Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

July 16, 2025 | Siddesh
Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!
Share Now:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ(Free Hostel Application) ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಇಲಾಖೆಯಿಂದ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಹಳ್ಳಿಯಿಂದ ನಗರ ಪ್ರದೇಶಕ್ಕೆ ಪ್ರತಿ ನಿತ್ಯ ಸಂಚಾರ ಮಾಡಿ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ಹಾಸ್ಟೆಲ್ ನಲ್ಲಿ ಇದ್ದು ವ್ಯಾಸಂಗ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಇದಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ಗುರುತಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದರ ಕುರಿತು ಅವಶ್ಯಕವಾಗಿ ಬೇಕಾಗುವ ಎಲ್ಲಾ ಅಗತ್ಯ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದ್ದು ಅರ್ಹ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ತಲುಪಿಸಲು ತಪ್ಪದೇ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ನಮ್ಮ ಜಾಲತಾಣವನ್ನು ಬೆಂಬಲಿಸಿ.

Free Hostel Application last date-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ:

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೆಲವು ತಾಂತ್ರಿಕ ಸಮಸ್ಯೆಗಳು ಕಂಡುಬಂದ ಕಾರಣ ಇನ್ನು ದೊಡ್ಡ ಸಂಖ್ಯೆಯಲ್ಲಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಬಾಕಿ ಉಳಿದಿರುವ ಕಾರಣ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು : 14 ಆಗಸ್ಟ್ 2025 ರವರೆಗೆ ರವರೆಗೆ ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಿದೆ.

ಇದನ್ನೂ ಓದಿ: Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Eligibility Criteria For Free Hostel Admission-ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು:

ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು ಸರ್ಕಾರಿ ಅಥವಾ ಸರ್ಕಾರಿ ಅಂಗೀಕೃತ ಶಾಲೆಯಲ್ಲಿ ಸಾಮಾನ್ಯ ಪದವಿ ಕೋರ್ಸಿನ ವ್ಯಾಸಂಗ ಮಾಡುತ್ತಿರಬೇಕು.

ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯವು ಪ್ರವರ್ಗ-1ರ ಮತ್ತು ಎಸ್.ಸಿ ಅಥವಾ ಎಸ್.ಟಿ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ ದ ಒಳಗಿರಬೇಕು.

BCM Hostel

Free Hostel Online Application-ಆನ್ಲೈನ್ ಮೂಲಕ ಅಪ್ಲಿಕೇಶನ್ ಅನ್ನು ಸಲ್ಲಿಸುವ ವಿಧಾನ:

ಹಾಸ್ಟೆಲ್ ಅನ್ನು ಪಡೆಯಲು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಈ ಕೆಳಗಿನ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Step-1: ಮೊದಲು ಇಲ್ಲಿ ಕ್ಲಿಕ್ Free Hostel Online Application ಮಾಡಿ ವಿದ್ಯಾರ್ಥಿನಿಲಯಕ್ಕೆ ಪ್ರವೇಶವನ್ನು ಪಡೆಯಲು ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Awas Yojana-ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಆಹ್ವಾನ!

Step-2: ತದನಂತರ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿದ ನಂತರ ಇಲ್ಲಿ ಮುಖಪುಟದಲ್ಲಿ ಎಡಬದಿಯಲ್ಲಿ ತೋರಿಸುವ "Post Matric" ಬಟನ್ ಮೇಲೆ ಕ್ಲಿಕ್ ಮಾಡಿಬೇಕು ಬಳಿಕ ನಂತರ ಪೇಜ್ ನಲ್ಲಿ "Do you have State Scholarship Account? Yes/NO ಎಂದು ಪ್ರಶ್ನೆಯನ್ನು ಕೇಳುತ್ತದೆ ಇದಕ್ಕೆ ಉತ್ತರಿಸಿ ಮುಂದಿನ ಪೇಜ್ ನಲ್ಲಿ ಅರ್ಜಿ ಪಾರ್ಮ ಒಪನ್ ಅಗುತ್ತದೆ.

Step-3: ಅರ್ಜಿ ನಮೂನೆ ತೆರೆದುಕೊಂಡ ಬಳಿಕ ಇಲ್ಲಿ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Required Documents-ಅರ್ಜಿಯನ್ನು ಸಲ್ಲಿಸಲು ದಾಖಲೆಗಳು:

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ಪಟ್ಟಿಯಲ್ಲಿರುವ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

  • ಅರ್ಜಿದಾರರ ಆಧಾರ್ ಕಾರ್ಡ ಪ್ರತಿ/Aadhar card
  • ಅರ್ಜಿದಾರರ ಕಾಲೇಜು ದಾಖಲಾತಿ ಪತ್ರ/School Admission
  • ವಿದ್ಯಾರ್ಥಿ ಪೋಟೋ/Photo
  • ಕುಟುಂಬದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste and Income Certificate
  • ವಿದ್ಯಾರ್ಥಿ ವ್ಯಾಸಂಗ ಪ್ರಮಾಣ ಪತ್ರ/Study Certificate
  • ಮೊಬೈಲ್ ನಂಬರ್/Mobile Number
  • ಇ-ಮೇಲ್/E-mail

ಇದನ್ನೂ ಓದಿ: Free Computer Training-ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

Free Hostel In Karnataka-ಯಾವೆಲ್ಲ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ಮಾರ್ಗಸೂಚಿ ಪ್ರಕಾರ ಈ ಕೆಳಗಿನ ಪಟ್ಟಿಗೆ ಸೇರಿದ ವರ್ಗದ ವಿದ್ಯಾರ್ಥಿಗಳು ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

  • ಎಸ್.ಸಿ/SC
  • ಎಸ್.ಟಿ/ST
  • ಪ್ರವರ್ಗ-1/Cat-1
  • ಪ್ರವರ್ಗ 2ಎ/Cat-2
  • 2ಬಿ/2B
  • 3ಎ/2A
  • 3ಬಿ/3B

ಇದನ್ನೂ ಓದಿ: PM Kisan Updates-ಪಿಎಂ ಕಿಸಾನ್ 20ನೇ ಕಂತಿನ ಹಣ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

For More Information-ವಿದ್ಯಾರ್ಥಿನಿಲಯ ಪ್ರವೇಶದ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಅಗತ್ಯ ಮಾಹಿತಿ:

Free Hostel Helpline Number-ಇಲಾಖೆಯ ಸಹಾಯವಾಣಿ ಸಂಖ್ಯೆ : 8050770004 ಅಥವಾ 8050770005
Free Hostel webiste-ಇಲಾಖೆ ಅಧಿಕೃತ ಜಾಲತಾಣ- Click Here
Free Hostel Application link-ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್-Apply Now

WhatsApp Group Join Now
Telegram Group Join Now
Share Now: