ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಸ್ವಂತ ಉದ್ಯೋಗವನ್ನು ಮಾಡಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಬೈಕ್ ರಿಪೇರಿ ತರಬೇತಿಯನ್ನು(, Free two-wheeler repair) ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ದಿನಗಳಲ್ಲಿ ದ್ವಿಚಕ್ರ ವಾಹನ ಬಳಕೆದಾರರು(motorcycle repair) ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಕ್ಷೇತ್ರದಿಂದ ಉತ್ತಮ ಆದಾಯ ಗಳಿಕೆಗೆ ಅವಕಾಶವಿದ್ದು ಗ್ರಾಮೀಣ ಮತ್ತು ನಗರ ಭಾಗದ ಯುವಕರು ಈ ತರಬೇತಿಯನ್ನು ಪಡೆದು ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಬಹುದಾಗಿದೆ.
ತರಬೇತಿಯನ್ನು ಎಲ್ಲಿ ನಡೆಸಲಾಗುತ್ತದೆ? ತರಬೇತಿ ಪ್ರಾರಂಭ ದಿನಾಂಕ, ಅರ್ಜಿಯನ್ನು ಸಲ್ಲಿಸುವ ವಿಧಾನ ಮತ್ತು ಯಾರೆಲ್ಲ ಅರ್ಜಿ(Bike repair skills training) ಸಲ್ಲಿಸಿ ಈ ತರಬೇತಿಯನ್ನು ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: KMF Milk Subsidy-ಹಾಲಿನ ಪ್ರೋತ್ಸಾಹಧನ ಬಿಡುಗಡೆ! ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಚೆಕ್ ಮಾಡಿ?
Free Bike Repair Training- ಉಚಿತ 1 ತಿಂಗಳ ಬೈಕ್ ರಿಪೇರಿ ತರಬೇತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಅರ್ಹರು:
(1) ಉಚಿತ 1 ತಿಂಗಳ ಬೈಕ್ ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
(2) ಅರ್ಜಿ ಸಲ್ಲಿಸುವವರಿಗೆ ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿರುತ್ತದೆ.
(3) ಅರ್ಜಿ ಸಲ್ಲಿಸುವವರಲ್ಲಿ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅರ್ಜಿದಾರರಿಗೆ ತರಬೇತಿಯಲ್ಲಿ ಪಾಲ್ಗೊಳಲು ಪ್ರಥಮ ಅದ್ಯತೆಯನ್ನು ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(4) ಅರ್ಜಿದಾರರು ಒಮ್ಮೆ ಸಂಸ್ಥೆಯಿಂದ ತರಬೇತಿ ಪೂರ್ಣಗೊಳಿಸಿದ ನಂತರ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
ಇದನ್ನೂ ಓದಿ: Sheep farming loan Subsidy-ಕುರಿ ಸಾಕಾಣಿಕೆ ಆರಂಭಿಸಲು ಶೇ 50% ರಷ್ಟು ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Motorcycle repair workshop- ಬೈಕ್ ರಿಪೇರಿ ತರಬೇತಿಯು ಸಂಪೂರ್ಣ ಉಚಿತವಾಗಿರುತ್ತದೆ:
ಒಂದು ತಿಂಗಳ ಬೈಕ್ ರಿಪೇರಿ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು ಯಾವುದೇ ಬಗ್ಗೆಯ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತರಬೇತಿ ಸಂಸ್ಥೆಯಲ್ಲೆ ವಾಸ್ತವ್ಯ ಮಾಡಲು ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಒದಗಿಸಲಾಗುತ್ತದೆ.
Free two-wheeler repair training Application-ಎಲ್ಲಿ ಅರ್ಜಿ ಸಲ್ಲಿಸಬೇಕು?
ಆಸಕ್ತ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಎರಡು ಆಯ್ಕೆಗಳನ್ನು ಅನುಸರಿಸಿ ಅರ್ಜಿಯನ್ನು ಹಾಕಬವುದು ಒಂದು ಆನ್ಲೈನ್ ಮೂಲಕ ಈ ಲೇಖನದ ಕೊನೆಯಲ್ಲಿ ಹಾಕಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು ಇನ್ನೊಂದು ವಿಧಾನ ಎಂದರೆ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.
ಇದನ್ನೂ ಓದಿ: Best Insurance Plan-2024: ಸಾರ್ವಜನಿಕರಿಗೆ ಭರ್ಜರಿ ಆಫರ್! ಕೇವಲ ₹599ರೂಗೆ ₹5 ಲಕ್ಷ ವಿಮೆ ಪಡೆಯಲು ಅರ್ಜಿ!
Required documents for Training – ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
(1) ಅರ್ಜಿದಾರರ ಅಧಾರ್ ಕಾರ್ಡ.
(2) ಬ್ಯಾಂಕ್ ಪಾಸ್ ಬುಕ್ ಪ್ರತಿ.
(3) ರೇಶನ್ ಕಾರ್ಡ ಪ್ರತಿ.
(4) ಮೊಬೈಲ್ ಸಂಖ್ಯೆ.
Training date- ತರಬೇತಿ ನಡೆಯುವ ಅವಧಿ:
ಈ ತರಬೇತಿಯು ದಿನಾಂಕ: 08 ಜನವರಿ 2025 ರಿಂದ ಆರಂಭವಾಗಿ 06 ಜನವರಿ 2025ಕ್ಕೆ ಪೂರ್ಣಗೊಳ್ಳಲಿದೆ.
ಇದನ್ನೂ ಓದಿ: Snake bite-ಹಾವು ಕಚ್ಚಿದಾಗ ಯಾವ ಕ್ರಮ ಅನುಸರಿಸಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ!
Training Center Address- ತರಬೇತಿ ಏರ್ಪಡಿಸಿದ ಸ್ಥಳ:
ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343
ಇನ್ನು ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612
online application link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಪ್ರಥಮದಲ್ಲಿ ಈ Apply Now ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇದರಲ್ಲಿ ನಿಮ್ಮ ಹೆಸರು, ಇಮೇಲ್, ತಂದೆಯ ಹೆಸರು, ಮೊಬೈಲ್ ಸಂಖ್ಯೆ, ಇತರೆ ವಿವರವನ್ನು ಭರ್ತಿ ಮಾಡಿ ಕೊನೆಯ ಕಾಲಂ ನಲ್ಲಿ ತರಬೇತಿಯನ್ನು ಆಯ್ಕೆ ಮಾಡಿಕೊಂಡು ಕೊನೆಯಲ್ಲಿ ಕೆಳಗೆ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.
ಇದನ್ನೂ ಓದಿ: Digital Ration Card-ಅಧಿಕೃತ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಅಪ್ಲಿಕೇಶನ್ ಬಿಡುಗಡೆ!
Bank loan for Bike Repair Business- ಬ್ಯಾಂಕ್ ಸಾಲ ಪಡೆಯಲು ಮಾರ್ಗದರ್ಶ ವ್ಯವಸ್ಥೆ:
ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಈ ಕ್ಷೇತ್ರದಲ್ಲಿ ಸ್ವಂತ ಉದ್ದಿಮೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಹೂಡಿಕೆ ಮಾಡಲು ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಈ ಸಂಸ್ಥೆಯಿಂದ ಸಾಲವನ್ನು ಪಡೆಯಲು ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ.
ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಉಚಿತವಾಗಿ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಹಾಯಧನದಲ್ಲಿ ಸಾಲವನ್ನು ತೆಗೆದುಕೊಂಡು ಉದ್ಯಮಿಯನ್ನು ಆರಂಭಿಸಬಹುದು ಎಂದು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.