Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsGobi manchurian- ರಾಜ್ಯದ್ಯಂತ ಗೋಬಿ ಮಂಚೂರಿ ಬ್ಯಾನ್ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

Gobi manchurian- ರಾಜ್ಯದ್ಯಂತ ಗೋಬಿ ಮಂಚೂರಿ ಬ್ಯಾನ್ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ.

ರಾಜ್ಯದ್ಯಂತ ಗೋಬಿ ಮಂಚೂರಿ(Gobi manchurian) ಬ್ಯಾನ್ ಮಾಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ತೀರ್ವ ಚರ್ಚೆಯಾಗುತ್ತಿದ್ದು ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಹಂಚಿಕೊಂಡಿರುವ ಮಾಧ್ಯಮ ಪ್ರಕಟಣೆ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಕೃತಕ ಬಣ್ಣ ಹಾಕಿ ತಯಾರಿಸುವ ಆಹಾರ ಪದಾರ್ಥಗಳನ್ನು ದೀರ್ಘವಾಧಿವರೆಗೆ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವಿಷಯ ಅಧ್ಯಯನದಿಂದ ಹೊರ ಬಂದಿರುವ ಕಾರಣ ಕಾಟನ್ ಕ್ಯಾಂಡಿ(Cotton candy) ಮತ್ತು ಗೋಬಿ ಮಂಚೂರಿಯನ್ನು ರಾಜ್ಯ ದಲ್ಲಿ ಬ್ಯಾನ್ ಮಾಡಲಾಗುತ್ತದೆ ಎಂದು ತೀರ್ವ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ವಾರದಿಂದ ನಡೆಯುತ್ತಿದ್ದು ಈಗಾಗಲೇ ಪಕ್ಕದ ರಾಜ್ಯ ತಮಿಳುನಾಡಿನಲ್ಲಿ ಗೋಬಿ ಮಂಚೂರಿಯನ್ನು ಬ್ಯಾನ್ ಮಾಡಲಾಗಿರುತ್ತದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ತಯಾರಿಸುವ ಮತ್ತು ಮಾರಾಟ ಮಾಡಲ್ಪಡುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ತೀವ್ರ ನಿಗಾ ಇಡುವ ಕೆಲಸ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಕೃತಕ ಬಣ್ಣ ಬಳಸಿ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿಗಳನ್ನು ಉಪಯೋಗಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇದನ್ನೂ ಓದಿ: Labour card- ಕಾರ್ಮಿಕ ಕಾರ್ಡ ಹೊಂದಿರುವವರು ಇ-ಕಾರ್ಡ ಪಡೆಯಲು ಅರ್ಜಿ ಆಹ್ವಾನ!

ನಿನ್ನೆ ವಿಕಾಸಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಳೆದ ಮೂರು ತಿಂಗಳುಗಳಲ್ಲಿ ಇಲಾಖೆಯ ವತಿಯಿಂದ ಹಲವಾರು ಆಹಾರ ಪದಾರ್ಥಗಳ ವಿಶ್ಲೇಷಣೆಗೆ ರಾಜ್ಯಾದ್ಯಂತ ವಿಶೇಷ ಆಂದೋಲನಗಳನ್ನು ಕೈಗೊಂಡಿದೆ. ರಾಜ್ಯಾದ್ಯಂತ ಕಳೆದ ಮೂರು ತಿಂಗಳುಗಳಲ್ಲಿ 652 ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಗಳ ಹಾಗೂ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳನ್ನು ಪರಿಶೀಲಿಸಿ ಅಲ್ಲಿನ 504 ಅಹಾರ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಿದ್ದು, ಅವುಗಳಲ್ಲಿ 9 ಮಾದರಿಗಳು ಅಸುರಕ್ಷಿತವಾಗಿದ್ದು, 3 ಮಾದರಿಗಳು ಕಳಪೆ ಗುಣಮಟ್ಟದ್ದಾಗಿರುತ್ತದೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಕಳೆದ ಮೂರು ತಿಂಗಳುಗಳಲ್ಲಿ 613 ಅಂಗನವಾಡಿಗಳನ್ನು ಪರಿಶೀಲಿಸಿ ಅಲ್ಲಿನ 232 ಆಹಾರ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಿದ್ದು, ಅವುಗಳಲ್ಲಿ 3 ಮಾದರಿಗಳು ಅಸುರಕ್ಷಿತವಾಗಿದ್ದು, 2 ಮಾದರಿಗಳು ಕಳಪೆ ಗುಣಮಟ್ಟದ್ದಾಗಿರುತ್ತದೆ.

ರಾಜ್ಯಾದ್ಯಂತ FSSAI ಪ್ರಮಾಣಿತ FoSTâC (ಆಹಾರ ಉದ್ದಿಮೆದಾರರಿಗೆ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಶುಚಿತ್ವ ಮತ್ತು ಗುಣಮಟ್ಟಗಳನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೀಡಲಾದ ತರಬೇತಿ) ತರಬೇತಿಯನ್ನು 58 ತಂಡಗಳಲ್ಲಿ 3047 ಉದ್ದಿಮೆದಾರರು ಪಡೆದುಕೊಂಡಿರುತ್ತಾರೆ.

ಇದನ್ನೂ ಓದಿ: Crop insurance amount-2024: 13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

ರಾಜ್ಯಾದ್ಯಂತ 56 ಹಾಲಿನ ಮಾದರಿಗಳನ್ನು ಪ್ರಯೋಗಾಲಯಗಳಲ್ಲಿ ಗುಣವಿಶ್ಲೇಷಣೆಗೊಳಪಡಿಸಿದ್ದು, ಎಲ್ಲಾ ಮಾದರಿಗಳೂ ಸಹ ಸುರಕ್ಷಿತ ಎಂದು ವರದಿಯಾಗಿರುತ್ತವೆ.

ರಾಜ್ಯಾದ್ಯಂತ 235 ಕುಡಿಯುವ ನೀರಿನ ಬಾಟಲ್‌ಗಳ ತಯಾರಿಕಾ ಘಟಕಗಳನ್ನು ಪರಿಶೀಲಿಸಿ 25 ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯಗಳಲ್ಲಿ ಗುಣವಿಶ್ಲೇಷಣೆಗೊಳಪಡಿಸಿದ್ದು, ಅವುಗಳಲ್ಲಿ 2 ಮಾದರಿಗಳು ಅಸುರಕ್ಷಿತ/ಕಳಪೆ ಎಂದು ವರದಿಯಾಗಿರುತ್ತವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಉಲ್ಲಂಘಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ 20 ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದ್ದು, ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುತ್ತವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಉಲ್ಲಂಘಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ 34 ಮೊಕದ್ದಮೆಗಳನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ 24 ಪ್ರಕರಣಗಳು ಇತ್ಯರ್ಥವಾಗಿದ್ದು, ಸದರಿ ಪ್ರಕರಣಗಳಲ್ಲಿ ರೂ.4.77,000/-ಗಳನ್ನು ದಂಡವಾಗಿ ವಿಧಿಸಲಾಗಿರುತ್ತದೆ.

ಇದನ್ನೂ ಓದಿ: Annabhagya yojana- ಈ ಪಟ್ಟಿಯಲ್ಲಿರುವವರಿಗೆ ಮಾರ್ಚ-2024 ತಿಂಗಳ ಅನ್ನಭಾಗ್ಯ ಅಕ್ಕಿ ವಿತರಣೆ ಮತ್ತು ಅಕ್ಕಿ ಹಣ ವರ್ಗಾವಣೆ ಪ್ರಾರಂಭ!

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು 5384 ಆಹಾರ ಉದ್ದಿಮೆಗಳಿಗೆ ಪರಿಶೀಲನಾ ಭೇಟಿ ನೀಡಿ ದಂಡ ವಿಧಿಸಬಹುದಾದ 184 ಪ್ರಕರಣಗಳಿಗೆ ಸಂಬಂಧಿಸಿದಂತೆ ರೂ.6,71.300/- ಗಳನ್ನು ದಂಡವಾಗಿ ವಿಧಿಸಿರುತ್ತಾರೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗಳ ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಿಂದ ಕೂಡಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ.

ಇದನ್ನೂ ಓದಿ: Online marriage registration- ಇನ್ನು ಮುಂದೆ ವಿವಾಹ ನೋಂದಣಿ ಭಾರೀ ಸುಲಭ ನಿಮ್ಮ ಮೊಬೈಲ್ ಮೂಲಕವೇ ನೋಂದಣಿ ಮಾಡಿ!

ಗೋಬಿ ಮಂಚೂರಿ 171 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಅದರಲ್ಲಿ 107 ಕೃತಕ ಬಣ್ಣಗಳು (ಟಾರ್ ಟ್ರಾಸೈನ್, ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್) ಕಂಡುಬಂದ ಅಸುರಕ್ಷಿತ ಮಾದರಿಗಲಾಗಿವೆ. 64 ಕೃತಕ ಬಣ್ಣಗಳಿಲ್ಲದೆ ಇರುವ ಸುರಕ್ಷಿತ ಮಾದರಿಗಳಾಗಿವೆ. ಕಾಟನ್ ಕ್ಯಾಂಡಿಗಳ 25 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಅದರಲ್ಲಿ 15 ಕೃತಕ ಬಣ್ಣ (ಟಾರ್‌ಟ್ರಾಸೈನ್, ಸನ್‌ಸೆಟ್ ಯೆಲ್ಲೋ ಮತ್ತು ರೋಡಮೈನ್- ಬಿ) ಕಂಡುಬಂದ ಅಸುರಕ್ಷಿತ ಮಾದರಿಗಳು, 10 ಕೃತಕ ಬಣ್ಣಗಳಿಲ್ಲದೆ ಇರುವ ಸುರಕ್ಷಿತ ಮಾದರಿಗಳಾಗಿವೆ ಎಂದು ತಿಳಿಸಿದರು.

ಕೃತಕ ಬಣ್ಣಗಳು ಕಂಡುಬಂದ ಮಾದರಿಗಳು The Food Safety and Standards Act, 2006 ನಿಯಮ 3(1)ರನ್ವಯ ಅಸುರಕ್ಷಿತವಾಗಿರುತ್ತದೆ.
. The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ರನ್ವಯ ಗೋಬಿ ಮಂಚೂರಿ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ.

The Food Safety and Standards (Food Products Standards and Food Additives) Regulations, 2011ರ ನಿಯಮಗಳನ್ವಯ ಕಾಟನ್ ಕ್ಯಾಂಡಿಗಳಲ್ಲಿ ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣಗಳನ್ನು ಉಪಯೋಗಿಸಲು ಅವಕಾಶವಿಲ್ಲದೆ ಇರುವ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ. ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಬಂರ್ದಿಸಿ ಆಹಾರ ಸುರಕ್ಷತಾ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.

ಇದನ್ನೂ ಓದಿ: Voter id application- ಮತದಾರರು ಪಟ್ಟಿಯಲ್ಲಿ ನಿಮ್ಮ ಹೆಸರು ಬಿಟ್ಟು ಹೋಗಿದ್ದರೆ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ!

ಇದೇ ರೀತಿ ಕಾಟನ್ ಕ್ಯಾಂಡಿಯ ತಯಾರಿಕೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣಗಳನ್ನು ಬಳಸುವುದನ್ನು ಮತ್ತು ರೋಡಮೈನ್-ಬಿ ಸೇರಿದಂತೆ ಉಪಯೋಗಿಸಲು ಅವಕಾಶವಿಲ್ಲದೆ ಇರುವ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಬರ್ಂಧಿಸಿ ಆಹಾರ ಸುರಕ್ಷತಾ ಇಲಾಖೆ ಆಯುಕ್ತರು ಆದೇಶಿಸಿರುತ್ತಾರೆ.

ಯಾವುದೇ ರೀತಿಯ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು.

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ ತಿನಿಸುಗಳನ್ನು ದೀರ್ಘಕಾಲ ಬಳಸುವುದರಿಂದ ಚಿಕ್ಕಮಕ್ಕಳೂ ಸೇರಿದಂತೆ ಬಳಕೆದಾರರಿಗೆ ಕ್ಯಾನ್ಸ‌ರ್ ನಂತಹ ಮಾರಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ  ಸಾರ್ವಜನಿಕರು ಕೃತಕ ಬಣ್ಣಗಳನ್ನು ಬಳಸಿ ತಯಾರಿಸಲಾಗಿರುವ ತಿಂಡಿ-ತಿನಿಸುಗಳನ್ನು ಉಪಯೋಗಿಸಬಾರದು ಎಂದು ತಿಳಿಸಿದರು.

Most Popular

Latest Articles

Related Articles