Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

December 7, 2025 | Siddesh
Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!
Share Now:

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ತಮ್ಮದೇ ಆದ ಸ್ವಂತ ಉದ್ಯೋಗವನ್ನು ಹೊಂದಲು ಉಚಿತವಾಗಿ ಹೊಲಿಗೆ ಯಂತ್ರವನ್ನು(Uchita Holige Yantra) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಹುತೇಕ ಮಹಿಳೆಯರು ಟೈಲರಿಂಗ್ ಕೌಶಲ್ಯವನ್ನು ಹೊಂದಿರುತ್ತಾರೆ ಇಂಹತ ಅಭ್ಯರ್ಥಿಗಳು ತಾವು ಇದ್ದ ಸ್ಥಳದಿಂದಲೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸ್ಥಿರತೆಯನ್ನು ಹೊಂದಲು ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಸಹಾಯಧನದಲ್ಲಿ ಹೊಲಿಗೆ ಯಂತ್ರವನ್ನು(Uchita Holige Yantra Application) ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

ಇಂದಿನ ಅಂಕಣದಲ್ಲಿ ನಾಗರಿಕರು ಯಾವೆಲ್ಲ ಯೋಜನೆಯಡಿ ಸಬ್ಸಿಡಿಯಲ್ಲಿ ಹೊಲಿಗೆ ಯಂತ್ರವನ್ನು(Free Sewing Machine Scheme) ಪಡೆಯಬಹುದು? ಪ್ರಸ್ತುತ ಯಾವೆಲ್ಲ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ? ಇದಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅಗತ್ಯ ದಾಖಲಾತಿಗಳೇನು? ಇನ್ನಿತರೆ ಅವಶ್ಯಕ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Free Sewing Machine Schemes In Karnataka-ಪ್ರಸ್ತುತ ಯಾವೆಲ್ಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ?

ನಮ್ಮ ರಾಜ್ಯದಲ್ಲಿ ಈ ಕೆಳಗಿನ ಪಟ್ಟಿಯಲ್ಲಿ ತಿಳಿಸಿರುವ ಯೋಜನೆಯಡಿ ಪ್ರಸ್ತುತ ಸಹಾಯಧನದಡಿಯಲ್ಲಿ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

A) ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆ: ಕಳೆದ 2-3 ವರ್ಷದಿಂದ ಕೇಂದ್ರ ಸರಕಾರವು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರಿಗೆ ಕೌಶಲ್ಯ ತರಬೇತಿಯನ್ನು ನೀಡಿ ಬಳಿಕ ಉಚಿತವಾಗಿ ಹೊಲಿಗೆ ಯಂತ್ರವನ್ನು ಈ ಯೋಜನೆಯಡಿ ವಿತರಣೆ ಮಾಡಲಾಗುತ್ತಿದೆ.

ಯೋಜನೆಯ ಕುರಿತು ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now

ಇದನ್ನೂ ಓದಿ: Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

B) ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ(PMEGP): ಅಡಿಯಲ್ಲಿ ಯಾವುದೇ ಬಗ್ಗೆಯ ಸ್ವಂತ ಉದ್ದಿಮೆಯನ್ನು ಆರಂಭಿಸಲು ಶೇ 35% ಸಬ್ಸಿಡಿಯನ್ನು ಪಡೆದುಕೊಂಡು ಹೊಲಿಗೆ ಯಂತ್ರಗಳನ್ನು ಖರೀದಿ ಮಾಡಲು ಅವಕಾಶವಿರುತ್ತದೆ.

PMEGP ಯೋಜನೆಯ ಅಧಿಕೃತ ಜಾಲತಾಣ- Apply Now

C) ವಿವಿಧ ನಿಗಮಗಳಿಂದ: ರಾಜ್ಯ ಸರ್ಕಾರದಡಿ ಬರುವ ಲಿಂಗಾಯತ/ಒಕ್ಕಲಿಗ/SC/ST ನಿಗಮಗಳಿಂದಲು ಸಹ ಹೊಲಿಗೆ ಯಂತ್ರಕ್ಕೆ ಸಬ್ಸಿಡಿಯನ್ನು ಪಡೆಯಲು ಅವಕಾಶವಿದ್ದು ಪ್ರಸ್ತುತ ಮರಾಠ ನಿಗಮದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

D) ಜಿಲ್ಲಾ ಕೈಗಾರಿಕಾ ಕೇಂದ್ರ: ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರಗಳಲ್ಲಿಯು ಸಹ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲು ಯೋಜನೆಗಳು ಲಭ್ಯವಿದ್ದು ಇದಕ್ಕಾಗಿ ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಲಿಂಕ್- Apply Now

ಇದನ್ನೂ ಓದಿ: Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

Who Can Apply For Sewing Machine Subsidy Scheme-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಅರ್ಜಿದಾರ ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಬೇರೆ ಸರಕಾರಿ ಯೋಜನೆಯಡಿ ಸಬ್ಸಿಡಿ ಪಡೆದಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಸರಕಾರಿ ನೌಕರರ ಕುಟುಂಬದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

Uchita Holige Yantra

ಇದನ್ನೂ ಓದಿ: Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

Sewing Machine Online Application-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಗಿಯುವುದ ಒಳಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಸಹಾಯಧನ ಪಡೆಯಲು ಅಭ್ಯರ್ಥಿಗಳು ನಿಮ್ಮ ಜಿಲ್ಲೆಯ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿಯನ್ನು ನೇರವಾಗಿ ಅಗತ್ಯ ದಾಖಲಾತಿಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇನ್ನು ವಿವಿಧ ನಿಗಮಗಳಿಂದ ಹಾಗೂ ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆ(PM-Vishwakarma Yojane),ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ(PMEGP) ಅಡಿಯಲ್ಲಿ ಸಬ್ಸಿಡಿಯನ್ನು ಪಡೆಯಲು ಸಂಬಂಧಪಟ್ಟ ಯೋಜನೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಇದಕ್ಕಾಗಿ ಅವಶ್ಯವಿರುವ ವೆಬ್ಸೈಟ್ ಲಿಂಕ್ ಅನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Documents-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:

ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಒದಗಿಸಬೇಕಾದ ದಾಖಲೆಗಳ ವಿವರ ಈ ಕೆಳಗಿನಂತಿವೆ:

  • ಆಧಾರ್ ಕಾರ್ಡ.
  • ಬ್ಯಾಂಕ್ ಪಾಸ್ ಬುಕ್.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಪೋಟೋ.
  • ಹೊಲಿಗೆ ತರಬೇತಿ ಪ್ರಮಾಣ ಪತ್ರ.
  • ವೋಟರ್ ಐಡಿ/ರೇಶನ್ ಕಾರ್ಡ.

ಕೋಲಾರ ಜಿಲ್ಲೆಯ ಅಧಿಕೃತ ಪ್ರಕಟಣೆ- Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: