೃತ್ತಿಪರ ಕಾಲೇಜಿನ ಮುಖ್ಯಸ್ಥರಿಂದ ಶಿಫಾರಸು ಮಾಡಲ್ಪಟ್ಟ ದೃಢೀಕರಣ ಪತ್ರ.

ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆಯ ಪಾಸ್‌ಬುಕ್ ಪ್ರತಿ.

ಈ ಶಿಷ್ಯವೇತನ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಶಿಕ್ಷಕರ ಸದನ ಕಚೇರಿಯನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆಯಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: