Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

December 18, 2025 | Siddesh
Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!
Share Now:

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ(Christian community free drone training) ನಿಗಮ ನಿಯಮಿತದ ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಯುವಕರಿಗೆ ಉಚಿತವಾಗಿ 15 ದಿನಗಳ ವಸತಿ ಸಹಿತ ಸಂಪೂರ್ಣ ಡ್ರೋನ್ ತರಬೇತಿಯನ್ನು ಪಡೆಯಲು ಅರ್ಹ ಯುವಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮವನ್ನು ಕರ್ನಾಟಕದ 4 ಕಂದಾಯ ವಿಭಾಗಗಳಲ್ಲಿ ನಡೆಸಲಾಗಿದ್ದು, ಡ್ರೋನ್ ಕಾರ್ಯಾಚರಣೆಯಲ್ಲಿ(free drone training India) ಪ್ರಾಯೋಗಿಕ ಹಾಗೂ ಉದ್ಯೋಗಾರ್ಹ ಕೌಶಲ್ಯಗಳನ್ನು ನೀಡುವ ಜೊತೆಗೆ, ಡ್ರೋನ್‌ ವಲಯದಲ್ಲಿನ ಉದ್ಯಮಶೀಲತಾ ಅವಕಾಶಗಳನ್ನು ಅನ್ವೇಷಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಇದನ್ನೂ ಓದಿ: Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?

ಪ್ರಸ್ತುತ ಈ ಲೇಖನದಲ್ಲಿ ಈ ಯೋಜನೆಯ ಅಡಿಯಲ್ಲಿ ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿಯನ್ನು ಸಲ್ಲಿಸುವ ವಿಧಾನಗಳು? ಅರ್ಜಿಗೆ ಸಂಬದಿಸಿದ ಅವಶ್ಯಕ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಸಂಪುರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಡಿಸೆಂಬರ್ 2025

ಇದನ್ನೂ ಓದಿ: Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!

Eligibility critiria for this scheme-ಅರ್ಜಿ ಸಲ್ಲಿಸಲು ಯಾವೆಲ್ಲ ಮಾನದಂಡಗಳನ್ನು ಪಾಲಿಸಬೇಕು?

ಅರ್ಜಿದಾರರು 1೦ನೇ ತರಗತಿಯಲ್ಲಿ ಉತ್ತೀರ್ಣಗೊಂಡಿರಬೇಕು.

ಅರ್ಜಿದಾರ ಯುವಕರ ವಯೋಮಿತಿಯು ಕನಿಷ್ಟ 18 ವರ್ಷ ರಿಂದ 45 ವರ್ಷದ ಒಳಗಿರಬೇಕು.

ಎಲ್ಲಾ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿಪರ ತರಬೇತಿಯನ್ನು ಪಡೆದಿದ್ದರೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅಭ್ಯರ್ಥಿಯ ವಾರ್ಷಿಕ ಕುಟುಂಬದ ಆದಾಯ ರೂ.6 ಲಕ್ಷ ದ ಒಳಗಿರಬೇಕು.

ತರಬೇತಿಯನ್ನು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ವಲಯ ಮತ್ತು ಮಾನ್ಯತೆ ಪಡೆದ ಖಾಸಗಿ ಸಂಸ್ಥೆಗಳಿಂದ ನೀಡಲಾಗುವುದು.

ಇದನ್ನೂ ಓದಿ: NLM Subsidy Yojana-NLM ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ!

free drone training class

ಇದನ್ನೂ ಓದಿ: Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

What are the documents required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಅರ್ಹ ಅಭ್ಯರ್ಥಿಯು ಈ ಕೆಳಗೆ ತಿಳಿಸಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.

ಅಭ್ಯರ್ಥಿಯ ಆಧಾರ್ ಕಾರ್ಡ/Aadhar Card

10 ತರಗತಿ ಅಂಕಪಟ್ಟಿ/10 Marks Card

ಸ್ವಯಂ ಘೋಷಣೆ ಪ್ರತಿ/Self declaration copy

ಅಭ್ಯರ್ಥಿಯ ಭಾವಚಿತ್ರ/Photo copy

ಮೊಬೈಲ್ ನಂಬರ್/Mobile Number

ಇದನ್ನೂ ಓದಿ: PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Online Application Process-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ:

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಆಯ್ಕೆಯಾದ ಆಸಕ್ತ ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಕೆಳಗೆ ತಿಳಿಸಿರುವ ವಿಧಾನಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು.

Step-1: ತರಬೇತಿ ಪಡೆಯಲು ಅರ್ಹರಿರುವ ಯುವಕರು ಮೊದಲಿಗೆ "Online Application" ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ "ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ"ದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ತದನಂತರ ಅದೇ ಪುಟದಲ್ಲಿ ಕಾಣುವ "ಡ್ರೋನ್ ತರಬೇತಿ" ಯ ಆಯ್ಕೆಯ ಮುಂದೆ ಕಾಣಿಸುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ನಿವೇನಾದರು ಮೊದಲ ಬಾರಿಗೆ ಈ ವೆಬ್ಸೈಟ್ ಅನ್ನು ಭೇಟಿ ಮಾಡುತ್ತಿದ್ದರೆ? ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು Password ಅನ್ನು ಸಿದ್ದ ಮಾಡಿಕೊಂಡು Log In ಆಗಬೇಕು.

Step-4: ಲಾಗಿನ್ ಆದ ನಂತರ ಅಧಿಕೃತ ಅರ್ಜಿ ಪ್ರತಿ ತೆರೆದುಕೊಳ್ಳುತ್ತದೆ. ನಂತರ ಅಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

For More Information-ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಪಡೆಯಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: