Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

April 23, 2026 | Siddesh
Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!
Share Now:

ಕುಮಟಾ: ಗ್ರಾಮೀಣ ಭಾಗದ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗದ ಹಾದಿ ತೋರಿಸುವ ನಿಟ್ಟಿನಲ್ಲಿ, ಕುಮಟಾದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Poulty Farming Training) ಸಂಸ್ಥೆಯು (ಸಿಬಿಆರ್-ಸೆಟಿ) ಉಚಿತವಾಗಿ ಕೋಳಿ ಸಾಕಾಣಿಕೆ ಮತ್ತು ಜೇನು ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ. ಕೃಷಿ ಪೂರಕ ಉದ್ಯಮಗಳಲ್ಲಿ ಆಸಕ್ತಿ ಇರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.

ಈ ತರಬೇತಿ ಶಿಬಿರವು ಅಭ್ಯರ್ಥಿಗಳಲ್ಲಿ ಕೇವಲ ತಾಂತ್ರಿಕ ಕೌಶಲವನ್ನಷ್ಟೇ ಅಲ್ಲದೆ, ಉದ್ಯಮವನ್ನು ಯಶಸ್ವಿಯಾಗಿ ನಿರ್ವಹಿಸುವ ಆತ್ಮವಿಶ್ವಾಸವನ್ನೂ ತುಂಬಲಿದೆ. ಆಧುನಿಕ ಪದ್ಧತಿಯಲ್ಲಿ ಕೋಳಿ ಮತ್ತು ಜೇನು ಸಾಕಾಣಿಕೆ(Poulty Training) ಮಾಡುವ ವಿಧಾನ, ರೋಗಗಳ ನಿಯಂತ್ರಣ ಮತ್ತು ಮಾರುಕಟ್ಟೆ ಸಂಪರ್ಕದ ಬಗ್ಗೆ ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ. ಸ್ವಂತ ಉದ್ಯೋಗ ಪ್ರಾರಂಭಿಸುವ ಹಂಬಲ ಇರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: SSLC Result-2026: ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟ! ಫಲಿತಾಂಶ ವೀಕ್ಷಿಸುವುದು ಹೇಗೆ?

ಗ್ರಾಮೀಣ ಭಾಗದ ಆರ್ಥಿಕ ಸಬಲೀಕರಣವೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು, ತರಬೇತಿ(Jenu Sakanike Tarabeti)ಮುಗಿದ ನಂತರ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅಗತ್ಯವಿರುವ ಮಾರ್ಗದರ್ಶನವನ್ನೂ ಇಲ್ಲಿ ನೀಡಲಾಗುತ್ತದೆ. ಆಸಕ್ತರು ನಿಗದಿತ ದಿನಾಂಕದೊಳಗೆ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

Training Details-ತರಬೇತಿಯ ವಿವರಗಳು:

  • ತರಬೇತಿ ನಡೆಯುವ ದಿನಾಂಕ: 30.04.2026 ರಿಂದ 12.05.2026 ರವರೆಗೆ (ಒಟ್ಟು 13 ದಿನಗಳು).
  • ತರಬೇತಿ ನಡೆಯುವ ಸಮಯ: ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ.
  • ತರಬೇತಿ ನಡೆಯುವ ಸ್ಥಳ: ಕೆನರಾ ಬ್ಯಾಂಕ್ ಆರ್-ಸೆಟಿ (RSETI), ಇಂಡಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಜಿಲ್ಲೆ - 581343.

Who Can Apply-ನೋಂದಣಿ ಮಾಡಿಕೊಳ್ಳಲು ಅರ್ಹತೆಗಳು:

  1. ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿರಬೇಕು.
  2. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
  3. ಸ್ವ-ಉದ್ಯೋಗ ಪ್ರಾರಂಭಿಸುವ ಆಸಕ್ತಿ ಹೊಂದಿರಬೇಕು.
  4. ಗ್ರಾಮೀಣ ಭಾಗದ BPL ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: Fruits ID-ರೈತರ ಗಮನಕ್ಕೆ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ ಮತ್ತು ಡಿಜಿಟಲ್ ಸಹಮತಿ ಈಗ ಕಡ್ಡಾಯ!

Free Poulty Farming Training

ಇದನ್ನೂ ಓದಿ: AO and AAO Recruitment-ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ: 600ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಇಎಯಿಂದ ಅರ್ಜಿ ಆಹ್ವಾನ!

Training Benefits-ತರಬೇತಿಯ ಪ್ರಯೋಜನಗಳು:

  • ಪರಿಣಿತರಿಂದ ಸಂಪೂರ್ಣ ಉಚಿತ ತರಬೇತಿ.
  • ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ.
  • ತರಬೇತಿ ಪೂರ್ಣಗೊಳಿಸಿದ ನಂತರ ಪ್ರಮಾಣಪತ್ರ ವಿತರಣೆ.
  • ಸ್ವಂತ ಉದ್ಯಮ ಆರಂಭಿಸಲು ಬ್ಯಾಂಕ್ ಸಾಲ ಪಡೆಯಲು ಮಾರ್ಗದರ್ಶನ.

How To Apply-ಅರ್ಜಿ ಸಲ್ಲಿಸುವುದು ಹೇಗೆ?

ಈ ತರಬೇತಿಯನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಆಭ್ಯರ್ಥಿಗಳು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ Registar Now ಮೇಲೆ ಕ್ಲಿಕ್ ಮಾಡಿ ಗೂಗಲ್ ಪಾರ್ಮ್ ಅನ್ನು ಭರ್ತಿ ಮಾಡಿ ನಿಮ್ಮ ಹೆಸರನ್ನು ನೋಂದಾಯಿಸಬೇಕು.

ಇದನ್ನೂ ಓದಿ: MY LIC App-ಎಲ್ಐಸಿಯಿಂದ 'ಮೈ ಎಲ್ಐಸಿ' ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

Documents For Application-ಅಗತ್ಯವಿರುವ ದಾಖಲೆಗಳು:

ಅರ್ಜಿಯೊಂದಿಗೆ 4 ಪಾಸ್‌ಪೋರ್ಟ್ ಸೈಜ್ ಫೋಟೋ, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್‌ಗಳ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.

"ಗ್ರಾಮೀಣ ಭಾಗದ ಯುವಶಕ್ತಿ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬುದು ನಮ್ಮ ಸಂಸ್ಥೆಯ ಆಶಯವಾಗಿದೆ. ಕೃಷಿ ಆಧಾರಿತ ಉದ್ಯಮಗಳಿಗೆ ಇಂದು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ. ಈ ತರಬೇತಿಯ ಮೂಲಕ ಅಭ್ಯರ್ಥಿಗಳು ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಂಡು ಉತ್ತಮ ಲಾಭ ಗಳಿಸಲು ಸಾಧ್ಯವಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸೌಲಭ್ಯದ ಪ್ರಯೋಜನ ಪಡೆಯಬೇಕೆಂದು ನಾವು ವಿನಂತಿಸುತ್ತೇವೆ."-ಕೇಂದ್ರದ ನಿರ್ದೇಶಕರು.

Contac Details-ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಿ: 9449860007, 9538281989, 9916783825, 8880444612, 9620962004

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: