Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

July 17, 2025 | Siddesh
Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!
Share Now:

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ(Karnataka Arya Vaishya Nigama)ವಾಸವಿ ಜಲ ಶಕ್ತಿ/ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ನಿಗಮದಡಿ ಬರುವ ವರ್ಗಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ವರ್ಗದ ಸಣ್ಣ ರೈತರಿಗೆ ತೋಟಗಾರಿಕೆ ಮತ್ತು ಕೃಷಿ ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯವನ್ನು ಹೊಂದಲು ನೆರವು ನೀಡಲು ವಾಸವಿ ಜಲ ಶಕ್ತಿ/ಗಂಗಾ ಕಲ್ಯಾಣ(Ganga Kalyana)ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

ರಾಜ್ಯದಲ್ಲಿ ವರ್ಗವಾರು 9 ಕ್ಕೂ ಹೆಚ್ಚಿನ ನಿಗಮಗಳಿದ್ದು ಬಹುತೇಕ ಎಲ್ಲಾ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana Yojana)ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಪ್ರಸ್ತುತ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಪ್ರಸ್ತುತ ಈ ಲೇಖನದಲ್ಲಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇನ್ನಿತರೆ ಅಗತ್ಯ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

Ganga Kalyana Scheme-2025: ವಾಸವಿ ಜಲ ಶಕ್ತಿ/ಗಂಗಾ ಕಲ್ಯಾಣ ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಾಸವಿ ಜಲ ಶಕ್ತಿ/ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳಿಗೆ ಕೊಳವೆ ಬಾವಿಯನ್ನು ಕೊರೆಸಲು ಅತೀ ಬಡ್ಡಿದರ ಶೇ.4 ರಂತೆ ಗರಿಷ್ಠ 2.00 ಲಕ್ಷ ಸಾಲ ಹಾಗೂ ವಿದ್ಯುದ್ದೀಕರಣಕ್ಕೆ ರೂ.75,000/-ಗಳ ಸಬ್ಸಿಡಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Scholarship-HDFC ಬ್ಯಾಂಕಿನಿಂದ Parivartan ಯೋಜನೆಯಡಿ ₹75,000 ವಿದ್ಯಾರ್ಥಿವೇತನ!

Arya Vaishya Nigama-ಇತರೆ ಯೋಜನೆಯಡಿ ಅರ್ಜಿ ಸಲ್ಲಿಸಲು ಸಹ ಅವಕಾಶ:

ವಾಸವಿ ಜಲ ಶಕ್ತಿ ಯೋಜನೆಯ ಜೊತೆಯಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ / ವಾಹಿನಿ ಯೋಜನೆ, ಅರಿವು ಶೈ ಕ್ಷಣಿಕ ಸಾಲ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಸಹ ಅರ್ಜಿಯನ್ನು ಆಹ್ವಾನಿಸಲಾಗಿದೆ.

How To Apply-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಈ ಮೇಲೆ ತಿಳಿಸಿರುವ ಯೋಜನೆಗಳ ಪ್ರಯೋಜನವನ್ನು ಪಡೆಯಲು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ನೇರವಾಗಿ ನಿಗಮದ ಅಧಿಕೃತ ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

Last Date For Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2025

Who Can Apply For Ganga Kalyana Yojana-ಅರ್ಜಿ ಸಲ್ಲಿಸಲು ನಿಗಮದಿಂದ ನಿಗದಿಪಡಿಸಿದ ಮಾನದಂಡಗಳು:

  • ಈ ಯೋಜನೆಗಳ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.
  • ಅರ್ಜಿದಾರರು "ನಮೂನೆ-ಜಿ" ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆದಿರಬೇಕು.
  • ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.6,00,000/- ಗಳ ಮಿತಿ ಒಳಗಿರಬೇಕು.
  • ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷ ಒಳಗಿನವರಾಗಿರಬೇಕು.
  • ಅರ್ಜಿದಾರರು ಸಣ್ಣ ರೈತರ ಕುಟುಂಬಕ್ಕೆ ಸೇರಿದವರಾಗಿದ್ದು, ಒಂದೇ ಸ್ಥಳದಲ್ಲಿ ಇರುವ ಕನಿಷ್ಠ 2 ಎಕರೆ ಮತ್ತು ಗರಿಷ್ಠ 15 ಎಕರೆ ಜಮೀನು ಹೊಂದಿರಬೇಕು.
  • ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು, ಶೇ.5ರಷ್ಟು ವಿಶೇಷಚೇತನರಿಗೆ ಮತ್ತು ಶೇ.5ರಷ್ಟು ತೃತೀಯಲಿಂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಇದನ್ನೂ ಓದಿ: Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

  • ಈ ಯೋಜನೆಯಡಿಯಲ್ಲಿ ಸಾಲವನ್ನು ಭದ್ರತೆ ರಹಿತವಾಗಿ (Collateral Security Free Loan) ನೀಡಲಾಗುವುದು.
  • ಅರ್ಜಿದಾರರು ಸಣ್ಣ ರೈತರಾಗಿರುವ ಬಗ್ಗೆ ಹಾಗೂ ನೀರಾವರಿ ಸೌಲಭ್ಯ ಹೊಂದಿಲ್ಲದೇ ಇರುವ ಬಗ್ಗೆ ಕಂದಾಯ ಅಧಿಕಾರಿಗಳಿಂದ ಪಡೆದ ಧೃಡೀಕರಣ ಪತ್ರ ಹೊಂದಿರಬೇಕು.
  • ಘಟಕದ ವೆಚ್ಚವು ರೂ.2,00,000/- ಗಳಿಗಿಂತ ಹೆಚ್ಚಿದ್ದಲ್ಲಿ ಫಲಾನುಭವಿಯು ಸ್ವಂತ ವೆಚ್ಚವನ್ನು ಭರಿಸುವುದಾಗಿ ಸ್ವಯಂ ಘೋಷಣಾ ಪತ್ರವನ್ನು ನೀಡತಕ್ಕದ್ದು.
  • ಅಭ್ಯರ್ಥಿಯು ಕಡ್ಡಾಯವಾಗಿ ಹತ್ತಿರದ ಕೇಂದ್ರಗಳಿಗೆ ಭೇಟಿ ನೀಡಿ ಸಣ್ಣ ರೈತರಾಗಿರುವ ಬಗ್ಗೆ ಎಲ್ಲಾ ದಾಖಲೆಗಳನ್ನು ನೀಡಿ FRUITS(Farmers Registration and Unified Beneficiary Information System) ಐ.ಡಿಯನ್ನು ಪಡೆದುಕೊಳ್ಳುವುದು. FRUITS ಐ.ಡಿ ಇಲ್ಲದೇ ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಿರುವುದಿಲ್ಲ.
  • ಫಲಾನುಭವಿಯು ಕಡ್ಡಾಯವಾಗಿ BEE (Bureau of Energy Efficiency) ರವರು ದೃಢೀಕರಿಸಿದ 4 ಅಥವಾ 5 ರೇಟಿಂಗ್ ಸಬ್ಮರ್ಸಿಬಲ್ ಪಂಪ್ಸೆಟ್ಗಳನ್ನು ಅಳವಡಿಸುವುದು ಪಂಪ್ಸೆಟ್ ಹಾಗೂ ಪೂರಕ ಸಾಮಗ್ರಿಗಳು ಐ.ಎಸ್.ಐ ಗುಣಮಟ್ಟದಾಗಿರಬೇಕು.
  • ಕೊಳವೆ ಬಾವಿ ಕೊರೆದ ನಂತರ ಸಾಲವನ್ನು 3 ವರ್ಷದ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಶೇ.4ರಷ್ಟು ಬಡ್ಡಿದರದಲ್ಲಿ 6 ತಿಂಗಳುಗಳ ವಿರಾಮ ಅವಧಿಯ ನಂತರ Online ಮೂಲಕ ಮರುಪಾತಿಸಬೇಕು.
  • ಕೊಳವೆ ಬಾವಿ ಕೊರೆದ ನಂತರ ನೀರಿಲ್ಲದಿದ್ದರೆ ಅಂತಹ ಸಂದಂರ್ಭದಲ್ಲೂ ಸಹ ಅಭ್ಯರ್ಥಿಯು ಪಡೆದ ಸಾಲವನ್ನು 3 ವರ್ಷದ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮಾತ್ರ ಮರುಪಾವತಿಸಬೇಕು ಎಂದು ನಿಗಮದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Online Apply Method-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅರ್ಜಿದಾರರು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ನಿಗಮದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

Step-1: ಮೊಟ್ಟ ಮೊದಲಿಗೆ ಇಲ್ಲಿ ಕ್ಲಿಕ್ "Apply Now" ಮಾಡಿ ಅಧಿಕೃತ ನಿಗಮದ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Awas Yojana-ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಆಹ್ವಾನ!

Ganga Kalyana

Step-2: ಅರ್ಜಿ ಸಲ್ಲಿಸಲು ಜಾಲತಾಣವನ್ನು ಪ್ರವೇಶ ಮಾಡಿದ ಬಳಿಕ ಈ ಪೇಜ್ ನಲ್ಲಿ ಕೊನೆಯಲ್ಲಿ ಕಾಣುವ "Click To Proceed" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಗೆ ಬರುವ OTP ಆನ್ನು ನಮೂದಿಸಿ Submit ಬಟನ್ ಮೇಲೆ ಕ್ಲಿಕ್ ಮಾಡಿದರೆ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.

Step-3: ಅರ್ಜಿ ನಮೂನೆ ತೆರೆದ ಬಳಿಕ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರ ಮತ್ತು ದಾಖಲೆಗಳನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

Selection Method-ಫಲಾನುಭವಿ ಆಯ್ಕೆ ವಿಧಾನ:

ಒಟ್ಟೂ ಸಲ್ಲಿಕೆಯಾದ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿದಾರರಿಗೆ ನಿಗಮದ ವಿಶೇಷ ಸೂಚನೆಗಳು:

ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು.

Helpline-ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ- 9448451111
Website-ನಿಗಮದ ಅಧಿಕೃತ ವೆಬ್ಸೈಟ್-Click Here
Online Application-ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- Apply Now

WhatsApp Group Join Now
Telegram Group Join Now
Share Now: