Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!

August 14, 2026 | Siddesh
Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!
Share Now:

ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಬಯಸುವ ಗ್ರಾಮೀಣ ಹಾಗೂ ನಗರ ಭಾಗದ ಯುವಕರಿಗೆ ಕೆನರಾ ಬ್ಯಾಂಕ್‌ ಮಹತ್ವದ ಅವಕಾಶವೊಂದನ್ನು ಒದಗಿಸಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ನಿರುದ್ಯೋಗಿ ಪುರುಷರಿಗಾಗಿ ಉಚಿತ ಸಿಸಿಟಿವಿ ಅಳವಡಿಕೆ (CCTV Installation Training) ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು ಆಸಕ್ತ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸ್ವಂತ ಉದ್ಯಮ ಪ್ರಾರಂಭಿಸುವ ಆಸಕ್ತಿಯಿರುವ 18 ರಿಂದ 49 ವರ್ಷ ವಯೋಮಾನದ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ತರಬೇತಿ(Free CCTV Installation Training) ಕಾರ್ಯಕ್ರಮದ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ತರಬೇತಿಯ ಜೊತೆಗೆ, ಉಚಿತ ಊಟ ಮತ್ತು ವಸತಿ ಸೌಕರ್ಯಗಳನ್ನು ಸಂಸ್ಥೆಯ ವತಿಯಿಂದಲೇ ಕಲ್ಪಿಸಲಾಗುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: Azim Premji Scholarship-ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನ!

ಈ ತರಬೇತಿ ಶಿಬಿರಕ್ಕೆ ಆಯ್ಕೆಯಾಗಲು ಬಯಸುವ ಆಸಕ್ತ ಅಭ್ಯರ್ಥಿಗಳು 2026ರ ಆಗಸ್ಟ್ 20ರ ಗುರುವಾರ ಬೆಳಿಗ್ಗೆ 9:30ಕ್ಕೆ ತಮ್ಮ ವಿದ್ಯಾರ್ಹತೆ ಹಾಗೂ ವಿಳಾಸದ ಮೂಲ ದಾಖಲೆಗಳೊಂದಿಗೆ ನೇರವಾಗಿ ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕಿದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ವತಿಯಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು (Certificate) ವಿತರಿಸಲಾಗುತ್ತದೆ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಯಲ್ಲಿ ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಿ ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಳ್ಳಬಹುದು ಎನ್ನುವ ವಿವರ ಹೀಗಿದೆ:

  • ಅರ್ಜಿದಾರ ಅಭ್ಯರ್ಥಿಗಳು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಬಿಪಿಎಲ್ ಕಾರ್ಡ ಹೊಂದಿರುವ ಮತ್ತು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇರುತ್ತದೆ.
  • ಅರ್ಜಿದಾರ ಅಭ್ಯರ್ಥಿಯ ವಯಸ್ಸು 18 ರಿಂದ 49 ವರ್ಷದ ಒಳಗಿರಬೇಕು.
  • ತರಬೇತಿಯನ್ನು ಪಡೆದ ಬಳಿಕ ಸ್ವಂತ ಉದ್ಯೋಗವನ್ನು ಆರಂಭಿಸುವವರಿಗೆ ಮೊದಲ ಆದ್ಯತೆ ಇರುತ್ತದೆ.

ಇದನ್ನೂ ಓದಿ: Free Sewing Machine Scheme-ಈ ಜಿಲ್ಲೆಯ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

ಇದನ್ನೂ ಓದಿ: SSP Scholarship-2026: ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Application Last Date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಆಗಸ್ಟ್ 2026

ಸಂದರ್ಶನ ನಡೆಯುವ ಸ್ಥಳ ಮತ್ತು ತರಬೇತಿ ಕೇಂದ್ರದ ವಿಳಾಸ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ,
ಸೊನ್ನೇನಹಳ್ಳಿಪುರ, ಹಸಿಗಾಲ (ಅಂಚೆ),
ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ - 562114

Free CCTV Installation Training In Karnataka-ವಿಶೇಷ ಸೂಚನೆ:

ನೇರ ಸಂದರ್ಶನಕ್ಕೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳು ದಿನಾಂಕ 20 ಆಗಸ್ಟ್ 2026ರ ಒಳಗೆ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ: Free Heavy Vehicle Training-ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Contact Numbers-ಸಂಪರ್ಕಿಸಬೇಕಾದ ಫೋನ್ ಸಂಖ್ಯೆಗಳು:

8970476050, 9591514154, 6363139123, 9686248369, 9886935603

Required Documents-ತರಬೇತಿಯಲ್ಲಿ ಭಾಗವಹಿಸಲು ಅವಶ್ಯಕ ದಾಖಲೆಗಳು:

ನೋಂದಣಿಯನ್ನು ಮಾಡಿಕೊಳ್ಳಲು ಮತ್ತು ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ:

  • ಅಭ್ಯರ್ಥಿಯ ಆಧಾರ್ ಕಾರ್ಡ್/Aadhar
  • ಬ್ಯಾಂಕ್ ಪಾಸ್ ಬುಕ್/Bank Pass Book
  • ರೇಶನ್ ಕಾರ್ಡ/Ration Card
  • ಬ್ಯಾಂಕ್ ಪಾಸ್ ಬುಕ್/Bank Pass Book
  • ಮೊಬೈಲ್ ನಂಬರ್/Mobile Number

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: