Free AI Training-ವಿದ್ಯಾರ್ಥಿಗಳಿಗೆ ₹15,000/- ರೂ ವಿದ್ಯಾರ್ಥಿವೇತನ ಸಹಿತ ಎಐ ಕುರಿತು ತರಬೇತಿಗೆ ಅರ್ಜಿ ಆಹ್ವಾನ!

March 31, 2025 | Siddesh
Free AI Training-ವಿದ್ಯಾರ್ಥಿಗಳಿಗೆ ₹15,000/- ರೂ ವಿದ್ಯಾರ್ಥಿವೇತನ ಸಹಿತ ಎಐ ಕುರಿತು ತರಬೇತಿಗೆ ಅರ್ಜಿ ಆಹ್ವಾನ!
Share Now:

ಇಂಜಿನಿಯರಿಂಗ್ ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಇಲಾಖೆಯಿಂದ Artificial Intelligence (AI) ಮತ್ತು Machine Learning (ML) ಸೇರಿದಂತೆ ವೃತ್ತಿಪರ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ 2024-25ನೇ ಸಾಲಿನ ಆಯವ್ಯಯ ಭಾಷಣ (ಕಂಡಿಕೆ-174) ಪ್ರಕಾರ, ಇಂಜಿನಿಯರಿಂಗ್ ಪದವೀಧರರಿಗೆ Artificial Intelligence (AI) ಮತ್ತು Machine Learning (ML) ಸೇರಿದಂತೆ ವೃತ್ತಿಪರ ತರಬೇತಿ ಕೋರ್ಸುಗಳನ್ನು ಒದಗಿಸಲು ಮಹತ್ವದ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿಯಲ್ಲಿ, ಭಾರತೀಯ ವಿಜ್ಞಾನ ಸಂಸ್ಥೆ (IISc), ಭಾರತೀಯ ತಾಂತ್ರಿಕ ಸಂಸ್ಥೆ (IIT) ಮತ್ತು ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (NIT)ಗಳ ಮೂಲಕ ಗರಿಷ್ಠ ಎರಡು ವಾರಗಳ ಅವಧಿಯ ಶಿಷ್ಯವೇತನ ಸಹಿತ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!

ತರಬೇತಿಯಲ್ಲಿ(Engineering Student Training) ಭಾಗವಹಿಸಲು ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳು ಯಾವುವು? ತರಬೇತಿಯನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

AI & MI Training deatils-ತರಬೇತಿಯ ವಿವರ ಹೀಗಿದೆ:

✔ ಈ ಯೋಜನೆಯಡಿ ಪರಿಶಿಷ್ಟ ವರ್ಗದ 200 ಇಂಜಿನಿಯರಿಂಗ್ ಪದವೀಧರರಿಗೆ ಅನುಕೂಲ ದೊರೆಯಲಿದೆ.
✔ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 15,000/- ಶಿಷ್ಯವೇತನ ನೀಡಲಾಗುವುದು.
✔ ಅರ್ಜಿ ಸಲ್ಲಿಸಲು ಕನಿಷ್ಠ ಶೈಕ್ಷಣಿಕ ಅರ್ಹತೆ: B.E./B.Tech ಪದವಿ.
✔ ಕನಿಷ್ಠ 55% ಅಂಕಗಳಿಸಿರಬೇಕು.
✔ ಕೋರ್ಸ್ ಅವಧಿ: ಗರಿಷ್ಠ 2 ವಾರಗಳು.

ಇದನ್ನೂ ಓದಿ: Military College-ಆರ್ಮಿ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಇಲ್ಲಿದೆ ಉತ್ತಮ ಅವಕಾಶ!

ai training

How To Apply-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ತಮ್ಮ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಲು 11 ಏಪ್ರಿಲ್ 2025 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳಿಗಾಗಿ ನಿಮ್ಮ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ.

ಇದನ್ನೂ ಓದಿ: Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Documents-ಅರ್ಜಿ ಸಲ್ಲಿಸಲು ದಾಖಲಾತಿಗಳು:

ಅರ್ಜಿದಾರರ ಆಧಾರ್ ಕಾರ್ಡ ಪ್ರತಿ/Aadhar card.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste Certificate.
ಪೋಟೋ/Photo.
ಅಭ್ಯರ್ಥಿಯ ಅಂಕಪಟ್ಟಿ/Marks Card.
ಬ್ಯಾಂಕ್ ಪಾಸ್ ಬುಕ್/Bank Pass Book

ಇದನ್ನೂ ಓದಿ: Togari Kharidi-ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

AI & MI Training Benefits-ತರಬೇತಿಯಲ್ಲಿ ಭಾಗವಹಿಸುವುದರಿಂದ ಆಗುವ ಪ್ರಯೋಜನಗಳು:

ಈ ತರಬೇತಿ ಕಾರ್ಯಕ್ರಮದಿಂದ ಇಂಜಿನಿಯರಿಂಗ್ ಪದವೀಧರರು cutting-edge ತಂತ್ರಜ್ಞಾನಗಳಾದ AI ಮತ್ತು ML ಕ್ಷೇತ್ರದಲ್ಲಿ ಕೌಶಲ್ಯವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಕ ತರಬೇತಿ ಪಡೆಯುವ ಅವಕಾಶದಿಂದ ವಿದ್ಯಾರ್ಥಿಗಳು ಉದ್ಯೋಗ ಅವಕಾಶಗಳನ್ನು ಹೆಚ್ಚಿಸಿಕೊಳ್ಳಬಹುದು.

ಇದನ್ನೂ ಓದಿ: Nandini Milk Price-ಹಾಲಿನ ದರ ₹4 ರೂ ಹೆಚ್ಚಳ ಮಾಡಿದ ಸರ್ಕಾರ!

AI & MI Training Information-ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಬದಲಾವಣೆ:

ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಆನೇಕಲ್ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ (ಗ್ರೇಡ್-1) ಅವರು, "ಈ ತರಬೇತಿ ಕೋರ್ಸ್‍ಗಳು ಯುವ ಇಂಜಿನಿಯರ್ ಗಳಿಗೆ ತಾಂತ್ರಿಕ ಕ್ಷೇತ್ರದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಲು ತಾಂತ್ರಿಕ ನೆರವು ನೀಡಲು ಸಹಾಯ ಮಾಡುತ್ತದೆ.

AI ಮತ್ತು ML ಕ್ಷೇತ್ರಗಳು ಇಂದು ಉದ್ಯೋಗ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯನ್ನು ಇದ್ದು, ಇದರಿಂದಾಗಿ ಈ ತರಬೇತಿಯನ್ನು ಪಡೆಯುವ ವಿದ್ಯಾರ್ಥಿಗಳ ವೃತ್ತಿ ಜೀವನದಲ್ಲಿ ಮಹತ್ವದ ಪರಿಣಾಮಕಾರಿ ಬದಲಾವಣೆ ತರುವ ಸಹಕಾರಿಯಾಗಿದೆ" ಎಂದು ತಿಳಿಸಿದ್ದಾರೆ, ಆಸಕ್ತ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ.

WhatsApp Group Join Now
Telegram Group Join Now
Share Now: