Free Photoghrapy Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

December 5, 2025 | Siddesh
Free Photoghrapy Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!
Share Now:

ನಿರುದ್ಯೋಗಿ ಯುವಕರು ಮತ್ತು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೌಶಲ್ಯವನ್ನು ಅಭಿವೃದ್ದಿಪಡಿಸಿಕೊಳ್ಳಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು(Free Photography Training)ಪಡೆಯಲು ತರಬೇತಿಯಲ್ಲಿ ಭಾಗವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಮ್ಮ ರಾಜ್ಯ ಮತ್ತು ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಸತತವಾಗಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಗ್ರಾಮೀಣ ಮತ್ತು ನಗರ ಭಾಗದ ಯುವಕರಿಗೆ ವಿವಿಧ ಕ್ಷೇತ್ರದಲ್ಲಿ ಕೌಶಲ್ಯವನ್ನು ಅಭಿವೃದ್ದಿಪಡಿಸಿಕೊಂಡು ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ಉಚಿತ ತರಬೇತಿಯನ್ನು(Free Phtoghrapy Training Application) ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಹ ಅಭ್ಯರ್ಥಿಗಳನ್ನು ತರಬೇತಿ ನೀಡಲು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: AHFL Scholarship-ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಇಂದಿನ ಅಂಕಣದಲ್ಲಿ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು(Free Phtoghrapy And Videography Training) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿಯಲ್ಲಿ ಭಾಗವಹಿಸಲು ಅನುಸರಿಸಬೇಕಾದ ಕ್ರಮಗಳಾವುವು? ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಅವಧಿ ಎಷ್ಟು? ತರಬೇತಿ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Photography And Videography Business-ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉದ್ದಿಮೆ ಆರಂಭಿಸಿ ಯಾವೆಲ್ಲ ಮೂಲಗಳಿಂದ ಆದಾಯ ಗಳಿಸಬಹುದು?

ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಇಂದಿನ ಕಾಲದಲ್ಲಿ ಅತ್ಯಂತ ಬೇಡಿಕೆಯ ಲಾಭದಾಯಕ ವ್ಯವಹಾರ ಅವಕಾಶ. ನೀವು ಕೌಶಲ್ಯ + ಉತ್ತಮ ಸಾಧನ + ಸ್ಮಾರ್ಟ್ ಮಾರ್ಕೆಟಿಂಗ್ ಮಾಡಿದರೆ ಕಡಿಮೆ ಹೂಡಿಕೆಯಲ್ಲಿ ಉತ್ತಮ ಆದಾಯ ಗಳಿಸಬಹುದು.

1) Event Photography & Videography: ಮದುವೆಗಳು, ಹುಟ್ಟುಹಬ್ಬ, Naming ceremony, Engagement, Corporate events, ಬೇಡಿಕೆ ಹೆಚ್ಚು + ಆದಾಯ ಹೆಚ್ಚಿನದು.

2) Pre-wedding / Post-wedding Shoots: ಆಕರ್ಷಕ ಥೀಮ್ ಫೋಟೋಶೂಟ್‌ಗಳು, Outdoor / Destination shoots, ಲಾಭದಾಯಕ ಪ್ಯಾಕೇಜುಗಳು.

3) Baby / Kids Photography: Newborn shoot,Cakesmash, Baby milestone shoots, ತುಂಬಾ ಟ್ರೆಂಡಿಂಗ್ ಮತ್ತು ಲಾಭದಾಯಕ.

ಇದನ್ನೂ ಓದಿ: E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

4) Product Photography: Amazon / Flipkart Sellers, Small business product shoots, Food photography for restaurants, ನಿರಂತರ ಕಾರ್ಯ + recurring clients.

5) Real Estate Photography: ಮನೆ / ಫ್ಲ್ಯಾಟ್‌ಗಳ ಪ್ರೊಫೆಷನಲ್ ಫೋಟೋ & ವಿಡಿಯೋ, Drone shots, Real estate agents ತಪ್ಪದೇ ಬೇಕು.

6) Corporate / Branding Shoots: Company profile video, Staff portraits, Social media branding content, ಹೆಚ್ಚಿನ ಪಾವತಿ ದೊರೆಯುವ ಕ್ಷೇತ್ರ.

7) Social Media Content Creation: Instagram reels, YouTube videos, Short ads, ಪ್ರತಿ ವ್ಯವಹಾರಕ್ಕೆ ಡಿಜಿಟಲ್ ಕಂಟೆಂಟ್ ಬೇಕಾಗಿರುವುದರಿಂದ ಬೇಡಿಕೆ ತುಂಬಾ.

8) Drone Photography & Videography: Wedding aerial shots, Agriculture survey, Land/property survey, Festival coverages, Drone ಸೇರಿಸಿದರೆ ಪ್ಯಾಕೇಜು ಮೌಲ್ಯ 2-3 ಪಟ್ಟು ಹೆಚ್ಚಾಗುತ್ತದೆ.

9) Editing Services: Photo retouching, Video editing (Reels, Wedding films), Album design Editing ಮೂಲಕವೂ ಹಣ ಗಳಿಸಬಹುದು.

10) Studio Setup: Passport photo, ID card shoots, Family portraits, Mini indoor shoots

ಇದನ್ನೂ ಓದಿ: Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

Free Phtoghrapy Training

ಇದನ್ನೂ ಓದಿ: Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Who Can Apply For Free Phtoghrapy Training- ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು?

ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯಲ್ಲಿ ಪಾಲ್ಗೊಳ್ಳಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಳ್ಳಬಹುದು:

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ತರಬೇತಿಯಲ್ಲಿ ಭಾಗವಹಿಸಲು ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವವರಿಗೆ ಮೊದಲ ಆದ್ಯತೆ ಇರುತ್ತದೆ.
BPL ಕಾರ್ಡದಾರ ಅಭ್ಯರ್ಥಿಗಳಿಗೆ ಮತ್ತು ಗ್ರಾಮೀಣ ಭಾಗದ ಅರ್ಜಿದಾರರಿಗೆ ಮೊದಲ ಆದ್ಯತೆಯಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಇದನ್ನೂ ಓದಿ: Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

Last Date For Application-ಹೆಸರು ನೋಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ: 14-12-2025

Free Phtoghrapy Trainning Duration-ತರಬೇತಿ ಅವಧಿ:

ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯು ದಿನಾಂಕ: 22 ಡಿಸೆಂಬರ್ 2025 ರಿಂದ ಪ್ರಾರಂಭವಾಗಿ ಒಟ್ಟು 31 ದಿನ ನಡೆಯಲಿದೆ.

Free Phtoghrapy Training Interview Date-ತರಬೇತಿಯಲ್ಲಿ ನೇರ ಸಂದರ್ಶನ ನಡೆಯುವ ದಿನಾಂಕ:

ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯಲ್ಲಿ ಭಾಗವಹಿಸಲು ನೋಂದಣಿಯನ್ನು ಮಾಡಿಕೊಂಡಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ದಿನಾಂಕ: 15 ಡಿಸೆಂಬರ್ 2025 ರಂದು ತರಬೇತಿ ಕೇಂದ್ರದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.

ಇದನ್ನೂ ಓದಿ: Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Training Center Address-ತರಬೇತಿ ಆಯೋಜನೆ ಮಾಡಿರುವ ಕೇಂದ್ರದ ವಿಳಾಸ:

ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿ ಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.

Training Certificate-ತರಬೇತಿ ಬಳಿಕ ಪ್ರಮಾಣ ಪತ್ರ ವಿತರಣೆ:

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ತರಬೇತಿಯನ್ನು ಭಾಗವಹಿಸದ ಬಳಿಕ ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Full Free Phtoghrapy Training-ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ:

ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ಪಡೆಯಲು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಸ್ಥೆಯಿಂದ ಕಲ್ಪಿಸಲಾಗಿದ್ದು ತರಬೇತಿ ಪಡೆಯಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ. ಸಂಪೂರ್ಣ ಉಚಿತ ತರಬೇತಿ.

Contact Number-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ಪಡೆಯಲು ಆಸಕ್ತ ಅಭ್ಯರ್ಥಿಗಳು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳಿಗೆ ಸಂಪರ್ಕಿಸಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: