Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

January 10, 2026 | Siddesh
Free Pumpset Repair-ಉಚಿತ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!
Share Now:

ಪ್ರಸ್ತುತ ದಿನಗಳಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಬೋರ್ವೆಲ್ ಗಳನ್ನು ಕೊರೆಸುವವರ ಸಂಖ್ಯೆಯು ಹೆಚ್ಚಿತ್ತಿದ್ದು ಈ ನಿಟ್ಟಿನಲ್ಲಿ ಪಂಪ್ ಸೆಟ್ ರಿಪೇರಿ(Pumpset Repair) ಮಾಡುವವರಿಗೆ ಉತ್ತಮ ಸ್ವ-ಉದ್ಯೋಗ ಅವಕಾಶಗಳಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಉಚಿತವಾಗಿ 30 ದಿನದ ಪಂಪ್ ಸೆಟ್ ರಿಪೇರಿ ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಅಗತ್ಯ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಪಂಪ್ ಸೆಟ್ ರಿಪೇರಿ ಜೊತೆಗೆ(Free Pumpset Repair Training) ಗೃಹ ಬಳಕೆಯ ವಿದ್ಯುತ್ ಉಪಕರಣಗಲಾದ ಮಿಕ್ಸರ್, ಗ್ರಾಂಡರ್, ಪ್ಯಾನ್ ಹಾಗೂ ಇನ್ನಿತರೆ ವಸ್ತುಗಳ ರಿಪೇರಿ ಕುರಿತು ಈ ತರಬೇತಿಯಲ್ಲಿ ಪ್ರಾಯೋಗಿಕ ಮಾಹಿತಿಯನ್ನು ತಿಳಿಸಲು ಕಾರ್ಯಕ್ರಮವನ್ನು ಈ ಕೇಂದ್ರದಿಂದ ಆಯೋಜನೆ ಮಾಡಲಾಗಿದ್ದು ಈ ಕ್ಷೇತ್ರದಲ್ಲಿ ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಯೋಜನೆಯನ್ನು ಹಾಕಿಕೊಂಡಿರುವವರು ಕೂಡಲೇ ಇಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದು ಮುಂಚಿತವಾಗಿ ತರಬೇತಿಯಲ್ಲಿ ಭಾಗವಹಿಸಲು ಹೆಸರನ್ನು ನೋಂದಣಿ ಮಾಡಿಕೊಂಡು ತರಬೇತಿಯಲ್ಲಿ ಭಾಗವಹಿಸಬಹುದು.

ಇದನ್ನೂ ಓದಿ: Gruhalakshmi Amount-ಗೃಹಲಕ್ಷ್ಮಿ 2 ತಿಂಗಳ ಬಾಕಿ ಹಣ ಬಿಡುಗಡೆ ನೂತನ ಮಾಹಿತಿ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಈ ಲೇಖನದಲ್ಲಿ ಉಚಿತ ಪಂಪ್ ಸೆಟ್(Uchita Pumpset Repair Training)ಮತ್ತು ವಿದ್ಯುತ್ ಉಪಕರಣ ರಿಪೇರಿ ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು? ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ಹೆಸರನ್ನು ನೋಂದಣಿ ಮಾಡಿಕೊಳ್ಳುವುದು ಹೇಗೆ? ತರಬೇತಿಯಲ್ಲಿ ಭಾಗವಹಿಸಲು ಅವಶ್ಯವಿರುವ ದಾಖಲಾತಿಗಳು ಯಾವುವು? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Who Can Apply For Free Pumpset Repair Training-ತರಬೇತಿಯಲ್ಲಿ ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉಚಿತ ಗೃಹಬಳಕೆಯ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರ್ಯಾಂಡರ್, ಪ್ಯಾನ್, ಪಂಪ್ ಸೆಟ್ ಮತ್ತು ಇತರೆ ವಸ್ತುಗಳ ರಿಪೇರಿ ತರಬೇತಿಯಲ್ಲಿ ಭಾಗವಹಿಸಲು ಸಂಸ್ಥೆಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿದೆ:

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅಭ್ಯರ್ಥಿಯು ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

ಬಿಪಿಎಲ್ ಕಾರ್ಡ ಅನ್ನು ಹೊಂದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇರುವುತ್ತದೆ ಎಂದು ಅಧಿಕೃತ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿದಾರ ಅಭ್ಯರ್ಥಿಗಳಿಗೆ ಕನ್ನಡ ಓದು-ಬರಹ ಬರುವುದು ಕಡ್ಡಾಯ.

ಇದನ್ನೂ ಓದಿ: Sheep Farming Scheme-ಕುರಿ ಮೇಕೆ ಸಾಕಾಣಿಗೆಕೆ 43,750 ರೂ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Free Pumpset Repair Training Details-ತರಬೇತಿಯಲ್ಲಿ ಯಾವೆಲ್ಲ ವಿಷಯದ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ?

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಆಯೋಜನೆ ಮಾಡಿರುವ ಉಚಿತ ಗೃಹಬಳಕೆಯ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರ್ಯಾಂಡರ್, ಪ್ಯಾನ್, ಪಂಪ್ ಸೆಟ್ ಮತ್ತು ಇತರೆ ವಸ್ತುಗಳ ರಿಪೇರಿ ತರಬೇತಿಯಲ್ಲಿ ಈ ಕೆಳಗಿನ ಪಟ್ಟಿಯಲ್ಲಿರುವ ವಿಷಯಗಳ ಕುರಿತು ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ.

ಗೃಹಬಳಕೆಯ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರ್ಯಾಂಡರ್, ಪ್ಯಾನ್, ಪಂಪ್ ಸೆಟ್ ಮತ್ತು ಇತರೆ ವಸ್ತುಗಳ ರಿಪೇರಿ ಕುರಿತು ಪ್ರಾಯೋಗಿಕವಾಗಿ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ.

ತರಬೇತಿಯನ್ನು ಪಡೆದ ಬಳಿಕ ಅಭ್ಯರ್ಥಿಗಳು ಸ್ವಂತ ಉದ್ದಿಮೆಯನ್ನು ಆರಂಭಿಸಲು ಯಾವೆಲ್ಲ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ಪಡೆದು ಉದ್ದಿಮೆಯನ್ನು ಆರಂಭಿಸಬಹುದು ಮತ್ತು ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಸೂಕ್ತ ಮಾರ್ಗದರ್ಶನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: A-Khata-ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆಗೆ ಸಚಿವ ಸಂಪುಟದಲ್ಲಿ ನಿರ್ಣಯ!

Free Pumpset Repair

Training Center Address-ತರಬೇತಿ ಸಂಸ್ಥೆಯ ಕೇಂದ್ರದ ವಿಳಾಸ:

ಉಚಿತ ಗೃಹಬಳಕೆಯ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರ್ಯಾಂಡರ್, ಪ್ಯಾನ್, ಪಂಪ್ ಸೆಟ್ ಮತ್ತು ಇತರೆ ವಸ್ತುಗಳ ರಿಪೇರಿ ತರಬೇತಿಯನ್ನು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರ, ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343, ಕೇಂದ್ರದಿಂದ ಆಯೋಜನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳು:- 9449860007, 9538281989, 9916783825, 888044612

Pumpset Repair-ಶುಲ್ಕ ರಹಿತ ಸಂಪೂರ್ಣ ಉಚಿತ ತರಬೇತಿ:

30 ದಿನದ ಈ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿದ್ದು ಇದಕ್ಕಾಗಿ ಅಭ್ಯರ್ಥಿಗಳು ಹಣವನ್ನು ಪಾವತಿಸುವಾಗಿಲ್ಲ ಇದಲ್ಲದೇ ಅಭ್ಯರ್ಥಿಗಳಿಗೆ ತರಬೇತಿ ಸಮಯದಲ್ಲಿ ವಾಸ್ತವ್ಯ ಮಾಡಲು ಈ ಕೇಂದ್ರದಿಂದ ಉಚಿತವಾಗಿ ಊಟ ಮತ್ತು ವಸತಿ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿ: SIM Card-ಹೊಸ ಸಿಮ್ ಕಾರ್ಡ ಖರೀದಿಗೆ ಈ ನಿಯಮ ಪಾಲಿಸುವುದು ಕಡ್ದಾಯ!

Online Registration Form For Pumpset Repair Training-ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ:

ಉಚಿತ ತರಬೇತಿಯನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಮೊಬೈಲ್ ಮೂಲಕವೇ ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಅವಕಾಶವಿದ್ದು ಇದಕ್ಕಾಗಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ನೋಂದಣಿಯನ್ನು ಮಾಡಿಕೊಳ್ಳಬಹುದು.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Register Now" ಮಾಡಿ ಅಧಿಕೃತ ಗೂಗಲ್ ಪಾರ್ಮ್ ಅನ್ನು ಭೇಟಿ ಮಾಡಬೇಕು.

Step-2: ಗೂಗಲ್ ಪಾರ್ಮ್ ಅನ್ನು ಭೇಟಿ ಮಾಡಿದ ಬಳಿಕ ಇಲ್ಲಿ ನಿಮ್ಮ ಹೆಸರು, ವಿಳಾಸ ಮತ್ತು ಮೊಬೈಲ್ ನಂಬರ್ ಅನ್ನು ಹಾಕಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ನೋಂದಣಿಯನ್ನು ಮಾಡಿಕೊಳ್ಳಬೇಕು.

ಇದನ್ನೂ ಓದಿ: Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ!

Required Documents For Pumpset Repair Training - ತರಬೇತಿಯಲ್ಲಿ ಭಾಗವಹಿಸಲು ಅವಶ್ಯಕ ದಾಖಲೆಗಳು:

ಅಭ್ಯರ್ಥಿಗಳು ಈ ತರಬೇತಿಯನ್ನು ಪಡೆಯಲು ಅಗತ್ಯವಾಗಿ ಒದಗಿಸಬೇಕಾದ ದಾಖಲೆಗಳ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ಅರ್ಜಿದಾರರ ಅಧಾರ್ ಕಾರ್ಡ ಪ್ರತಿ/Aadhar.

ಬ್ಯಾಂಕ್ ಪಾಸ್ ಬುಕ್ ಪ್ರತಿ/Bank.

ರೇಶನ್ ಕಾರ್ಡ ಪ್ರತಿ/Ration Card.

ಮೊಬೈಲ್ ನಂಬರ್/Mobile Number.

ಪೋಟೋ/Photo.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: