Golden chariot train-ರಾಜ್ಯದ ಐಷಾರಾಮಿ ರೈಲು ಪುನರಾರಂಭ! ಇಲ್ಲಿದೆ ಟಿಕೆಟ್ ಬುಕಿಂಗ್ ಮತ್ತು ರೈಲಿನ ಮಾಹಿತಿ!

December 22, 2024 | Siddesh
Golden chariot train-ರಾಜ್ಯದ ಐಷಾರಾಮಿ ರೈಲು ಪುನರಾರಂಭ! ಇಲ್ಲಿದೆ ಟಿಕೆಟ್ ಬುಕಿಂಗ್ ಮತ್ತು ರೈಲಿನ ಮಾಹಿತಿ!
Share Now:

ಭಾರತೀಯ ರೈಲ್ವೆ ಇಲಾಖೆಯಿಂದ ಮತ್ತೆ ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸವನ್ನು(Golden chariot train) ಮರು ಆರಂಭ ಮಾಡಲಾಗಿದ್ದು ಈ ರೈಲಿನ ಕುರಿತು ಒಂದಿಷ್ಟು ಆಸಕ್ತಿಕರ ಸಂಗತಿಗಳನ್ನು ಹಾಗೂ ಇನ್ನಿತರೆ ಮಾಹಿತಿಯನ್ನು ಅಂಕಣದಲ್ಲಿ ವಿವರಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆ ಮತ್ತು ರೈಲ್ವೆ ಇಲಾಖೆ ಸಹಯೋಗದಲ್ಲಿ ಈ ಯೋಜನೆಯನ್ನು ಆರಂಭ ಮಾಡಿದ್ದು ದೇಶ ಮತ್ತು ವಿದೇಶಿ ಪ್ರವಾಸಿಗರಿಗೆ ಗುಣಮಟ್ಟದ ಮತ್ತು ಐಷಾರಾಮಿ(Golden chariot train news)ಸೌಲಭ್ಯದೊಂದಿಗೆ ರಾಜ್ಯದ ವಿವಿಧ ಐತಿಹಾಸಿಕ ಸ್ಥಳಗಳನ್ನು ಭೇಟಿ ಮಾಡಲು ಈ ರೈಲು ಪ್ರವಾಸ ಸಹಕಾರಿಯಾಗಿದೆ.

ಇದನ್ನೂ ಓದಿ: Sprinkler set Subsidy- ರೈತರಿಗೆ ಭರ್ಜರಿ ಗುಡ್ ನ್ಯೂಸ್: ಅತೀ ಕಡಿಮೆ ದರದಲ್ಲಿ ಕೃಷಿ ಇಲಾಖೆಯಿಂದ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ!

Golden chariot train details- ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲಿನ ವಿಶೇಷತೆಗಳು:

ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸವನ್ನು ಪುನರಾರಂಭಿಸಲಾಗಿದ್ದು, ಜುವೆಲ್ಸ್‌ ಆಫ್‌ ಸೌತ್‌, ಪ್ರೈಡ್‌ ಆಫ್‌ ಕರ್ನಾಟಕ ಹಾಗೂ ಗ್ಲಿಂಪ್ಸೆಸ್‌ ಆಫ್‌ ಕರ್ನಾಟಕ ಎಂಬ ಮೂರು ವಿಧದ ಯಾತ್ರೆಗಳ ಸೇವೆಗಳನ್ನು ಮತ್ತೆ ಆರಂಭ ಮಾಡಲಾಗಿದೆ.

ಈ ರೈಲಿನಲ್ಲಿ 18 ಕೋಚ್‍ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ.

ಇದನ್ನೂ ಓದಿ: Ration card-ರೇಷನ್ ಕಾರ್ಡಗೆ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶ!

Golden chariot train book

ಇದರಿಂದ ರೈಲು ಹೋಟೆಲ್‍ಗಳು, ಕುಶಲಕರ್ಮಿಗಳು, ಪ್ರವಾಸ ನಿರ್ವಾಹಕರಿಗೆ ಆದಾಯ ಕಲ್ಪಿಸಿದಂತಾಗುತ್ತದೆ. ಈ ವಿಶೇಷ ರೈಲು ಪ್ರವಾಸ ಜಾಗತಿಕ ಮಟ್ಟದಲ್ಲಿ ವಿಶ್ವದ ಏಳು ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಗುರುತಿಸಲಾಗಿದ್ದು, ಹಲವಾರು ಪ್ರಶಸ್ತಿ ಪಡೆದುಕೊಂಡಿದೆ.

ಈ ರೈಲು 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು ಭಾರತೀಯ ಮತ್ತು ಅಂತರರಾಷ್ಟ್ರೀಯ ಪಾಕಪದ್ದತಿ ಸೇವೆ ನೀಡುತ್ತದೆ. ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ.

ಗ್ಲಿಂಪ್ಸಸ್ ಆಫ್ ಕರ್ನಾಟಕ/Glimpses Of Karnataka:

ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭಗೊಂಡಿದ್ದು, ಫೆಬ್ರವರಿ 29 ರಿಂದ 12 ರವರೆಗೆ ಗ್ಲಿಂಪ್ಸಸ್ ಆಫ್ ಕರ್ನಾಟಕ ಪ್ರವಾಸವು ಬೆಂಗಳೂರಿನಿಂದ ನಂಜನಗೂಡು, ಮೈಸೂರು, ಹೊಸಪೇಟೆ ಮಾರ್ಗವಾಗಿ ಸಂಚಾರ ಮಾಡಲಿದೆ. ಕರ್ನಾಟಕದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಇದು ಪ್ರತಿನಿಧಿಸಲಿದೆ. ಗೋಲ್ಡನ್ ಚಾರಿಯಟ್ ರೈಲು ಜಾಗತಿಕವಾಗಿ ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಒಂದಾಗಿದ್ದು ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿದೆ.

ಇದನ್ನೂ ಓದಿ: Labor Department Scholarship-ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ಇನ್ನು 11 ದಿನಗಳು ಮಾತ್ರ ಬಾಕಿ!

'ಪ್ರೈಡ್ ಆಫ್ ಕರ್ನಾಟಕ/Pride of Karnataka:

ಸುಪ್ರಸಿದ್ಧ ಗೋಲ್ಡನ್ ಚಾರಿಯಟ್ ರೈಲು ಪ್ರವಾಸವು 'ಪ್ರೈಡ್ ಆಫ್ ಕರ್ನಾಟಕ' ಹೆಸರಿನಲ್ಲಿ ಫೆಬ್ರವರಿ 1 ರಿಂದ 6 ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ಆರಂಭಗೊಂಡು ನಂಜನಗೂಡು, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ, ಗೋವಾ ಮಾರ್ಗವಾಗಿ ಸಂಚಾರಿಸಿ ಬೆಂಗಳೂರಿಗೆ ಹಿಂತಿರುಗಲಿದೆ. ಪ್ರವಾಸದ ಬಗ್ಗೆ ಹೆಚ್ಚಿನ ವಿವರಗಳಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ.

ಇದನ್ನೂ ಓದಿ: KMF Milk Subsidy-ಹಾಲಿನ ಪ್ರೋತ್ಸಾಹಧನ ಬಿಡುಗಡೆ! ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಚೆಕ್ ಮಾಡಿ?

Golden chariot train booking-ಟಿಕೆಟ್ ಬುಕಿಂಗ್ ಮತ್ತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್ಸೈಟ್- Book Now

ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ: ಸಚಿವ ಎಚ್. ಕೆ. ಪಾಟೀಲ್

ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕೃತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ.

ರೈಲಿಗೆ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್‌ ಸೂಟ್ ಸ್ನಾನಗೃಹ, ವೈಫೈ ಸೌಲಭ್ಯಗಳನ್ನು ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು, ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.

Golden chariot train webiste- ಅಧಿಕೃತ ಜಾಲತಾಣ: CLICK HERE

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: