Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!

February 5, 2026 | Siddesh
Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!
Share Now:

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅರ್ಹ ನಿರುದ್ಯೋಗಿ ಯುವಕರಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ ಪ್ರಮಾಣ ಪತ್ರವನ್ನು(Free Heavy Vehicle Driving Training)ವಿತರಣೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಸ್ವಂತ ಕಾಲಿನ ಮೇಲೆ ನಿಲ್ಲಬೇಕು, ಗೌರವಯುತವಾದ ಉದ್ಯೋಗ ಪಡೆಯಬೇಕು ಎಂಬ ಹಂಬಲವಿರುವ ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ PM-AJAY ಪ್ರಧಾನ ಮಂತ್ರಿ ಅನುಸೂಚಿತ ಜಾತಿ ಅಭ್ಯುದಯ ಯೋಜನೆ ಅಡಿಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಉಚಿತವಾಗಿ ಭಾರೀ ವಾಹನ ಚಾಲನಾ ತರಬೇತಿ (Heavy Vehicle Driving Training) ಮತ್ತು ಪರವಾನಗಿ ನೀಡುವ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರಸ್ತುತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ"ಸ್ತ್ರೀ ಶಕ್ತಿ ಪ್ಯಾಕೇಜ್"! ಇಲ್ಲಿದೆ ಸಂಪೂರ್ಣ ಮಾಹಿತಿ!

ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ(Free Driving Training Application) ಮತ್ತು ಪರವಾನಗಿ ಪತ್ರವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿಯಲ್ಲಿ ಯಾವೆಲ್ಲ ವಿಷಯಗಳ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ? ತರಬೇತಿ ಪಡೆಯುವುದರಿಂದ ಯಾವೆಲ್ಲ ಪ್ರಯೋಜನಗಳಿವೆ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳು ಯಾವುವು? ಎನ್ನುವ ವಿಷಯದ ಕುರಿತು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

Heavy Vehicle Driving Training Details-ತರಬೇತಿಯಲ್ಲಿ ಯಾವೆಲ್ಲ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ?

ಒಂದು ತಿಂಗಳ ಅವಧಿಯ ಈ ತರಬೇತಿಯಲ್ಲಿ ಅಭ್ಯರ್ಥಿಗಳನ್ನು ಪರಿಣಿತ ಚಾಲಕರನ್ನಾಗಿ ರೂಪಿಸಲು ವೈಜ್ಞಾನಿಕ ಕ್ರಮಗಳನ್ನು ಅನುಸರಿಸಲಾಗುತ್ತದೆ.

ದೊಡ್ಡ ಬಸ್‌ಗಳು ಮತ್ತು ಭಾರೀ ವಾಹನಗಳನ್ನು ಸುರಕ್ಷಿತವಾಗಿ ಚಾಲನೆ ಮಾಡುವ ಬಗ್ಗೆ ಪ್ರಾಯೋಗಿಕವಾಗಿ ತರಬೇತಿಯನ್ನು ನೀಡಲಾಗುತ್ತದೆ.

ಸಂಚಾರಿ ನಿಯಮಗಳು, ಸಿಗ್ನಲ್‌ಗಳು ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಹಾಗೂ ರಸ್ತೆ ಸುರಕ್ಷತೆ ಮತ್ತು ನಿಯಮಗಳು ಕುರಿತು ಸಂಪೂರ್ಣ ಮಾಹಿತಿ ತಿಳಿಸಲಾಗುತ್ತದೆ.

ಇಂಜಿನ್‌ನ ಮೂಲಭೂತ ಕಾರ್ಯವೈಖರಿ, ಸಣ್ಣಪುಟ್ಟ ದುರಸ್ತಿಗಳು ಮತ್ತು ವಾಹನದ ನಿರ್ವಹಣೆಯ ಕುರಿತು ತರಬೇತಿ ನೀಡಲಾಗುತ್ತದೆ.

ಪ್ರಯಾಣಿಕರೊಂದಿಗೆ ವರ್ತಿಸುವ ರೀತಿ ಮತ್ತು ವೃತ್ತಿಪರ ಚಾಲಕನಿಗೆ ಇರಬೇಕಾದ ಶಿಸ್ತು ಮತ್ತು ಸಾರ್ವಜನಿಕ ನಡವಳಿಕೆ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ.

ಇದನ್ನೂ ಓದಿ: SSP Scholarship-ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅರ್ಜಿ ಸಲ್ಲಿಸುವ ಗಡುವು ವಿಸ್ತರಣೆ!

Heavy Vehicle Driving Training Benefits-ತರಬೇತಿ ಪಡೆಯುವುದರಿಂದ ಆಗುವ ಪ್ರಯೋಜನಗಳೇನು?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತರಬೇತಿಯಲಿಇ ಭಾಗವಹಿಸುವುದರಿಂದ ಯಾವುದೇ ಶುಲ್ಕವಿಲ್ಲದೆ ದುಬಾರಿ ಎನಿಸುವ ಭಾರೀ ವಾಹನ ಚಾಲನಾ ಪರವಾನಗಿಯನ್ನು (DL) ಆರ್‌ಟಿಒ (RTO) ಸಹಯೋಗದೊಂದಿಗೆ ಪಡೆಯಬಹುದು.

ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ ಮತ್ತು ಪೌಷ್ಟಿಕ ಆಹಾರದ ವ್ಯವಸ್ಥೆ ಇರಲಿದೆ.

ತರಬೇತಿ ಪಡೆದ ಅಭ್ಯರ್ಥಿಗಳು ಕೆಎಸ್‌ಆರ್‌ಟಿಸಿ ಸೇರಿದಂತೆ ಖಾಸಗಿ ಸಾರಿಗೆ ಸಂಸ್ಥೆಗಳು, ಲಾಜಿಸ್ಟಿಕ್ಸ್ ಕಂಪನಿಗಳಲ್ಲಿ ಚಾಲಕರಾಗಿ ಕೆಲಸ ಪಡೆಯಲು ಪ್ರಮಾಣ ಪತ್ರ ಸೇರಿದಂತೆ ಇನ್ನಿತರೆ ಅವಶ್ಯವಿರುವ ಅರ್ಹತೆಗಳನ್ನು ಪಡೆದುಕೊಳ್ಳುತ್ತಾರೆ.

ತರಬೇತಿಯ ನಂತರ ಸ್ವಂತವಾಗಿ ಭಾರೀ ವಾಹನಗಳನ್ನು ಖರೀದಿಸಿ ಉದ್ಯಮ ಆರಂಭಿಸಲು ಇದು ಸಹಕಾರಿ.

ಇದನ್ನೂ ಓದಿ: Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

Heavy Vehicle Driving Training

Heavy Vehicle Driving Training Eligibility-ಅರ್ಜಿ ಸಲ್ಲಿಸಲು ಯಾರು ಅರ್ಹರು?

ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿವೆ:

ಅಭ್ಯರ್ಥಿಯು ಪರಿಶಿಷ್ಟ ಜಾತಿ (SC) ಸಮುದಾಯಕ್ಕೆ ಸೇರಿದವರಾಗಿರಬೇಕು.

ಅಭ್ಯರ್ಥಿಯ ಗರಿಷ್ಠ ವಯೋಮಿತಿ 45 ವರ್ಷಗಳು.

ಅಭ್ಯರ್ಥಿಯು ಲಘು ಮೋಟಾರು ವಾಹನ (LMV) ಚಾಲನಾ ಪರವಾನಗಿ ಹೊಂದಿರುವುದು ಮತ್ತು ಕನಿಷ್ಠ ವಿದ್ಯಾರ್ಹತೆ ಹೊಂದಿರುವುದು ಅವಶ್ಯಕ (ಸಾರಿಗೆ ನಿಯಮದಂತೆ).

ಇದನ್ನೂ ಓದಿ: Lakhpati Didi-ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್! ಏನಿದು ಲಖ್ ಪತಿ ದೀದಿ ಮತ್ತು ಶಿ-ಮಾರ್ಟ್ ಯೋಜನೆ?

Required Documents for Heavy Vehicle Driving Training-ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

ಉಚಿತ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಈ ಕೆಳಗಿನಂತಿವೆ:

ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

ಆಧಾರ್ ಕಾರ್ಡ್.

ವಿದ್ಯಾರ್ಹತೆಯ ಅಂಕಪಟ್ಟಿ (ಎಸ್.ಎಸ್.ಎಲ್.ಸಿ ಅಥವಾ ಸಂಬಂಧಿತ).

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋಗಳು.

ಇದನ್ನೂ ಓದಿ: PM Kisan Tractor Yojana-ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ 50% ಸಬ್ಸಿಡಿ! ಅರ್ಜಿ ಸಲ್ಲಿಸುವುದು ಹೇಗೆ?

Online Application For Heavy Vehicle Driving Training-ಅರ್ಜಿ ಸಲ್ಲಿಸುವುದು ಹೇಗೆ?

Step-1: ಅರ್ಹ ಅಭ್ಯರ್ಥಿಗಳು ಮೊದಲಿಗೆ ಈ "Online Application For Heavy Vehicle Driving Training" ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಕೆಎಸ್‌ಆರ್‌ಟಿಸಿಯ ವೆಬ್‌ಸೈಟ್ ksrtcjobs.karnataka.gov.in ಅನ್ನು ಭೇಟಿ ಮಾಡಿ.

Step-2: ಈ ಪೇಜ್ ನಲ್ಲಿ "PMAJAY-ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಪಡೆಯಲು ಮಾಹಿತಿ ಸಲ್ಲಿಕೆ" ಎಂದು ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರು ಇನ್ನಿತರೆ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣಿಸುವ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ.

For More Information-ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ನಿಮ್ಮ ಜಿಲ್ಲೆಯ ಅಥವಾ ಹತ್ತಿರದ ತರಬೇತಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ: ಮಾಲೂರು: 7760994432, ಚಿಕ್ಕಮಗಳೂರು: 9606037746, ಮಳವಳ್ಳಿ: 7760990137, ಹಾಸನ: 7760990533,ಹೊಳಲ್ಕೆರೆ: 7019072560

ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯು ಗ್ರಾಮೀಣ ಮತ್ತು ನಗರ ಭಾಗದ ಯುವಕರಿಗೆ ಆರ್ಥಿಕ ಸ್ವಾತಂತ್ರ್ಯ ನೀಡುವ ಉದ್ದೇಶ ಹೊಂದಿದೆ. ತರಬೇತಿ ಕೇಂದ್ರಗಳಲ್ಲಿ ಸೀಮಿತ ಅವಕಾಶಗಳಿರುವುದರಿಂದ ಅರ್ಹ ಅಭ್ಯರ್ಥಿಗಳು ವಿಳಂಬ ಮಾಡದೆ ತಕ್ಷಣವೇ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಪ್ರಯೋಜನ ಪಡೆಯಲು ಕೋರಲಾಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: