Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

May 30, 2025 | Siddesh
Free Mobile Repair-ಮೊಬೈಲ್ ರಿಪೇರಿ ತರಬೇತಿ ಪಡೆಯಲು ಇಲ್ಲಿದೆ ಸುವರ್ಣಾವಕಾಶ!
Share Now:

ಉಚಿತ ಮೊಬೈಲ್ ರಿಪೇರಿ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Mobile Repair Training) ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಲೇಖನದಲ್ಲಿ ಮೊಬೈಲ್ ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ.

ಅಭ್ಯರ್ಥಿಗಳಿಂದ ಯಾವುದೇ ಶುಲ್ಕವನ್ನು ಪಾವತಿ ಮಾಡಿಸಿಕೊಳ್ಳದೇ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ(Self employment) ತರಬೇತಿ ಕೇಂದ್ರದಿಂದ ಉಚಿತವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ 30 ದಿನದ ಮೊಬೈಲ್ ರಿಪೇರಿ (Mobile Repair) ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

ಮೊಬೈಲ್ ರಿಪೇರಿ ತರಬೇತಿಯಲ್ಲಿ(Free Mobile Repair Course) ಭಾಗವಹಿಸಲು ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳೇನು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ತರಬೇತಿ ಪ್ರಾರಂಭ ದಿನಾಂಕ? ತರಬೇತಿ ಕೇಂದ್ರದ ವಿಳಾಸ ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Free Mobile Repair Application-ನಿರುದ್ಯೋಗಿ ಯುವಕರಿಗೆ ಉತ್ತಮ ಅವಕಾಶ:

ಶಿಕ್ಷಣವನ್ನು ಪಡೆದು ಯಾವುದೇ ಕೆಲಸ ಲಭ್ಯವಾಗದೇ ಇದ್ದ ಗ್ರಾಮೀಣ ಮತ್ತು ನಗರ ಭಾಗದ ಯುವಕರು ಸ್ವಂತ ಉದ್ಯೋಗವನ್ನು ಆರಂಭಿಸಲು ಅಥವಾ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಈ ಉಚಿತ 30 ದಿನದ ತರಬೇತಿಯ ಪ್ರಯೋಜನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬಹುದು. ಈ ತರಬೇತಿಯಲ್ಲಿ ತರಬೇತಿ ನೀಡುವುದರ ಜೊತೆಗೆ ಸ್ವ-ಉದ್ಯೋಗವನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಬಂಡವಾಳ ಹೂಡಿಕೆಗೆ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಸೂಕ್ತ ಮಾರ್ಗದರ್ಶನವನ್ನು ಸಹ ನೀಡಲಾಗುತ್ತದೆ.

ಇದನ್ನೂ ಓದಿ: Student Scholarship-ರೂ 6,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Mobile Repair Shop-ತಪ್ಪದೇ ಈ ಮಾಹಿತಿ ಶೇರ್ ಮಾಡಿ:

ಈ ಲೇಖನವನ್ನು ಓದುತ್ತಿರುವ ವೀಕ್ಷಕರು ತಪ್ಪದೇ ಈ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಏಕೆಂದರೆ ಬಹಳ ಜನರಿಗೆ ಈ ತರಬೇತಿ ಸಂಸ್ಥೆಯ ಕುರಿತು ಮಾಹಿತಿಯೇ ಇರುವುದಿಲ್ಲ ಆಸಕ್ತರಿಗೆ ಮಾಹಿತಿಯನ್ನು ತಿಳಿಸಲು ನಿಮ್ಮ ಒಂದು ಸಣ್ಣ ಶೇರ್ ತುಂಬ ಉಪಕಾರಿಯಾಗಿದೆ.

Free Mobile Repair Training Application- ಅರ್ಜಿ ಸಲ್ಲಿಸಲು ಅರ್ಹತೆಗಳು:

(1) ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

(2) ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

(3) ಅರ್ಜಿದಾರ ಅಭ್ಯರ್ಥಿಗೆ ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿರುತ್ತದೆ. 

ಇದನ್ನೂ ಓದಿ: Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Mobile Repair

ಇದನ್ನೂ ಓದಿ: Free Hostel-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ!

Mobile Repair Training Details-ಸಂಪೂರ್ಣ ಉಚಿತ ತರಬೇತಿ:

ಮೊಬೈಲ್ ರಿಪೇರಿ ತರಬೇತಿಯನ್ನು ಪಡೆಯಲು ಶಿಬಿರದಲ್ಲಿ ಭಾಗವಹಿಸಿದಿ ಅಭ್ಯರ್ಥಿಗ ತರಬೇತಿ ಆರಂಭವಾದ ದಿನದಿಂದ ಮುಕ್ತಾಯವಾಗುವುದರ ವರೆಗೂ ಸಹ ತರಬೇತಿ ಸಂಸ್ಥೆಯಿಂದ ತರಬೇತಿ ನಡೆಯುವ ಅವಧಿಯಲ್ಲಿ ವಾಸ್ತವ್ಯ ಮಾಡಲು ಮತ್ತು ಊಟ ವ್ಯವಸ್ಥೆಯು ಸಂಪೂರ್ಣ ಉಚಿತವಾಗಿರುತ್ತದೆ.

Free Mobile Repair Duration-ತರಬೇತಿ ಅವಧಿ:

ಉಚಿತ ಮೊಬೈಲ್ ರಿಪೇರಿ ತರಬೇತಿಯು 11 ಜೂನ್ 2025 ರಿಂದ ಆರಂಭವಾಗಿ 10 ಜುಲೈ 2025 ಕ್ಕೆ ಮುಕ್ತಾಯವಾಗಲಿದ್ದು ಒಟ್ಟು 30 ದಿನದ ತರಬೇತಿ ಇದಾಗಿರುತ್ತದೆ.

ಇದನ್ನೂ ಓದಿ: Bus Pass Application- ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Training Center Address-ತರಬೇತಿ ನಡೆಯುವ ಕೇಂದ್ರದ ವಿಳಾಸ ಹೀಗಿದೆ:

ಈ ತರಬೇತಿಯನ್ನು ಆಯೋಜನೆ ಮಾಡಿರುವ ಸಂಸ್ಥೆಯ ವಿಳಾಸ ಹೀಗಿದೆ: ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343, ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612

How To Apply For Free Mobile Repair Training-ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಉಚಿತ ಮೊಬೈಲ್ ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬಹುದು ಒಂದು ಆನ್ಲೈನ್ ಮೂಲಕ ಗೂಗಲ್ ಪಾರ್ಮ್ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ತರಬೇತಿ ನಡೆಯುವ ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ತರಬೇತಿ ಕೇಂದ್ರದಲ್ಲಿ ದಾಖಲೆಗಳನ್ನು ಸಲ್ಲಿಸಿ ಈ ತರಬೇತಿಯಲ್ಲಿ ಭಾಗವಹಿಸಬಹುದು. ಅರ್ಜಿ ಸಲ್ಲಿಸಲು ಲಿಂಕ್- Apply Now

ಗಮನಿಸಿ: ಆಸಕ್ತ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಕರೆ ಮಾಡಿ.

ಇದನ್ನೂ ಓದಿ: Sub Registrar Office-ಸಾರ್ವಜನಿಕ ಪ್ರಕಟಣೆ ಇನ್ಮುಂದೆ ಈ ದಿನವು ಸಹ ಸಬ್ ರಿಜಿಸ್ಟ್ರಾರ್ ತೆರೆದಿರುತ್ತದೆ!

Application Link For Mobile Repair Training-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ತಮ್ಮ ಬಳಿಯಿರುವ ಮೊಬೈಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು ಮೊದಲಿಗೆ ಇಲ್ಲಿ ಕ್ಲಿಕ್ Apply Now ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Required documents for Mobile Repair Training - ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ:

ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಗೆ ತಿಳಿಸಿರುವ ದಾಖಲೆಗಳನ್ನು ಸಲ್ಲಿಸಬೇಕು.

  • ಅಧಾರ್ ಕಾರ್ಡ ಪ್ರತಿ/Aadhar.
  • ಬ್ಯಾಂಕ್ ಖಾತೆ ವಿವರದ ಪ್ರತಿ/Bank Pass Book.
  • ಕುಟುಂಬದ ರೇಶನ್ ಕಾರ್ಡ ಪ್ರತಿ/Ration card.
  • ಅಭ್ಯರ್ಥಿಯ ಮೊಬೈಲ್ ನಂಬರ್/Mobile Number.
  • ಪೋಟೋ/Photo.

Free Mobile Repair Information-ಈ ತರಬೇತಿಯಲ್ಲಿ ಯಾವೆಲ್ಲ ವಿಷಯಗಳ ಕುರಿತು ತಿಳಿಸಲಾಗುತ್ತದೆ?

ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊಬೈಲ್ ರಿಪೇರಿ ಮಾಡುವ ವಿಷಯದ ಕುರಿತು ಪ್ರಾಯೋಗಿಕ ಮಟ್ಟದ ತರಬೇತಿಯನ್ನು ನೀಡುವುದರ ಜೊತೆಗೆ ಈ ತರಬೇತಿಯಲ್ಲಿ ಕೌಶಲ್ಯ, ಸಾಧನೆ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟ ತಂತ್ರಗಳು, ಯಶ್ವಸಿ ಉದ್ಯಮಗಳಿಂದ ಅನುಭವ ಹಂಚಿಕೆ. ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗ್ಗೆ ಮಾಹಿತಿಗಳನ್ನು ನೀಡಲಾಗುತ್ತದೆ.

More Details-ಹೆಚ್ಚಿನ ಮಾಹಿತಿಗಾಗಿ:

ಅರ್ಜಿ ಸಲ್ಲಿಸಲು ಲಿಂಕ್- Apply Now
ತರಬೇತಿ ಸಂಸ್ಥೆಯ ಮೊಬೈಲ್ ನಂಬರ್-9449860007, 9538281989, 9916783825, 888044612

WhatsApp Group Join Now
Telegram Group Join Now
Share Now: