Ganga Kalyana Yojana-ಬೋರ್ವೆಲ್ ಕೊರೆಸಲು ₹4.0 ಲಕ್ಷ ಸಹಾಯಧನ! ಇಲ್ಲಿದೆ ಸಂಪೂರ್ಣ ವಿವರ!

December 20, 2025 | Siddesh
Ganga Kalyana Yojana-ಬೋರ್ವೆಲ್ ಕೊರೆಸಲು ₹4.0 ಲಕ್ಷ ಸಹಾಯಧನ! ಇಲ್ಲಿದೆ ಸಂಪೂರ್ಣ ವಿವರ!
Share Now:

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ(Ganga Kalyana Application)ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ₹4.0 ಲಕ್ಷ ಸಹಾಯಧನವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇಂದೇ ಕೊನೆಯ ದಿನಾಂಕವಾಗಿದ್ದು ರೈತರು ಈ ಸದುಪಯೋಗವನ್ನು ಪಡೆಯಲು ಕೋರಿದೆ.

ಈ ಯೋಜನೆಯ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ(Ganga Kalyana) ವಾಸಿಸುವ ಕ್ರಿಶ್ಚಿಯನ್ ಸಮುದಾಯದಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದ್ದಲ್ಲಿ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಇದನ್ನೂ ಓದಿ: Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

ಈ ನಿಗಮದ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಲು ಅರ್ಹರು? ಮುಕ್ತಾಯದ ದಿನಾಂಕ ಯಾವುದು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಸಂಬದಿಸಿದ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Subsidy Amount-ಗಂಗಾ ಕಲ್ಯಾಣ ಯೋಜನೆಯಡಿ ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ?

ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಆಯ್ಕೆಯಾದ ಅರ್ಹ ರೈತರಿಗೆ ಕೊಳವೆ ಬಾವಿಯನ್ನು ಕೊರೆಸಲು ₹4.0 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.

1.ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ₹4.0 ಲಕ್ಷ ಸಹಾಯಧನವನ್ನು ನಿಗದಿಪಡಿಸಿರುತ್ತದೆ. ಹಾಗೆಯೇ ಇತರೆ ಜಿಲ್ಲೆಗಳಿಗೆ ರೂ. ₹3.0 ಲಕ್ಷಗಳನ್ನು ಸಹಾಯಧನವನ್ನು ನಿಗದಿಪಡಿಸಲಾಗಿರುತ್ತದೆ.

ಇದನ್ನೂ ಓದಿ: BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

    Last Date For Ganga Kalyana Application -ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 20 ಡಿಸೆಂಬರ್ 2025

    Who Can Apply this scheme-ಈ ಯೋಜನೆಯ ಅಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    ಅರ್ಜಿದಾರ ರೈತರು ಕರ್ನಾಟಕದ ಕ್ರಿಶ್ಚಿಯನ್ ಸಮುದಾಯಕ್ಕೆ (ಅಲ್ಪಸಂಖ್ಯಾತ) ಸೇರಿರಬೇಕು.

    ಅರ್ಜಿದಾರ ರೈತರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.

    ಅರ್ಜಿದಾರರು ಸಣ್ಣ /ಅತಿ ಸಣ್ಣ ಹಿಡುವಳಿದಾರ ರೈತರಾಗಿರಬೇಕು.

    ಅರ್ಜಿದಾರರ ವಯಸ್ಸು 18 ವರ್ಷ ಅಥವಾ ಅದಕ್ಕಿಂತ ಹೆಚ್ಚಾಗಿರಬೇಕು.

    ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಖುಷ್ಕಿ ಜಮೀನಿರಬೇಕು,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೋದಿರತಕ್ಕದ್ದು.

    ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 6.00 ಲಕ್ಷದ ಒಳಗಿರಬೇಕು.

    ಈ ಯೋಜನೆಗೆ ಅರ್ಜಿಸಲ್ಲಿಸುವ ಯಾವುದೇ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈ ಹಿಂದೆ KMDC/KCCDC ಯಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು (ಅರಿವು ಮತ್ತು ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಗಳನ್ನು ಹೊರತುಪಡಿಸಿ).

    ಅರ್ಜಿದಾರರ ಕೃಷಿ ಜಮೀನಿನಲ್ಲಿ ಕೊಳವೆ ಬಾವಿ ಇಲ್ಲ ಎಂಬ ಕುರಿತು ಕಂದಾಯ ಇಲಾಖೆಯಿಂದ ನೀಡಿದ ಪ್ರಮಾಣಪತ್ರ ಹೊಂದಿರಬೇಕು.

    ಇದನ್ನೂ ಓದಿ: Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

    What are the documents required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

    • ರೈತರ ಆಧಾರ್ ಕಾರ್ಡ್/Adhar Card.
    • ವೋಟರ್ ಐಡಿ/Voter ID.
    • ಜಾತಿ ಪ್ರಮಾಣ ಪತ್ರ/Caste Certificate.
    • ಆದಾಯ ಪ್ರಮಾಣ ಪತ್ರ/Income Certificate.
    • ಸಣ್ಣ/ ಅತಿ ಸಣ್ಣ ಹಿಡುವಳಿದಾರ ಪ್ರಮಾಣಪತ್ರ/Small Farmer Certificate.
    • ಭೂ-ಕಂದಾಯ ಪಾವತಿ ರಶೀದಿ.
    • ಜಮೀನಿನ ಪಹಣಿ/RTC.
    • ಅರ್ಜಿದಾರರ ಕೃಷಿ ಜಮೀನಿನಲ್ಲಿ ಕೊಳವೆ ಬಾವಿ ಇಲ್ಲ ಎಂಬ ಕುರಿತು ಕಂದಾಯ ಇಲಾಖೆಯಿಂದ ನೀಡಿದ ಪ್ರಮಾಣಪತ್ರ.
    • ಪೋಟೋ/Photo copy.
    • ಬ್ಯಾಂಕ್ ಪಾಸ್ ಬುಕ್/Bank Pass Book.

    ಇದನ್ನೂ ಓದಿ: PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

    ganga kalyana application

    ಇದನ್ನೂ ಓದಿ: Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

    Online Application Process-ಅರ್ಜಿಯನ್ನು ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ:

    Step-1: ಅರ್ಜಿದಾರ ರೈತರು ಮೊದಲಿಗೆ ಈ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ "ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ"ದ ಜಾಲತಾಣವನ್ನು ಪ್ರವೇಶ ಮಾಡಬೇಕು.

    Step-2: ತದನಂತರ ಅದೇ ಪುಟದಲ್ಲಿ ಕಾಣುವ "ಗಂಗಾ ಕಲ್ಯಾಣ ಯೋಜನೆ" ಯ ಆಯ್ಕೆ ಯ ಬಟನ್ ಮುಂದೆ ಕಾಣುವ "ಅರ್ಜಿ ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ.

    Step-3: ರೈತರು ನಿವೇನಾದಲು ಮೊದಲ ಬಾರಿಗೆ ಈ ವೆಬ್ಸೈಟ ಅನ್ನು ಪ್ರವೇಶ ಮಾಡುತ್ತಿರುವ ಅರ್ಜಿದಾರರು ಹೊಸ ಬಳಕೆದಾರರ ? ಇಲ್ಲಿ ನೋಂದಾಯಿಸಿ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ಹಾಕಿ OTP ಅನ್ನು ಪಡೆದು ಬಳಕೆದಾರ ಐಡಿಯನ್ನು ನೋಂದಣಿ ಮಾಡಿಕೊಂಡು ಪಾಸ್ವರ್ಡ್ ರಚನೆ ಮಾಡಿಕೊಂಡು ಲಾಗಿನ್ ಅಗಿ.

    Step-4: ಲಾಗಿನ್ ಅದ ಬಳಿಕ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

    ಇದನ್ನೂ ಓದಿ: Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!

    Helpline-ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ- 6360753075
    Official Website link- ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ- Click Here

    WhatsApp Group Join Now
    Telegram Group Join Now
    Siddesh

    Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

    Visit Website
    Share Now: