Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

May 28, 2025 | Siddesh
Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!
Share Now:

2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ(Free Hostel) ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಳ್ಳಿಯಿಂದ ಪಟ್ಟಣಕ್ಕೆ ಸರಿಯಾದ ಬಸ್ ವ್ಯವಸ್ಥೆಯಿಲ್ಲದ ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಕಾರಣದಿಂದ ಮನೆಯಿಂದ ಶಾಲೆಗೆ(Free Hostel Application) ಹೋಗಲು ಅಧಿಕ ಸಮಯವನ್ನು ತೆಗೆದುಕೊಳ್ಳುವಂತ ಸನ್ನಿವೇಶದಲ್ಲಿರುವ ವಿದ್ಯಾರ್ಥಿಗಳು ಪಟ್ಟಣ ಪ್ರದೇಶದಲ್ಲಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡಲು ಉಚಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

ಪ್ರಸ್ತುತ ಈ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯಗಳ(Free Hostel Admission)ಪ್ರವೇಶಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು,ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ,ಯಾವೆಲ್ಲ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ?
ಇನ್ನಿತರೆ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Free Hostel List-ನಿಮ್ಮ ಜಿಲ್ಲೆಯಲ್ಲಿ ಯಾವೆಲ್ಲ ಸ್ಥಳದಲ್ಲಿ ವಿದ್ಯಾರ್ಥಿನಿಲಯಗಳು ಇವೆ ಎಂದು ತಿಳಿಯುವ ವಿಧಾನ:

ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವೆಲ್ಲ ಭಾಗದಲ್ಲಿ ವಿದ್ಯಾರ್ಥಿನಿಲಯಗಳು ಇವೆ ಮತ್ತು ಲಭ್ಯ ಸೀಟಿಗಳ ಮಾಹಿತಿ ಸೇರಿದಂತೆ ಸಂಪೂರ್ಣ ವಿವರವನ್ನು ಮೊಬೈಲ್ ನಲ್ಲೇ ತಿಳಿಯಲು ಅವಕಾಶವಿದ್ದು ಇದಕ್ಕಾಗಿ ಈ Karnataka Free Hostel List ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕು ಅನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಥಿನಿಲಯಗಳ ಪಟ್ಟಿಯನ್ನು ನೋಡಬಹುದಾಗಿದೆ.

ಇದನ್ನೂ ಓದಿ: Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Last Date-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ-27 ಮೇ 2025

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ- 31 ಆಗಸ್ಟ್ 2025

Documenst For Free Hostel-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ವಿದ್ಯಾರ್ಥಿಯ ಎಸ್ ಎಸ್ ಪಿ ಐಡಿ ಸಂಖ್ಯೆ/SSP Student ID
  • ಜಾತಿ ಪ್ರಮಾಣ ಪತ್ರ/Caste RD Number
  • ಆದಾಯ ಪ್ರಮಾಣ ಪತ್ರ/Income RD Number
  • ಶಾಲಾ ದಾಖಲಾತಿ/University Registration Number
  • ಮೊಬೈಲ್ ನಂಬರ್/Mobile Number
  • ನಿವಾಸ ದೃಡೀಕರಣ/Contact Address

ಇದನ್ನೂ ಓದಿ: Diesel Pump Subsidy-ಶೇ 90% ಸಬ್ಸಿಡಿಯಲ್ಲಿ ಡಿಸೇಲ್ ಪಂಪ್ ಪಡೆಯಲು ಅರ್ಜಿ!

Online Apply Method For Free Hostel-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

Step-1: ಪ್ರಥಮದಲ್ಲಿ ವಿದ್ಯಾರ್ಥಿಗಳು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಿ ಇಲ್ಲಿ ಮೇಲೆ ಕಾಣುವ "2025-26ನೇ ಸಾಲಿನ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ" ಈ ರೀತಿಯ ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Free Hostel

ಇದನ್ನೂ ಓದಿ: PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

Step-2: ನಂತರ ಈ ಪೇಜ್ ನಲ್ಲಿ ವಿದ್ಯಾರ್ಥಿಯು ತಮ್ಮ SWD ID ಮತ್ತು Password ಅನ್ನು ಹಾಕಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಅಗಬೇಕು.

ಗಮನಿಸಿ: ಬಳಕೆದಾರ ಐಡಿಯನ್ನು ರಚನೆ ಮಾಡಿಕೊಳ್ಳದವರು ಇದೆ ಪೇಜ್ ನಲ್ಲಿ "Login" ಬಟನ್ ಕೆಳಗೆ ಕಾಣುವ "Register" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಬಳಕೆದಾರ ಐಡಿಯನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-3: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

Karanataka Free Hostel Admission-ಯಾವೆಲ್ಲ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ?

1) ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸಾರ್ವಜನಿಕ ಬಾಲಕರ ವಿದ್ಯಾರ್ಥಿನಿಲಯ.

2) ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ.

3) ಡಾ.ಬಿ.ಆರ್.ಅಂಬೇಡ್ಕರ್ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯ.

4) ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಕಾಲೇಜು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

For More Information-ಹೆಚ್ಚಿನ ಮಾಹಿತಿಗಾಗಿ:

Official website-ಇಲಾಖೆಯ ಅಧಿಕೃತ ಜಾಲತಾಣ- Click Here
Online Application Link-ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now
Helpline-ಸಹಾಯವಾಣಿ-9482300400.

WhatsApp Group Join Now
Telegram Group Join Now
Share Now: