Free School admission-ಉಚಿತ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ!

April 25, 2025 | Siddesh
Free School admission-ಉಚಿತ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ!
Share Now:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ(Free School admission) ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಈಗಾಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯನ್ನು(School admission) ಬರೆಯಲು ಹಾಲ್ ಟಿಕೆಟ್/ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದ್ದು ಪರೀಕ್ಷೆಯನ್ನು ಬರೆಯಲು ಹೋಗುವ ಮುನ್ನ ಹಾಲ್ ಟಿಕೆಟ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: Yashaswini Yojane-ಯಶಸ್ವಿನಿ ಯೋಜನೆಯಡಿ ಮಹತ್ವ ಬದಲಾವಣೆಗೆ ಶಿಫಾರಸು!

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಬರುವ ವಸತಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗವನ್ನು(Free School Admission Eaxm) ಮಾಡಲು ಪ್ರವೇಶವನ್ನು ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಉತ್ತಮ ಅಂಕವನ್ನು ಪಡೆಯುವುದು ಕಡ್ಡಾಯವಾಗಿದ್ದು ಇದರ ಕುರಿತು ಅಗತ್ಯ ಮತ್ತು ಉಪಯುಕ್ತ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

Free School Admission Eaxm Date-ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ:

ವಸತಿ ಶಾಲೆ ಪ್ರವೇಶಕ್ಕೆ ದಿನಾಂಕ: 27 ಏಪ್ರಿಲ್ 2025 ರಂದು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Horticulture Scheme-ತೋಟಗಾರಿಕೆ ಇಲಾಖೆಯಿಂದ ಈ ಬೆಳೆ ಬೆಳೆಯಲು 1,68 ಲಕ್ಷ ಸಬ್ಸಿಡಿ!

Free School Admission Eaxm Details-ಪರೀಕ್ಷೆ ವಿವರ ಹೀಗಿದೆ:

ಪ್ರವೇಶ ಪರೀಕ್ಷೆಯು ಒಟ್ಟು 100 ಅಂಕಗಳಿಗೆ ಇರಲಿದ್ದು ಬಹು ಆಯ್ಕೆ ಪ್ರಶ್ನೆಗಳನ್ನು ಹೊಂದಿರುತ್ತದೆ.

ಸದರಿ ಪ್ರಶ್ನೆಗಳಿಗೆ ಉತ್ತರಿಸಲು ಒಟ್ಟು 1 ಗಂಟೆ 20 ನಿಮಿಷ ಕಾಲಾವಕಾಶವನ್ನು ನಿಗದಿ ಮಾಡಲಾಗಿರುತ್ತದೆ.

ಶೇ 90% ಪ್ರಶ್ನೆಗಳು 4 ಮತ್ತು 5 ನೇ ತರಗತಿಯ ಪಠ್ಯಾಧಾರಿತವಾಗಿರುತ್ತವೆ.

Hall Ticket Download Link-ಪ್ರವೇಶ ಪತ್ರವನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ:

ಈಗಾಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯನ್ನು ಬರೆಯಲು ಹಾಲ್ ಟಿಕೆಟ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ವಿಧಾನವನ್ನು ಅನುಸರಿಸಬೇಕು.

Step-1: ಮೊಟ್ಟ ಮೊದಲಿಗೆ ಇಲ್ಲಿ ಕ್ಲಿಕ್ Download Now ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Ration Card-ಸರ್ಕಾರದಿಂದ ರೇಷನ್ ಕಾರ್ಡದಾರರಿಗೆ ಮತ್ತೊಂದು ಸಿಹಿ ಸುದ್ದಿ!

School admission (2)

Step-2: ಇದಾದ ಬಳಿಕ ಇಲ್ಲಿ ಮುಖಪುಟದ ಬಲಬದಿಯಲ್ಲಿ ಮಧ್ಯದಲ್ಲಿ ಕಾಣುವ "ಮತ್ತಷ್ಟು ಓದಿ" ಬಟನ್ ಮೇಲೆ ಕ್ಲಿಕ್ ಮಾಡಬೇಕು

Step-3: ನಂತರ ಇಲ್ಲಿ "ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ" ಈ ರೀತಿ ಕಾಣುವ ಬಟನ್ ಮೇಲೆ ಕ್ಲಿಕ್ ಮಾಡಿ "SAT ID / ಸಾಟ್ಸ್ ಸಂಖ್ಯೆ" ಅನ್ನು ನಮೂದಿಸಿ "Download" ಬಟನ್ ಮೇಲೆ ಕ್ಲಿಕ್ ಮಾಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Who Can Apply-ಪ್ರವೇಶ ಪಡೆಯಲು ಅರ್ಹರು:

  • ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ಅಂಕಪಟ್ಟಿಯನ್ನು ಸಲ್ಲಿಸಬೇಕು.
  • ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಯ ವಯಸ್ಸು 10 ರಿಂದ 13 ರ ಒಳಗಿರಬೇಕು.

ಇದನ್ನೂ ಓದಿ: Karnataka Male Mahiti-ರಾಜ್ಯದ ಮಳೆ ಮುನ್ಸೂಚನೆ!ಈ ದಿನದ ನಂತರ ಉತ್ತಮ ಮಳೆ ಸಾಧ್ಯತೆ!

How To Apply-ಅರ್ಜಿಯನ್ನು ಹೇಗೆ ಸಲ್ಲಿಸಬೇಕಾಗುತ್ತದೆ?

ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆಹ್ವಾನಿಸಿದ ಸಮಯದಲ್ಲಿ ನೇರವಾಗಿ ಸೇವಾ ಸಿಂದು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Required Documents For Free School Admission-ಅರ್ಜಿ ಸಲ್ಲಿಸಲು ದಾಖಲೆಗಳು:

ವಿದ್ಯಾರ್ಥಿಯು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ತಿಳಿಸಿರುವ ದಾಖಲೆಗಳನ್ನು ಹೊಂದಿರಬೇಕು.

1) ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ಸಂಖ್ಯೆ
2) ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ
3) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
4) ವಿದ್ಯಾರ್ಥಿಯ ಅಂಗವಿಕಲ ಪ್ರಮಾಣ ಪತ್ರ
5) 5ನೇ ತರಗತಿ ಅಂಕಪಟ್ಟಿ

ಅಧಿಕೃತ ಜಾಲತಾಣದ ಲಿಂಕ್-Click here

WhatsApp Group Join Now
Telegram Group Join Now
Share Now: