Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 18, 2024 | Siddesh
Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!
Share Now:

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

ಇದನ್ನೂ ಓದಿ: Best mileage bikes-ಅತಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳು!ಫುಲ್ ಟ್ಯಾಂಕ್ ಮಾಡಿದರೆ 700-750 km ಓಡಿಸಬಹುದು!

Ganga kalyana online application- ಅರ್ಜಿ ಸಲ್ಲಿಕೆ ಪ್ರಾರಂಭ:

ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು 23 ಆಕ್ಟೋಬರ್ 2024 ರಿಂದ ಅವಕಾಶ ಮಾಡಿಕೊಡಲಾಗಿದೆ.

Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು 23 ನವೆಂಬರ್ 2024 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ: Bele vime parihara-ಬೆಳೆ ವಿಮೆ ಈ ಜಿಲ್ಲೆಯ ರೈತರಿಗೆ 45 ಕೋಟಿ ಬಿಡುಗಡೆ!

Ganga Kalyana

Ganga kalyan apply method-ಅರ್ಜಿ ಸಲ್ಲಿಸುವ ವಿಧಾನ:

ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಸೇವಾ ಸಿಂದು ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕಂಪ್ಯೂಟರ್ ಸೆಂಟರ್ ಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್: Apply Now

Helpline number-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 9482 300 400

ಇದನ್ನೂ ಓದಿ: SIP- ಪ್ರತಿ ತಿಂಗಳು ರೂ 1,000 ಸಾವಿರ ಉಳಿತಾಯ ಮಾಡಿ 12 ಲಕ್ಷ ಆದಾಯಗಳಿಸಿ!

ಗಂಗಾ ಕಲ್ಯಾಣ ಯೋಜನೆ ಸಹಾಯಧನ ವಿವರ ಹೀಗಿದೆ:

ಗಂಗಾ ಕಲ್ಯಾಣ ಯೋಜನೆಯಡಿ ಅಂತರ್ಜಲ ಮಟ್ಟ ಕುಸಿದಿರುವ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕ ವೆಚ್ಚರೂ. 4.75 ಲಕ್ಷವಿದ್ದು, ಇದರಲ್ಲಿ ರೂ. 4.25 ಲಕ್ಷ ಸಹಾಯಧನ, ರೂ.50,000/- ಅವಧಿಸಾಲವಾಗಿದ್ದು ರೂ.75,000/- ಗಳು ವಿದ್ಯುದ್ದೀಕರಣ ವೆಚ್ಚವಾಗಿ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುತ್ತದೆ.

ಉಳಿದ ಇತರೆ 24 ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.3.75 ಲಕ್ಷ ವಿದ್ದು, ಇದರಲ್ಲಿ ರೂ.3.25 ಲಕ್ಷ ಸಹಾಯಧನ ರೂ.50,000/ ಅವಧಿಸಾಲವಾಗಿರುತ್ತದೆ.

ಸಹಾಯಧನದಲ್ಲಿ ರೂ.75,000/- ವಿದ್ಯುದ್ದೀಕರಣ ವೆಚ್ಚವಾಗಿ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುವುದು ಹಾಗೂ ಸಾಲದ ಮೊತ್ತವನ್ನು 6 ಅರ್ಧ ವಾರ್ಷಿಕ ಸಮ ಕಂತುಗಳಲ್ಲಿ ಶೇ4 ರಷ್ಟು ಬಡ್ಡಿ ದರದಲ್ಲಿ ಮರು ಪಾವತಿ ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

Who can apply for ganga kalyana yojana-ಅರ್ಜಿ ಸಲ್ಲಿಸಲು ಅರ್ಹರು:

ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಈಗಾಗಲೇ ನೀರಾವರಿ ಸೌಲಭ್ಯ(Borewell)ಹೊಂದಿರುವವರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿದಾರರ ಹೆಸರಿನಲ್ಲಿ ಕೃಷಿ ಜಮೀನು ಹೊಂದಿರುವುದು ಕಡ್ಡಾಯವಾಗಿದೆ.

ಅರ್ಜಿದಾರರು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.

ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

ಕಳೆದ ವರ್ಷ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ ಆ ಅರ್ಜಿಯೇ ಈ ಬಾರಿಯ ಲೆಕ್ಕಕೆ ಸೇರಿಸಲಾಗುತ್ತದೆ.

ಇದನ್ನೂ ಓದಿ: Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

Documents- ಅರ್ಜಿ ಸಲ್ಲಿಸಲು ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ
2) ಪೋಟೋ
3) ಜಾತಿ ಮತ್ತು ಆಧಾಯ ಪ್ರಮಾಣ ಪತ್ರ
4) ಹಿಡುವಳಿ ಪ್ರಮಾಣ ಪತ್ರ
5) ಜಮೀನಿನ ಪಹಣಿ/ಊತಾರ್/RTC
6) ಬಾವಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ (ಗ್ರಾಮ ಲೆಕ್ಕಾಧಿಕಾರಿಗಳ ಬಳಿ ಪಡೆಯಬೇಕು)
7) ಬ್ಯಾಂಕ್ ಪಾಸ್ ಬುಕ್ ಪ್ರತಿ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: