Free Notebook Scheme-1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಪೋಷಕರ ಜೇಬಿಗೆ ಇನ್ನು ಹೊರೆಯಿಲ್ಲ!

February 5, 2026 | Siddesh
Free Notebook Scheme-1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಪೋಷಕರ ಜೇಬಿಗೆ ಇನ್ನು ಹೊರೆಯಿಲ್ಲ!
Share Now:

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ, ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕ ಮಾತ್ರವಲ್ಲದೆ, ಇತಿಹಾಸದಲ್ಲೇ ಮೊದಲ ಬಾರಿಗೆ ಉಚಿತ ನೋಟ್‌ಬುಕ್(Free Notebook Yojane) ಮತ್ತು ದಿನಚರಿ ಪುಸ್ತಕ (Diary) ವಿತರಿಸಲು ಸರ್ಕಾರ ಅಧಿಕೃತ ಮುದ್ರೆ ಒತ್ತಿದೆ.

ಪ್ರಸ್ತುತ ದಿನಗಳಲ್ಲಿ ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಈ ನಿಟ್ಟಿನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ದಿನಚರಿ ಪುಸ್ತಕ ಖರೀದಿ(Free Notebook Scheme In Karnataka)ಮಾಡಲು ಅವಶ್ಯವಿರುವ ಹಣದ ಹೊರೆಯನ್ನು ತಪ್ಪಿಸಲು ಶಿಕ್ಷಣಕ್ಕೆ ಉತೇಜನವನ್ನು ನೀಡಲು ರಾಜ್ಯ ಸರಕಾರದಿಂದ ಉಚಿತ ನೋಟ್‌ಬುಕ್ ಮತ್ತು ದಿನಚರಿ ಪುಸ್ತಕ ವಿತರಣೆ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: Free Driving Training-ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ: ಕೆಎಸ್‌ಆರ್‌ಟಿಸಿಯಿಂದ ಉಚಿತ ಭಾರೀ ವಾಹನ ಚಾಲನಾ ತರಬೇತಿ ಮತ್ತು ಪರವಾನಗಿ!

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಶಾಲಾ ಶಿಕ್ಷಣ ಇಲಾಕೆಯಿಂದ ವಿದ್ಯಾ ವಿಕಾಸ ಯೋಜನೆ ಅಡಿಯಲ್ಲಿ ಈಗಾಗಲೇ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಗುತ್ತಿದ್ದು ಇದಕ್ಕೆ ಹೆಚ್ಚುವರಿಯಾಗಿ ಉಚಿತವಾಗಿ ನೋಟ್‌ಬುಕ್‌ಗಳನ್ನು ಸಹ ವಿತರಣೆ ಮಾಡಲು ಸೂಕ್ತ ನಿರ್ಣಯ ಕೈಗೊಳ್ಳಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Vidya Vikas Yojana-ವಿದ್ಯಾ ವಿಕಾಸ ಯೋಜನೆ: ಏನಿದು ಹೊಸ ಬದಲಾವಣೆ?

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿಯಾದ ಶುಭಮಂಗಳಾ ಅವರು ಹೊರಡಿಸಿರುವ ಆದೇಶದಂತೆ, ಈ ಯೋಜನೆಯು ಪ್ರಾಥಮಿಕ ಶಾಲೆಯಿಂದ ಹಿಡಿದು ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳನ್ನು ಒಳಗೊಳ್ಳಲಿದೆ.

1 ರಿಂದ 10ನೇ ತರಗತಿ (ಸರ್ಕಾರಿ ಮತ್ತು ಅನುದಾನಿತ) ಹಾಗೂ ಪ್ರಥಮ/ದ್ವಿತೀಯ ಪಿಯುಸಿ(ಸರ್ಕಾರಿ ಪಿಯು ಕಾಲೇಜು) ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡುವುದರ ಜೊತೆಗೆ ಅಭ್ಯಾಸ ಪುಸ್ತಕಗಳು (Workbooks), ನೋಟ್‌ಬುಕ್‌ಗಳು ಮತ್ತು ಶಾಲಾ ದಿನಚರಿ ಪುಸ್ತಕಗಳನ್ನು ವಿತರಣೆ ಮಾಡಲು ಮುಂದಾಗಿದೆ. ಈ ಕ್ರಮದಿಂದ ರಾಜ್ಯದ ಸುಮಾರು 61 ಲಕ್ಷ ವಿದ್ಯಾರ್ಥಿಗಳಿಗೆ ಇದರ ನೇರ ಲಾಭ ಸಿಗಲಿದೆ.

ಇದನ್ನೂ ಓದಿ: SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ"ಸ್ತ್ರೀ ಶಕ್ತಿ ಪ್ಯಾಕೇಜ್"! ಇಲ್ಲಿದೆ ಸಂಪೂರ್ಣ ಮಾಹಿತಿ!

Free Notebook Grats Details-ಬಜೆಟ್ ಮತ್ತು ಅನುದಾನದ ವಿವರ:

ವಿವರಮೊತ್ತ / ಸಂಖ್ಯೆ
ನೋಟ್‌ಬುಕ್/ದಿನಚರಿ ಪ್ರಸ್ತಾವನೆ ಮೊತ್ತ₹30.83 ಕೋಟಿ
ಒಟ್ಟು ಫಲಾನುಭವಿ ಮಕ್ಕಳು61 ಲಕ್ಷ
ಶೈಕ್ಷಣಿಕ ವರ್ಷ2026-27

ಶಿಕ್ಷಣ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪುರಸ್ಕರಿಸಿರುವ ಸರ್ಕಾರ, ಶೈಕ್ಷಣಿಕ ಅಭಿವೃದ್ಧಿಗಾಗಿ ಬೃಹತ್ ಮೊತ್ತವನ್ನು ಮೀಸಲಿಟ್ಟಿದೆ.

ಇದನ್ನೂ ಓದಿ: SSP Scholarship-ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅರ್ಜಿ ಸಲ್ಲಿಸುವ ಗಡುವು ವಿಸ್ತರಣೆ!

Notebook Scheme In Karnataka

ಗುಣಮಟ್ಟ ಮತ್ತು ಭ್ರಷ್ಟಾಚಾರಕ್ಕೆ ಬ್ರೇಕ್: ಸರ್ಕಾರದ ಖಡಕ್ ಎಚ್ಚರಿಕೆ

ಈ ಬಾರಿ ಕೇವಲ ಯೋಜನೆ ಘೋಷಣೆ ಮಾಡುವುದಲ್ಲದೆ, ಅದರ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡಲು ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ:

ಪಠ್ಯಪುಸ್ತಕಗಳ ಕಾಗದದ ಗುಣಮಟ್ಟ ಮತ್ತು ಮುದ್ರಣವು ಅತ್ಯುತ್ತಮವಾಗಿರಬೇಕು. ಕಳಪೆ ಗುಣಮಟ್ಟ ಕಂಡುಬಂದಲ್ಲಿ ಮುದ್ರಣಾಲಯಗಳ ವಿರುದ್ಧ ಕ್ರಮ ಜರುಗಿಸಲಾಗುವುದು.

ಹೆಚ್ಚುವರಿ ಪುಸ್ತಕಗಳ ಬೇಡಿಕೆ ಸಲ್ಲಿಸಿ ಸರ್ಕಾರದ ಹಣ ದುರುಪಯೋಗ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ವಿದ್ಯಾರ್ಥಿಗಳ ಕೈಗೆ ಪುಸ್ತಕಗಳು ತಲುಪುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ.

ಪ್ರತಿ ವರ್ಷ ಶೈಕ್ಷಣಿಕ ವರ್ಷದ ಆರಂಭದಲ್ಲಿ ಪಠ್ಯಪುಸ್ತಕ ಮತ್ತು ನೋಟ್‌ಬುಕ್‌ಗಳಿಗಾಗಿ ಪೋಷಕರು ಸಾವಿರಾರು ರೂಪಾಯಿ ಖರ್ಚು ಮಾಡಬೇಕಿತ್ತು. ಸರ್ಕಾರದ ಈ ನಿರ್ಧಾರದಿಂದ ಬಡ ಮತ್ತು ಮಧ್ಯಮ ವರ್ಗದ ಪೋಷಕರಿಗೆ ಆರ್ಥಿಕವಾಗಿ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ.

"ಇದು ಕೇವಲ ಪುಸ್ತಕ ವಿತರಣೆಯಲ್ಲ, ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಹೊಸ ವೇಗ," ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: