Free Computer Courses-38 ದಿನದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

April 17, 2026 | Siddesh
Free Computer Courses-38 ದಿನದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!
Share Now:

ಕೋಲಾರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಕೇವಲ ಪದವಿ ಸಾಕಾಗುವುದಿಲ್ಲ, ಅದರೊಂದಿಗೆ ವೃತ್ತಿಪರ ಕೌಶಲವೂ ಅತಿ ಮುಖ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೆನರಾ ಬ್ಯಾಂಕ್(Canara Bank)ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು (RSETI) 38 ದಿನಗಳ ಕಾಲ ಉಚಿತ ಕಂಪ್ಯೂಟರ್ ಟ್ಯಾಲಿ ಮತ್ತು ಅಕೌಂಟಿಂಗ್ ತರಬೇತಿಯನ್ನು ಆಯೋಜಿಸಿದೆ. ಏಪ್ರಿಲ್ 21, 2026 ರಿಂದ ಈ ತರಬೇತಿ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ತರಬೇತಿ ಶಿಬಿರದ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ(Computer Tally Course). ಸಂಪೂರ್ಣ ಉಚಿತವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಸಂಸ್ಥೆಯ ವತಿಯಿಂದಲೇ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ವಿತರಿಸಲಾಗುವುದು, ಇದು ಮುಂದಿನ ಉದ್ಯೋಗಾವಕಾಶಗಳಿಗೆ ಭದ್ರ ಬುನಾದಿಯಾಗಲಿದೆ.

ಇದನ್ನೂ ಓದಿ: PM-Kisan Application-ಪಿಎಂ ಕಿಸಾನ್ ಹೊಸ ಅರ್ಜಿ ಸಲ್ಲಿಸಲು ಅವಕಾಶ! ಇಂದೇ ಅರ್ಜಿ ಸಲ್ಲಿಸಿ!

ಕೋಲಾರ ಜಿಲ್ಲೆಯ ಹೊನ್ನೇನಹಳ್ಳಿಯಲ್ಲಿರುವ ತರಬೇತಿ ಕೇಂದ್ರದಲ್ಲಿ ಈ ಶಿಬಿರ ನಡೆಯಲಿದ್ದು, ಆಸಕ್ತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್ ಮತ್ತು ಫೋಟೋಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗಾಗಿ 8971308776 ಅಥವಾ 7760313833 ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು. ವೃತ್ತಿ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವ ಈ ಅವಕಾಶವನ್ನು ಜಿಲ್ಲೆಯ ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಲಾಗಿದೆ.

Free Computer Training Date-ತರಬೇತಿ ಪ್ರಾರಂಭ ದಿನಾಂಕ:

ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಯು ದಿನಾಂಕ 21 ಎಪ್ರಿಲ್ 2026 ರಿಂದ ಪ್ರಾರಂಭವಾಗಿ 38 ದಿನದ ವರೆಗೆ ನಡೆಯಲಿದೆ.

ಇದನ್ನೂ ಓದಿ: 2nd Puc Exam-2: ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಧಿಕೃತ ದಿನಾಂಕ ಪ್ರಕಟ!

Free Computer Courses

ಇದನ್ನೂ ಓದಿ: BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

Free Computer Tally Course-ಯಾವುದೇ ಶುಲ್ಕ ಪಾವತಿಯಿಲ್ಲ:

ಉಚಿತ ಕಂಪ್ಯೂಟರ್ ಟ್ಯಾಲಿ/ಅಕೌಂಟಿಂಗ್ ತರಬೇತಿಯನ್ನು ಪಡೆಯಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಸಂಪೂರ್ಣ ಉಚಿತ ತರಬೇತಿ ಇದಾಗಿದೆ.

Full Free Computer Courses-ಉಚಿತ ವಸತಿ-ಊಟ ಸೌಲಭ್ಯ:

ಕಂಪ್ಯೂಟರ್ ಟ್ಯಾಲಿ/ಅಕೌಂಟಿಂಗ್ ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಕೇಂದ್ರದಲ್ಲೇ ತರಬೇತಿ ಸಮಯದಲ್ಲಿ ವಾಸ್ತವ್ಯ ಮಾಡಲು ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bapuji Seva Kendra-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನೂತನ ವ್ಯವಸ್ಥೆ ಜಾರಿ!

"ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ ಗ್ರಾಮೀಣ ಭಾಗದ ಯುವಜನತೆಗೆ ಕೌಶಲ ಆಧಾರಿತ ಶಿಕ್ಷಣ ನೀಡಿ ಅವರನ್ನು ಉದ್ಯಮಶೀಲರನ್ನಾಗಿ ಮಾಡುವುದು. ಈ ಬಾರಿ ಆಯೋಜಿಸಿರುವ 38 ದಿನಗಳ ಟ್ಯಾಲಿ ತರಬೇತಿಯು ಪ್ರಾಯೋಗಿಕ ಜ್ಞಾನಕ್ಕೆ ಹೆಚ್ಚು ಒತ್ತು ನೀಡಲಿದೆ. ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಯಾವುದೇ ತೊಂದರೆಯಾಗದಂತೆ ಉತ್ತಮ ವಸತಿ ಮತ್ತು ಪೌಷ್ಟಿಕ ಊಟದ ವ್ಯವಸ್ಥೆ ಮಾಡಲಾಗಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ಸದವಕಾಶವನ್ನು ಬಳಸಿಕೊಂಡು ಸ್ವಯಂ ಉದ್ಯೋಗದ ಹಾದಿ ಕಂಡುಕೊಳ್ಳಬೇಕು." — ನಿರ್ದೇಶಕರು, ಕೆನರಾ ಬ್ಯಾಂಕ್ ಆರ್ಸೆಟಿ, ಕೋಲಾರ.

Training Certificate-ಪ್ರಮಾಣ ಪತ್ರ ವಿತರಣೆ:

ತರಬೇತಿಯನ್ನು ಪಡೆಯಲು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿಯನ್ನು ಪಡೆದ ಬಳಿಕ ಕೇಂದ್ರ ಸರ್ಕಾರದ ಮಾನ್ಯತೆ ಹೊಂದಿರುವ ಪ್ರಮಾಣ ಪತ್ರವನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

Who Can Apply-ತರಬೇತಿಯಲ್ಲಿ ಭಾಗವಹಿಸುವುದು ಹೇಗೆ?

ಉಚಿತ ಕಂಪ್ಯೂಟರ್ ಟ್ಯಾಲಿ/ಅಕೌಂಟಿಂಗ್ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಳ್ಳಲು ಇಲ್ಲಿ 8971308776 ಅಥವಾ 7760313833 ನೀಡಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ: Skill Training-24 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ!

Rseti Training Center Address-ತರಬೇತಿ ಕೇಂದ್ರ ವಿಳಾಸ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹೊನ್ನೇನಹಳ್ಳಿ ಕೋಲಾರ ತಾಲ್ಲೂಕು& ಜಿಲ್ಲೆ-563103 ಕೇಂದ್ರದಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ/ಅಕೌಂಟಿಂಗ್ ತರಬೇತಿಯನ್ನು ಏರ್ಪಡಿಸಲಾಗಿದೆ.

"ನಾನು ಕಳೆದ ವರ್ಷ ಇದೇ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದೇನೆ. ಮೊದಲು ನನಗೆ ಕಂಪ್ಯೂಟರ್ ಅಕೌಂಟಿಂಗ್ ಬಗ್ಗೆ ಅಷ್ಟಾಗಿ ಅರಿವಿರಲಿಲ್ಲ. ಆದರೆ ಇಲ್ಲಿನ ತರಬೇತುದಾರರು ಬಹಳ ಸರಳವಾಗಿ ಟ್ಯಾಲಿ ಮತ್ತು ಅಕೌಂಟಿಂಗ್ ಕಲಿಸಿಕೊಟ್ಟರು. ಇಲ್ಲಿನ ವಸತಿ ಮತ್ತು ಊಟದ ವ್ಯವಸ್ಥೆ ತುಂಬಾ ಚೆನ್ನಾಗಿದೆ. ಇಲ್ಲಿ ಸಿಕ್ಕ ಪ್ರಮಾಣಪತ್ರದಿಂದಾಗಿ ಇಂದು ನಾನು ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದೇನೆ. ನನ್ನಂತಹ ಸಾಮಾನ್ಯ ಯುವಕರಿಗೆ ಇದೊಂದು ಅತ್ಯುತ್ತಮ ವೇದಿಕೆ." — ರಮೇಶ್ ಕೆ., ಮಾಜಿ ಶಿಬಿರಾರ್ಥಿ.

ಇದನ್ನೂ ಓದಿ: Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

Documents For Free Computer Training-ಅವಶ್ಯಕ ದಾಖಲೆಗಳು ಯಾವುವು?

  • ಅಭ್ಯರ್ಥಿಯ ಆಧಾರ್ ಕಾರ್ಡ
  • ಬ್ಯಾಂಕ್ ಪಾಸ್ ಬುಕ್
  • ರೇಶನ್ ಕಾರ್ಡ್
  • ಅಭ್ಯರ್ಥಿಯ ಪೋಟೋ-3
  • ಮೊಬೈಲ್ ನಂಬರ್

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: