Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!

February 13, 2026 | Siddesh
Free Skill Training-31 ದಿನದ ಉಚಿತ ಎಂಬ್ರಾಯಡರಿ ತರಬೇತಿ ಪಡೆಯಲು ಅರ್ಜಿ ಆಹ್ವಾನ!
Share Now:

ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಬಯಸುವ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು (RSETI) ಒಂದು ಮಹತ್ವದ ತರಬೇತಿ ಶಿಬಿರವನ್ನು ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋನ್ನಹಳ್ಳಿಪುರದಲ್ಲಿರುವ ಈ ಸಂಸ್ಥೆಯು, ನಿರುದ್ಯೋಗಿ ಮಹಿಳೆಯರಿಗೆ ತಮ್ಮ ಕಾಲ ಮೇಲೆ ತಾವು ನಿಲ್ಲುವಂತೆ ಮಾಡಲು ಉಚಿತ ವೃತ್ತಿಪರ ತರಬೇತಿಯನ್ನು ನೀಡಲು ಮುಂದಾಗಿದೆ.

ಈ ಲೇಖನದಲ್ಲಿ ನಾವು ಕೆನರಾ ಬ್ಯಾಂಕ್ ಆಯೋಜಿಸಿರುವ 'ಉಚಿತ ಎಂಬ್ರಾಯ್ಡರಿ(Embroidery) ಮತ್ತು ಫ್ಯಾಬ್ರಿಕ್ ಪೇಂಟಿಂಗ್' ತರಬೇತಿಯ ವಿವರಗಳು, ಅರ್ಹತೆಗಳು ಮತ್ತು ತರಬೇತಿಯ(Free Embroidery Training)ಅವಧಿಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಮಾರ್ಚ್ ತಿಂಗಳ ಮೊದಲ ವಾರದಿಂದ ಆರಂಭವಾಗುವ ಈ ಶಿಬಿರವು ಅಭ್ಯರ್ಥಿಗಳಿಗೆ ಕೇವಲ ತರಬೇತಿಯನ್ನು ಮಾತ್ರ ನೀಡದೆ, ಅವರಿಗೆ ಉಚಿತ ಊಟ ಮತ್ತು ವಸತಿ ಸೌಕರ್ಯವನ್ನೂ ಸಹ ಒದಗಿಸಲಿದೆ.

ಇದನ್ನೂ ಓದಿ: Military College Application-ಮಿಲಿಟರಿ ಕಾಲೇಜ್ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ!

ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ವಿತರಿಸಲಾಗುತ್ತದೆ. ಇದು ಮುಂದೆ ಅಭ್ಯರ್ಥಿಗಳು ಸ್ವಂತ ಉದ್ಯಮ ಆರಂಭಿಸಲು ಬ್ಯಾಂಲ್ ಮೂಲಕ ಸಾಲವನ್ನು ಪಡೆಯಲು ನೆರವು ನೀಡುವುದರ ಜೊತೆಗೆ ಅಥವಾ ಉದ್ಯೋಗ(Free Embroidery Training Application) ಪಡೆಯಲು ಸಹಕಾರಿಯಾಗಲಿದೆ. ಆಸಕ್ತ ಮಹಿಳೆಯರು ಈ ಸದವಕಾಶವನ್ನು ಹೇಗೆ ಬಳಸಿಕೊಳ್ಳಬೇಕು ಮತ್ತು ನೋಂದಣಿ ಪ್ರಕ್ರಿಯೆ ಏನು ಎಂಬುದನ್ನು ಕೆಳಗೆ ವಿವರಿಸಲಾಗಿದೆ.

Who Can Apply For Free Embroidery Training-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉಚಿತ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಯಲ್ಲಿ ಭಾಗವಹಿಸಲು ಈ ಕೆಳಗಿನ ಪಟ್ಟಿಯಲ್ಲಿರು ಅರ್ಹತಾ ಮಾನದಂಡಗಳನ್ನು ಹೊಂದಿರುವರು ನೋಂದಣಿಯನ್ನು ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ತರಬೇತಿಯನ್ನು ಪಡೆಯಲು ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು.

ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Free Embroidery Training Topics-ತರಬೇತಿಯಲ್ಲಿ ಯಾವೆಲ್ಲ ವಿಷಯದ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ?

ಒಟ್ಟು 31 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಈ ಕೆಳಗಿನ ಕೌಶಲ್ಯಗಳನ್ನು ಕಲಿಸಲಾಗುತ್ತದೆ:

ಎಂಬ್ರಾಯ್ಡರಿ ಕೆಲಸ: ಬ್ಲೌಸ್‌ಗಳಿಗೆ ಆರಿ ವರ್ಕ್ (Aari Work) ಮಾಡುವ ಕುರಿತು ನುರಿತ ತರಬೇತಿದಾರರಿಂದ ಪ್ರಾಯೋಗಿಕವಾಗಿ ಮಾಹಿತಿ ತಿಳಿಸಲಾಗುತ್ತದೆ.

ಸ್ಯಾರಿ ಕುಚ್ಚು: ಸೀರೆಗಳಿಗೆ ಸುಂದರವಾದ ಕುಚ್ಚು ಹಾಕುವ ವಿಧಾನದ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ.

ಫ್ಯಾಬ್ರಿಕ್ ಪೇಂಟಿಂಗ್: ಬಟ್ಟೆಗಳ ಮೇಲೆ ವಿವಿಧ ರೀತಿಯ ಪೇಂಟಿಂಗ್ ಮಾಡುವ ವಿಧಾನ ಬಗ್ಗೆ ಮಾಹಿತಿ ತಿಳಿಸಲಾಗುತ್ತದೆ.

ಸಾಲ ಪಡೆಯುವ ಬಗ್ಗೆ ಮಾರ್ಗದರ್ಶ: ತರಬೇತಿಯನ್ನು ಪಡೆದ ಬಳಿಕ ಅಭ್ಯರ್ಥಿಗಳು ಸ್ವಂತ ಉದ್ದಿಮೆಯನ್ನು ಆರಂಭಿಸಲು ಬ್ಯಾಂಕ್ ಮೂಲಕ ಸಾಲ ಪಡೆಯಲು ತರಬೇತಿ ಕೇಂದ್ರದಿಂದ ಮಾರ್ಗದರ್ಶನ ನೀಡಲಾಗುತ್ತದೆ.

ಇದನ್ನೂ ಓದಿ: Goods Vehicle Subsidy-ಗೂಡ್ಸ್ ವಾಹನ ಖರೀದಿ ಮಾಡಲು 3 ಲಕ್ಷ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

Free Embroidery Training

ಇದನ್ನೂ ಓದಿ: Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

Free Embroidery Training Registration-ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳುವುದು ಹೇಗೆ?

ಉಚಿತ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯನ್ನು ಹೊಂದಿರುವವರು ತರಬೇತಿಯಲ್ಲಿ ಭಾಗವಹಿಸಲು ಮುಂಚಿತವಾಗಿ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ 9505894247, 8970476050, 9591514154, 6363139123, 9686248369. ಹೆಸರನ್ನು ನೋಂದಣಿ ಮಾಡಿಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

Required Documents-ತರಬೇತಿಯಲ್ಲಿ ಭಾಗವಹಿಸಲು ಅವಶ್ಯಕ ದಾಖಲೆಗಳು:

  • ಅಭ್ಯರ್ಥಿಯ ಆಧಾರ್ ಕಾರ್ಡ
  • ಪಾನ್ ಕಾರ್ಡ
  • ರೇಶನ್ ಕಾರ್ಡ
  • ಬ್ಯಾಂಕ್ ಪಾಸ್ ಬುಕ್
  • ಪೋಟೋ-4

ಇದನ್ನೂ ಓದಿ: Free Menstrual Cup-ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಹಾಗೂ ಮುಟ್ಟಿನ ಕಪ್!

Interview Date-ನೇರ ಸಂದರ್ಶನ ನಡೆಯುವ ದಿನಾಂಕ:

ನೇರ ಸಂದರ್ಶನ ದಿನಾಂಕ 21 ಫೆಬ್ರವರಿ 2025 ರಂದು ಶನಿವಾರ ಬೆಳಿಗ್ಗೆ 9:00 ಗಂಟೆಗೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.

Training Address-ತರಬೇತಿ ಕೇಂದ್ರದ ವಿಳಾಸ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI), ಸೋನ್ನಹಳ್ಳಿಪುರ, ಹಸಿಗಾಲ (ಅಂಚೆ), ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

Helpline Numbers-ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9591514154, 6363139123, 9686248369

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: