Free Sewing Machine Scheme-ಈ ಜಿಲ್ಲೆಯ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!

August 12, 2026 | Siddesh
Free Sewing Machine Scheme-ಈ ಜಿಲ್ಲೆಯ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ!
Share Now:

2026-27 ನೇ ಸಾಲಿನಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆ ಅಡಿ ಗ್ರಾಮೀಣ ಕುಶಲಕರ್ಮಿಗಳಿಗೆ ಟೈಲರಿಂಗ್, ಮರಗೆಲಸ, ಗಾರೆ ಕೆಲಸ, ಕ್ಷೌರಿಕ, ದೋಬಿ, ಎಲೆಕ್ಟ್ರಿಕಲ್ ರಿಪೇರಿ, ಬೋರ್ವೆಲ್ ರಿಪೇರಿ / ಮೋಟಾರ್ ರಿವೈಂಡಿಂಗ್ ಉಪಕರಣಗಳನ್ನು ಉಚಿತವಾಗಿ ನೀಡಲು ರಾಜ್ಯ ಆಯ್ದ ಜಿಲ್ಲೆಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷದಂತೆ ಈ ಸಾಲಿನಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆ ಅಡಿ ಉಪನಿರ್ದೇಶಕರು ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗ ಕಚೇರಿಯಿಂದ ವಿವಿಧ ಉಪಕರಣಗಳನ್ನುಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Free Heavy Vehicle Training-ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

ಈ ಅಂಕಣದಲ್ಲಿ ಉಪಕರಣಗಳನ್ನು ಉಚಿತವಾಗಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು ಯಾವುವು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

Scheme Eligibility-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಒಂದು ಕುಟುಂಬಕ್ಕೆ ಒಂದೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
  • ವಿದ್ಯುತ್‌ ಚಾಲಿತ ಹೊಲಿಗೆಯಂತ್ರ, ಮರಗೆಲಸ, ಗಾರ್ಡನರ್, ಧೋಬಿ, ಕ್ಷೌರಿಕ, ಎಲೆಕ್ಟ್ರಿಕಲ್‌ ಟೂಲ್‌ಕಿಟ್‌, ಹಾಗೂ ಬಿಹೇವಿಯರ್‌ ರೇಡಿಯೋ/ಮೋಟಾರ್ 8 ಸ್ಟ್ರೋಕ್ ಉಪಕರಣಗಳನ್ನು ಪಡೆಯುವುದಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಕುಶಲಕರ್ಮಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷಗಳು ಇರತಕ್ಕದ್ದು.
  • ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: SSP Scholarship-2026: ವಿದ್ಯಾರ್ಥಿವೇತನ ಪಡೆಯಲು ಎಲ್ಲಾ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Sewing Machine Scheme In Karnataka-ಯಾವೆಲ್ಲ ಅರ್ಜಿಯಲ್ಲಿ ಅರ್ಜಿ ಅಹ್ವಾನಿಸಲಾಗಿದೆ?

ಪ್ರಸ್ತುತ ಈ ಕೆಳಗಿನ ಪಟ್ಟಿಯಲ್ಲಿರುವ ಜಿಲ್ಲೆಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು:

1) ಹಾಸನ
2) ಚಿಕ್ಕಮಗಳೂರು
3) ರಾಮನಗರ

How To Apply-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸಲು ಅವಕಾಶವಿದ್ದು ಒಂದು ನೇರವಾಗಿ ಅಗತ್ಯ ದಾಖಲೆಗಳ ಸಮೇತ ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ತಮ್ಮ ಮೊಬೈಲ್ ಮೂಲಕವೇ ಈ ಕೆಳಗೆ ಹಾಕಿರುವ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.

  • Online Application-ಹಾಸನ ಜಿಲ್ಲೆಯವರಿಗೆ ಅರ್ಜಿ ಸಲ್ಲಿಸಲು ಲಿಂಕ್- Apply Now
  • Other Districts-ಇತರೆ ಜಿಲ್ಲೆಯ ಅರ್ಜಿದಾರರಿಗೆ- Apply Now

ಇದನ್ನೂ ಓದಿ: Land RTC-ಜಮೀನಿನ ಪಹಣಿಯ ಹಿಸ್ಸಾ ಸಂಖ್ಯೆ ಎಂದರೇನು? ಹಿಸ್ಸಾ ಸಂಖ್ಯೆ ಹೇಗೆ ಬರುತ್ತದೆ?ಇಲ್ಲಿದೆ ಅಗತ್ಯ ಮಾಹಿತಿ!

Free Sewing Machine Scheme notification

ಇದನ್ನೂ ಓದಿ: Scholorship Amount-BE/B.Tech ವಿದ್ಯಾರ್ಥಿಗಳಿಗೆ ₹70,250 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು:

ಅರ್ಹ ಮತ್ತು ಆಸಕ್ತ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಮಾಹಿತಿ ಹೀಗಿದೆ:

  • ಹಾಸನ ಜಿಲ್ಲೆ- 15-09-2026
  • ಚಿಕ್ಕಮಗಳೂರು- 30-09-2026
  • ರಾಮನಗರ- 05-09-2026

Required Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ.
  • ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣ ಪತ್ರ/ಎಸ್‌.ಎಸ್‌.ಎಲ್‌.ಸಿ. ಅಂಕಪಟ್ಟಿ/ ಇನ್ನಿತರ ಪ್ರಮಾಣ ಪತ್ರ)
  • ಜಾತಿ ಪ್ರಮಾಣ ಪತ್ರ.
  • ಬಿ.ಪಿ.ಎಲ್‌./ಎ.ಪಿ.ಎಲ್‌. ಪಡಿತರ ಚೀಟಿ.
  • ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಂದ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪತ್ರ/ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಪ್ರಮಾಣ ಪತ್ರ/ಯಾವುದೇ ಸರ್ಕಾರಿ ಸಂಸ್ಥೆಗಳಿಂದ ತರಬೇತಿ ಪಡೆದಿದ್ದರೆ ತರಬೇತಿ ಪ್ರಮಾಣ ಪತ್ರ. (ಟೈಲರಿಂಗ್, ಮಂಗಲಸ, ಗಾರ್ಡನರ್, ಧೋಬಿ, ಕ್ಷೌರಿಕ, ಎಲೆಕ್ಟ್ರಿಕಲ್‌ ರೇಡಿಯೋ, ಬಿಹೇವಿಯರ್‌ ರೇಡಿಯೋ/ಮೋಟಾರ್ 8 ಸ್ಟ್ರೋಕ್).
  • ವಿಕಲಚೇತನರ ಪ್ರಮಾಣ ಪತ್ರ (ಅನ್ವಯವಾದಲ್ಲಿ).
  • ಮಾಜಿ ಸೈನಿಕರ ಪ್ರಮಾಣ ಪತ್ರ (ಅನ್ವಯವಾದಲ್ಲಿ)

ಇದನ್ನೂ ಓದಿ: Ration Card-ರೇಷನ್ ಕಾರ್ಡ್‍ದಾರರ ಗಮನಕ್ಕೆ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಜಂಟಿಯಾಗಿ ವಿತರಣೆ!

Selection Method-ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ನಿಗದಿಪಡಿಸಿರುವ ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದಲ್ಲಿ, ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಾಕಿ ಉಳಿದ ಜಿಲ್ಲೆಯ ಆಸಕ್ತ ಅರ್ಜಿದಾರರು ನಿಮ್ಮ ನಿಮ್ಮ ಜಿಲ್ಲೆಯ ಉಪನಿರ್ದೇಶಕರು ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಯೋಜನೆ ಲಭ್ಯತೆ ಮತ್ತು ಅರ್ಜಿ ಆಹ್ವಾನದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು.

ಈ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಿಮ್ಮ ಜಿಲ್ಲೆಯ ಉಪನಿರ್ದೇಶಕರು ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಮಾಹಿತಿಯನ್ನು ಪಡೆಯಿರಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: