Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!

September 5, 2025 | Siddesh
Free CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ!
Share Now:

ನಿರುದ್ಯೋಗಿ ಯುವಕರಿಗೆ ಕೌಶಲ್ಯ ತರಬೇತಿಯನ್ನು ಒದಗಿಸಿ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಪ್ರಾಯೋಗಿಕ ಕಲಿಕಾ ತರಬೇತಿಯನ್ನು(Free cctv installation training) ಆರಂಭಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಂದರೆ ಮನೆ,ಕಚೇರಿ,ಗೋಡೌನ್ ಗಳಲ್ಲಿ ಸುರಕ್ಷತಾ ದೃಷ್ಠಿಯಿಂದ ಅತೀ ಹೆಚ್ಚಿನ ಜನರು ಸಿಸಿಟಿವಿ(CCTV) ಅಳವಡಿಕೆ ಯನ್ನು ಮಾಡಲು ಮುಂದೆ ಬರುತ್ತಿದ್ದಾರೆ ಈ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಹೆಚ್ಚು ಬೇಡಿಕೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ನಿರುದ್ಯೋಗಿ ಯುವಕರು ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆಯಿಂದ ಯೋಜನೆ ಮಾಡಿರುವ ಉಚಿತ ತರಬೇತಿಯ ಪ್ರಯೋಜನವನ್ನು ಪಡೆದು ಉತ್ತಮ ಆದಾಯವನ್ನು ಗಳಿಸಬಹುದು.

ಇದನ್ನೂ ಓದಿ: New GST Rates-ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ: ಟ್ರಾಕ್ಟರ್ ಖರೀದಿಯ ಮೇಲೆ GST ದರದಲ್ಲಿ ಭಾರೀ ಇಳಿಕೆ!

ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಯನ್ನು(CCTV Training) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply For Free cctv training course-ತರಬೇತಿಯನ್ನು ಪಡೆಯಲು ಅರ್ಹರು:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ಪ್ರಾಯೋಗಿಕ ಕಲಿಕಾ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅರ್ಹರು:

  • ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರು ತರಬೇತಿಯನ್ನು ಪಡೆದ ಬಳಿಕ ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
  • ಬಿಪಿಎಲ್ ಕಾರ್ಡ ಅನ್ನು ಹೊಂದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಭಾಗವಹಿಸಬಹುದು.
  • ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
  • ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Property Registration Fee-ರಾಜ್ಯ ಸರಕಾರದಿಂದ ಆಸ್ತಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ!

Free cctv installation training

Free cctv training course with certificate-ಪ್ರಮಾಣ ಪತ್ರ ವಿತರಣೆ:

ಒಮ್ಮೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Cctv installation training Date-ತರಬೇತಿ ಪ್ರಾರಂಭ ದಿನಾಂಕ:

ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಯು ದಿನಾಂಕ : 08 ಸೆಪ್ಟೆಂಬರ್ 2025 ರಿಂದ ಆರಂಭವಾಗಿ ದಿನಾಂಕಕ್ಕೆ : 21 ಸೆಪ್ಟೆಂಬರ್ 2025 ಮುಕ್ತಾಯವಾಗುತ್ತದೆ ಒಟ್ಟು 13 ದಿನಗಳ ತರಬೇತಿ ಇದಾಗಿರುತ್ತದೆ.

ಇದನ್ನೂ ಓದಿ: LIC Scholarship- ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ!ಎಲ್ಐಸಿಯಿಂದ ₹ 40,000 ವಿದ್ಯಾರ್ಥಿವೇತನ!

Free cctv training Interview-ತರಬೇತಿಯಲ್ಲಿ ಭಾಗವಹಿಸಲು ನೇರ ಸಂದರ್ಶನ:

ಆಸಕ್ತಿಯುಳ್ಳ, ಅಭ್ಯರ್ಥಿಗಳು ದಿನಾಂಕ: 08 ಸೆಪ್ಟೆಂಬರ್ 2025 ಸೋಮವಾರ ಬೆಳಗ್ಗೆ, 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿ ಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಭಾಗವಹಿಸಿ ನೇರ ಸಂದರ್ಶನದಲ್ಲಿ ಪಾಲ್ಗೊಂಡು ತರಬೇತಿಯಲ್ಲಿ ಭಾಗವಹಿಸಬಹುದು.

CCTV Training Center Address-ತರಬೇತಿ ಕೇಂದ್ರದ ವಿಳಾಸ:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ.

ಇದನ್ನೂ ಓದಿ: Godown Subsidy-ಹಳ್ಳಿಯಲ್ಲಿ ಗೋಡೌನ್ ನಿರ್ಮಾಣಕ್ಕೆ ಶೇ 33% ಸಬ್ಸಿಡಿ ಪಡೆಯಲು ಅವಕಾಶ!

Free cctv training-ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ:

ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿಯನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ತರಬೇತಿ ಕೇಂದ್ರದಲ್ಲೇ ಉಚಿತವಾಗಿ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಸ್ಥೆಯಿಂದ ಕಲ್ಪಿಸಲಾಗಿದ್ದು ತರಬೇತಿ ಪಡೆಯಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ.

Free cctv training Helpline-ಉಚಿತ ತರಬೇತಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ದೂರವಾಣಿ ಸಂಖ್ಯೆಗೆ 8970476050 ಸಂಪರ್ಕಿಸಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: