2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸೀಟುಗಳಿಗೆ ಪ್ರವೇಶಾತಿ(Free Hostel application) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ದಿನನಿತ್ಯ ಸಂಚಾರ ಮಾಡಿ ವಿದ್ಯಾಭ್ಯಾಸ ಮಾಡಲು ಕೆಲವು ಸಮಯದಲ್ಲಿ ಕಷ್ಟಕರವಾಗುವುದರಿಂದ ಇಂತಹ ವಿದ್ಯಾರ್ಥಿಗಳಿಗೆ ನೆರವು ನೀಡಲು ನಗರ ಪ್ರದೇಶದಲ್ಲೇ ಕಾಲೇಜು ಹತ್ತಿರವಿರುವ ಕಡೆ ಇದ್ದು ವ್ಯಾಸಂಗ ಮಾಡಲು ಹಾಸ್ಟೆಲ್(Free Hostel admission)ಉಳಿದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಸೀಟನ್ನು ಹಂಚಿಕೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹಾಸ್ಟೆಲ್ ಪ್ರವೇಶಕ್ಕೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: Crop Insurance amount-ಈ ಜಿಲ್ಲೆಯ ರೈತರ ಖಾತೆಗೆ ₹2,333 ಲಕ್ಷ ಮುಂಗಾರು ಬೆಳೆ ವಿಮೆ ಜಮಾ!
Free Hostel Admission Details-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರು ಹೊರಡಿಸಿರುವ ಆದೇಶ ವಿವರ ಹೀಗಿದೆ:
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ(ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿ ದಾಖಲಾತಿ ಕೈಗೊಂಡಿದೆ. ತದನಂತರ ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಹಾಗೂ ದಾಖಲಾತಿ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲು ವಿದ್ಯಾರ್ಥಿಗಳು ಮನವಿ ಸಲ್ಲಿಸಿರುತ್ತಾರೆ.
ಆದ್ದರಿಂದ, 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಖಾಲಿರುವ ಸೀಟುಗಳಿಗೆ ಹಾಸ್ಟೆಲ್ಗಳ ಅನುಸಾರ(ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಸೇವೆಯನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ದಿನಾಂಕ: 24-12-2024 ರಿಂದ ಪ್ರಾರಂಭಿಸಿ ದಿನಾಂಕ: 10-01-2025ರವರೆಗೆ ಅರ್ಜಿ ಆಹ್ವಾನಿಸಿದ್ದು, ಜಿಲ್ಲಾ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ನಿಯಮಾನುಸಾರ ಸೀಟುಗಳ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಯ ಅಧಿಕಾರಿಗಳಿಗೆ ಅಲ್ಪಸಂಖ್ಯಾತರ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: PM-Kisan Beneficiary List-ಪಿಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹ ರೈತರ ಪಟ್ಟಿ ಪ್ರಕಟ!
Last Date For Hostel Admission-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಜನವರಿ 2025
ಇದನ್ನೂ ಓದಿ: Monthly Fellowship- ಹಿಂದುಳಿದ ವರ್ಗಗಳ ಇಲಾಖೆಯಿಂದ ಮಾಸಿಕ ₹10,000 ರೂ ಸ್ಕಾಲರ್ಶಿಪ್ ಪಡೆಯಲು ಅರ್ಜಿ!
How Can Apply for free hostel-ಹಾಸ್ಟೆಲ್ ಪ್ರವೇಶಕ್ಕೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
1) ಅರ್ಜಿದಾರರ ಆಧಾರ್ ಕಾರ್ಡ/Aadhar card
2) ಶಾಲಾ ದಾಖಲಾತಿ ಪ್ರಮಾಣ ಪತ್ರ/School Admission
3) ವಿದ್ಯಾರ್ಥಿ ಪೋಟೋ/Photo
4) ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and Income Certificate
5) ವ್ಯಾಸಂಗ ಪ್ರಮಾಣ ಪತ್ರ/Study Certificate
ಇದನ್ನೂ ಓದಿ: Togari bembala bele-ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ! ದರ ಎಷ್ಟು?
Apply Method-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಲು ಸೂಚಿಸಲಾಗಿದೆ.
Step-1: ಮೊದಲಿಗೆ ಇಲ್ಲಿ ಕ್ಲಿಕ್ Scholorship application ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.
Step-2: ನಂತರ ಇಲ್ಲಿ ಮುಖಪುಟದಲ್ಲಿ ಕಾಣುವ “Post Matric” ವಿಭಾಗದಲ್ಲಿ ಕೆಳಗೆ ಕಾಣಿಸುವ Apply ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ಬಳಿಕ “Do you have State Scholarship Account? Yes/NO ಎಂದು ಆಯ್ಕೆ ಮಾಡಿಕೊಂಡು ಮುಂದುರೆಯಬೇಕು ಇದೇ ರೀತಿ ಮುಂದೆ ಬರುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ: Bus Ticket Price- ಬಸ್ ಟಿಕೆಟ್ ದರದಲ್ಲಿ ಶೇ 15% ಏರಿಕೆ! ಇಲ್ಲಿದೆ ಟಿಕೆಟ್ ದರ ವಿವರ!
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಳಕೆದಾರ ಕೈಪಿಡಿ: Download Now
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯನ್ನು ನೇರವಾಗಿ ಕಚೇರಿ ಸಮಯದಲ್ಲಿ ಭೇಟಿ ಮಾಡಿ.
ದೂರವಾಣಿ ಸಂಖ್ಯೆ: 080-22864212