Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ

November 23, 2025 | Siddesh
Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ
Share Now:

ನಿನ್ನೆ ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಮೀನುಗಾರಿಕೆ ಇಲಾಖೆ‌ವತಿಯಿಂದ ಆಯೋಜಿಸಲಾದ “ವಿಶ್ವ ಮೀನುಗಾರಿಕೆ ದಿನಾಚರಣೆ “ಪ್ರಯುಕ್ತ ಹಾಗೂ‌ “ಮತ್ಸ್ಯ ಮೇಳ-2025” ವನ್ನು ಜೀವಂತ ಅಲಂಕಾರಿಕ ಮೀನುಗಳನ್ನು ಫಿಷ್ ಬೌಲ್ ಗೆ ಹಾಕುವ ಮುಖಾಂತರ ಮತ್ಸ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಮೀನುಗಾರರಿಗೆ ಸಂಕಷ್ಟ ಪರಿಹಾರ ಮೊತ್ತವನ್ನು 6 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗೆ ಹೆಚ್ಚಿಸಿದ್ದು, ಕಳೆದ ಎರಡು ವರ್ಷಗಳಲ್ಲಿ 264 ಪ್ರಕರಣಗಳಿಗೆ ಒಟ್ಟು 9.48ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದೆ ಎಂದರು.

ಮೀನುಗಾರಿಕೆ ಕಷ್ಟದ ಕಾಯಕವಾಗಿದ್ದು, ಹತ್ತು ಲಕ್ಷಕ್ಕಿಂತ ಹೆಚ್ಚು ಜನರು ಮೀನುಗಾರಿಕೆ ಮೇಲೆ ಅವಲಂಬಿತರಾಗಿದ್ದಾರೆ. ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ 9.63 ಲಕ್ಷ ಮೆಟ್ರಿಕ್ ಟನ್ ಮೀನು ಉತ್ಪಾದಿಸಲಾಗಿದ್ದು, ರಾಜ್ಯವು ಒಳನಾಡು ಮೀನು ಉತ್ಪಾದನೆಯಲ್ಲಿ 7 ನೇ ಸ್ಥಾನ ಹಾಗೂ ಕರಾವಳಿ ಮೀನು ಉತ್ಪಾದನೆಯಲ್ಲಿ 5 ನೇ ಸ್ಥಾನ ಹೊಂದಿದ್ದು, ಒಟ್ಟು ಉತ್ಪಾದನೆಯಲ್ಲಿ 3 ನೇ ಸ್ಥಾನದಲ್ಲಿದ್ದು ಮೀನುಗಾರಿಕೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದರು.

ಇದನ್ನೂ ಓದಿ: Free Treatment-ನಾಯಿ, ಹಾವು ಕಡಿತಕ್ಕೆ ತಕ್ಷಣ ಉಚಿತ ಚಿಕಿತ್ಸೆ ಕಡ್ಡಾಯ ಸುಪ್ರೀಂ ಕೋರ್ಟ್ ಆದೇಶ!

ಸಾಂಪ್ರದಾಯಿಕ ಮೀನುಗಾರರಿಗೆ ನೇರ ಸಹಾಯಧನ ಬೆಂಬಲ:

ನಮ್ಮ ಸಾಂಪ್ರದಾಯಿಕ ವಲಯವನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ. ನಾಡದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತಿ ಲೀಟರ್‌ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಿಸಲು ನಮ್ಮ ಸರ್ಕಾರವು ತಕ್ಷಣ ಕ್ರಮ ಕೈಗೊಂಡು ಅಗತ್ಯ ಪರಿಹಾರವನ್ನು ಮುಂದುವರೆಸಿದೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆ ಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ.

ರಾಜ್ಯದ ಮೀನುಗಾರಿಕಾ ಕ್ಷೇತ್ರದ ಸಮಗ್ರ, ಸರ್ವತೋಮುಖ ಅಭಿವೃದ್ಧಿಗಾಗಿ ನಮ್ಮ ಸರ್ಕಾರವು 3,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕೇವಲ ವೆಚ್ಚವಲ್ಲ; ಇದು ನಮ್ಮ ನೀಲಿ ಭವಿಷ್ಯದಲ್ಲಿನ ಬೃಹತ್ ಹೂಡಿಕೆಯಾಗಿದೆ ಎಂದರು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಾರಾಟಗಾರರಿಗೆ ಮಾರುಕಟ್ಟೆಯ ಪ್ರವೇಶವನ್ನು ಹೆಚ್ಚಿಸಲು 4 ಚಕ್ರದ ವಾಹನ ಖರೀದಿಗೆ 3 ಲಕ್ಷ ರೂ. ವರೆಗೆ ವಿಶೇಷ ಸಹಾಯಧನ ನೀಡುತ್ತಿದ್ದೇವೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಒಳನಾಡು ಮೀನುಗಾರಿಕೆಯೇ ನಮ್ಮ ಮುಂದಿನ ಪ್ರಮುಖ ಹೆಜ್ಜೆ. ಈ ನಿಟ್ಟಿನಲ್ಲಿ 'ಮತ್ನ ಸಂಜೀವಿನಿ' ಯೋಜನೆಯನ್ನು ಪ್ರಾರಂಭಿಸಲಾಗಿದೆ. . ಈ ಯೋಜನೆಯಡಿಯಲ್ಲಿ ಈಗಾಗಲೇ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ತರಬೇತಿ ನೀಡಿ ಮೀನು ಮರಿಗಳನ್ನು ವಿತರಿಸಲಾಗಿದೆ. ಈ ಯೋಜನೆಯು ನಮ್ಮ ಗ್ರಾಮೀಣ ಮಹಿಳೆಯರನ್ನು ಯಶಸ್ವಿ ಜಿಲ್ಲಾ -ಉದ್ಯಮಿಗಳನ್ನಾಗಿ ಪರಿವರ್ತಿಸುತ್ತಿದೆ.

ಇದನ್ನೂ ಓದಿ: Revenue Site Khata-ರೆವಿನ್ಯೂ ಸೈಟ್ ಗೂ ಇನ್ಮುಂದೆ ಸಿಗಲಿದೆ ಇ-ಖಾತಾ!

ಇದೇ ಸಂದರ್ಭದಲ್ಲಿ ಮೃತ ಮೀನುಗಾರರ ಕುಟುಂಬಗಳಿಗೆ 10 ಲಕ್ಷ ರೂ.ಗಳ ಪರಿಹಾರ ಚೆಕ್ ಗಳನ್ನು ವಿತರಿಸಲಾಯಿತು. ಇಲಾಖೆಯ ಕೈಪಿಡಿಗಳನ್ನು ಬಿಡುಗಡೆ ಮಾಡಿದರು. ಅಲ್ಲದೇ ಉತ್ತಮ ಮೀನುಗಾರರಿಗೆ ಹಾಗೂ ಮೀನುಗಾರಿಕಾ ಸಂಘಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಷ್ಟೇ ಅಲ್ಲದೇ ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಇದನ್ನೂ ಓದಿ: AI Fact Check Training-ಎಐ ಹಾಗೂ ಫ್ಯಾಕ್ಟ್‌ಚೆಕ್‌ ಕುರಿತು ಒಂದು ದಿನದ ತರಬೇತಿಗೆ ಅರ್ಜಿ ಆಹ್ವಾನ!

Fisheries

ಮೀನುಗಾರಿಕೆ ಆತ್ಮಬಲ-ಆತ್ಮವಿಶ್ವಾಸ ಮುಖ್ಯ- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:

ಮೀನು ಎಂದರೆ ಲಕ್ಷ್ಮಿ, ನಾವೆಲ್ಲ ರೈತರು, ರೈತರು ಭೂಮಿಯಲ್ಲಿ ಕೃಷಿ ಮಾಡುತ್ತಾರೆ. ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತಾರೆ ಮೀನುಗಾರರು ಗಂಗೆಯ ಪುತ್ರರು ಎಂದರು.

ಮತ್ಸ್ಯಮೇಳ-2025 ಉದ್ಘಾಟನಾ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿದ ಉಪಮುಖ್ಯಮಂತ್ರಿ ಅವರು ಮೀನುಗಾರಿಕೆಯನ್ನು ಮಾಡಲು ಆತ್ಮಬಲ, ಆತ್ಮವಿಶ್ವಾಸ ಮುಖ್ಯ, ಮೀನುಗಾರರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ಮೀನು ಹಿಡಿಯೋದು ಬೇರೆ, ಮೀನನ್ನು ಮಾರಾಟ ಮಾಡೋದು ಬೇರೆ ಎಂದರು.

ಈ ಮೀನುಗಾರಿಕೆಗೆ ಜಾತಿ ಇಲ್ಲ, ನೀತಿ ಮತ್ತು ಚಲ ಆಸಕ್ತಿ ಇರಬೇಕು, ತಾಳ್ಮೆ ಇರಬೇಕು. ಮೀನುಗಾರರು ಶಿಕಾರಿಗೆ ಹೋದಾಗ ಒಂದೇ ದಿನಕ್ಕೆ ಶಿಕಾರಿ ಸಿಗುವುದಿಲ್ಲ. ಮೂರು ದಿನ, ವಾರ ಆದರೂ ಕೂಡ ಒಂದು ಮೀನು ಸಿಗುವುದಿಲ್ಲ ಎಂದು ಮೀನುಗಾರರ ಕಷ್ಟವನ್ನು ವಿವರಿಸಿ ಮೀನುಗಾರರ ಕಷ್ಟವನ್ನು ನಾನು ಅರಿತಿದ್ದೇನೆ. ಮೀನುಗಾರರು ಶ್ರಮ ಜೀವಿಗಳು ಎಂದರು,

ಇದನ್ನೂ ಓದಿ: PUC Scholarship-ಧಾರ್ಮಿಕ ದತ್ತಿ ಇಲಾಖೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ₹5,000/- ಪ್ರೋತ್ಸಾಹಧನ!

ನಮ್ಮ ಸರ್ಕಾರ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಕೆರೆಗಳಿಗೆ ವಿದ್ಯುತ್ ಶಕ್ತಿಯನ್ನು ಕೊಟ್ಟು, ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೆರೆಗಳನ್ನ ತುಂಬಿಸೋವಂತ ಕೆಲಸ ಮಾಡಿದೆ ಎಂದರು, ಮೀನುಗಾರಿಕೆ ಉತ್ಪಾದನೆ ಮಾಡುವುದಕ್ಕೆ ಹೊಸ ಟೂರಿಸಂ ನೀತಿಯನ್ನು ಸೃಜಿಸಲು ಚಿಂತನೆ ನಡೆಸಲಾಗಿದೆ ಎಂದರು.

ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು- ಸಚಿವ ಮಂಕಾಳ ಎಸ್ ವೈದ್ಯ:

ಮೀನುಗಾರಿಕೆ ಇಲಾಖೆ ಅತ್ಯದ್ಭುತವಾದ ಇಲಾಖೆಯಾಗಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಪ್ರಯುಕ್ತ ಮತ್ಸ್ಯ ಮೇಳವನ್ನು ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿರುವುದು ಸಂತೋಷದ ವಿಷಯವಾಗಿದ್ದು ಮೀನುಗಾರಿಕೆ ಇಲಾಖೆಗೆ 3000 ಕೋಟಿಗಳ ಅನುದಾನವನ್ನು ನಮ್ಮ ಸರ್ಕಾರ ಮೀಸಲಿಟ್ಟಿದೆ ಎಂದರು.

ಪ್ರತಿಯೊಬ್ಬ ಮೀನುಗಾರ ಕುಟುಂಬಕ್ಕೂ ಶಾಶ್ವತ ಸೂರಿರಬೇಕು ಉದ್ದೇಶದಿಂದ ಮತ್ಯಾಶ್ರಯ ಯೋಜನೆ ಮೂಲಕ ವಸತಿ ರಹಿತ 10,000 ಮೀನುಗಾರರಿಗೆ ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!

ಸಮುದ್ರ ಅಂಬ್ಯುಲೆನ್ಸ್:

ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ನಮ್ಮ ಕರಾವಳಿಯಲ್ಲಿ ಕರ್ನಾಟಕದ ಮೊಟ್ಟ ಮೊದಲ ಸಮರ್ಪಿತ ಸಮುದ್ರ ಅಂಬ್ಯುಲೆನ್ಸ್ ಅನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ. 7 ಕೋಟಿ ರೂ. ವೆಚ್ಚದ ಈ ಯೋಜನೆಯು, ಸಮುದ್ರದಲ್ಲಿ ಮೀನುಗಾರರ ಜೀವ ತುರ್ತು ವೈದ್ಯಕೀಯ ನೆರವಿನಿಂದ ವಂಚಿತವಾಗಬಾರದು ಎಂಬ ನಮ್ಮ ಆಶಯ." ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರವಾಗಿ ನಮ್ಮ ಕಡಲ ತೀರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು.

ಪರಿಹಾರ ದ್ವಿಗುಣ (ಮತ್ತ್ವ ಆಶಾ ಕಿರಣ):

ಮೀನುಗಾರಿಕಾ ನಿಷೇಧದ ಅವಧಿಯಲ್ಲಿ ನಮ್ಮ ಮೀನುಗಾರರು ಎದುರಿಸುವ ಸಂಕಷ್ಟವನ್ನು ನಾವು ಗುರುತಿಸಿದ್ದೇವೆ. ಹಾಗಾಗಿ, 'ಮಕ್ಷ್ಯ ಆಶಾ ಕಿರಣ' ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದ ಪರಿಹಾರವನ್ನು 1,500 ರೂ. ಗಳಿಂದ 3,000 ರೂ.ಗಳಿಗೆ ದ್ವಿಗುಣಗೊಳಿಸಿದ್ದೇವೆ. ಇದು ನಮ್ಮ ಮೀನುಗಾರ ಕುಟುಂಬಗಳಿಗೆ ಅತಿ ಮುಖ್ಯವಾದ ಆರ್ಥಿಕ ಬೆಂಬಲವಾಗಿದೆ ಎಂದು ಹೇಳಿದರು,

ಸಾಂಪ್ರದಾಯಿಕ ಮೀನುಗಾರರಿಗೆ ನೇರ ಸಹಾಯಧನ ಬೆಂಬಲ: "ನಮ್ಮ ಸಾಂಪ್ರದಾಯಿಕ ವಲಯವನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ. ನಾಡದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತಿ ಲೀಟರ್‌ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಿಸಲು ನಮ್ಮ ಸರ್ಕಾರವು ತಕ್ಷಣ ಕ್ರಮ ಕೈಗೊಂಡು ಅಗತ್ಯ ಪರಿಹಾರವನ್ನು ಮುಂದುವರೆಸಿದೆ ಎಂದರು.

ಇದನ್ನೂ ಓದಿ: Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

ಮೀನುಗಾರಿಕಾ ಸಂಪರ್ಕ ರಸ್ತೆಗಳು:

ಕರಾವಳಿಯಿಂದ ಮಾರುಕಟ್ಟೆಗೆ ಮೀನಿನ ಸಾಗಾಣಿಕೆಗೆ ಅನುಕೂಲವಾಗಲು, ನಮ್ಮ ಕರಾವಳಿ ಜಿಲ್ಲೆಗಳಲ್ಲಿನ ಪ್ರಮುಖ ಮೀನುಗಾರಿಕಾ ಸಂಪರ್ಕ ರಸ್ತೆಗಳ ತಕ್ಷಣದ ಅಭಿವೃದ್ಧಿಯನ್ನು NABARD ನೆರವಿನೊಂದಿಗೆ ಕೈಗೊಳ್ಳಲು 30 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದರು.

ಮೀನುಗಾರರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಮೀನುಗಾರರಿಗೆ ಜೀವ ರಕ್ಷಕ ಕವಚಗಳನ್ನು ನೀಡಲಾಗುತ್ತಿದೆ. ಒಟ್ಟಾರೆಯಾಗಿ ನಮ್ಮ ಸರ್ಕಾರ ಮೀನುಗಾರರ ಅಭಿವೃದ್ಧಿ, ಬಂದರುಗಳ ಅಭಿವೃದ್ಧಿ, ಕೆರೆ ತುಂಬಿಸುವ ಕೆಲಸ, ಮೀನುಗಾರರಿಗೆ ಪೂರಕವಾದ ಪರಿಕರಗಳನ್ನು ಒದಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಈ ಎಲ್ಲಾ ಉಪಕ್ರಮಗಳಿಗೆ ಆಧಾರವಾಗಿ, ನಮ್ಮ ಸರ್ಕಾರವು ಕರ್ನಾಟಕಕ್ಕಾಗಿ ನೂತನ ಮೀನುಗಾರಿಕೆ ನೀತಿಯನ್ನು ಅಂತಿಮಗೊಳಿಸುವ ಹಂತದಲ್ಲಿದೆ. ಈ ನೀತಿಯು ಪರಿಸರ ಆರೋಗ್ಯ, ಸಂಪನ್ಮೂಲಗಳ ರಕ್ಷಣೆ ಮತ್ತು ಪ್ರತಿಯೊಬ್ಬ ಮೀನುಗಾರ ಕುಟುಂಬದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ ನೀಲನಕ್ಷೆಯಾಗಲಿದೆ ಎಂದರು.

ಮೀನು ಕೃಷಿ ಕುರಿತು ಉತ್ತೇಜನ ನೀಡುವ 70ಕ್ಕೂ ಹೆಚ್ಚು ಮಳಿಗೆಗಳನ್ನು ಮೇಳದಲ್ಲಿ ತೆರೆಯಲಾಗಿದೆ. ಜೊತೆಗೆ ಬಗೆ ಬಗೆಯ ಮೀನಿನ ಖಾದ್ಯಗಳ ಮಾರಾಟ ಮಳಿಗೆಗಳೂ ಗ್ರಾಹಕರನ್ನು ಸೆಳೆಯುತ್ತಿವೆ ಎಂದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಸುರೇಶ ಬಿ.ಎಸ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ.ನಾರಾಯಣರಾವ್, ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಲ್ ಹಾಗೂ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ದಿನೇಶ್ ಕುಮಾರ್ ಅವರು ಸೇರಿದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ಸ್ಯ ಪ್ರಿಯರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: