- Advertisment -
HomeGovt SchemesGruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Gruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಗೃಹ ಜ್ಯೋತಿ ಯೋಜನೆಯಡಿ(Gruha Jyothi Yojana) ಮನೆಗೆ ಉಚಿತ ವಿದ್ಯುತ್ ಅನ್ನು ಪಡೆಯಲು ಎಲ್ಲಾ ಗ್ರಾಹಕರು ತಮ್ಮ Account ID ಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ.

ರಾಜ್ಯ ಸರಕಾರದಡಿ ಬರುವ ಇಂದನ ಇಲಾಖೆಯಿಂದ ಗೃಹ ಜ್ಯೋತಿ ಯೋಜನೆಯಡಿ(Gruha Jyothi) ರಾಜ್ಯದ ಎಲ್ಲಾ ಅರ್ಹ ಗ್ರಾಹಕರು ತಮ್ಮ ಮನೆ ಬಳಕೆಗೆ ಉಪಯೋಗಿಸುವ ಪ್ರತಿ ತಿಂಗಳ ವಿದ್ಯುತ್ ಗೆ ಉಚಿತ ಬಿಲ್ ಅನ್ನು ವಿತರಣೆ ಮಾಡಲಾಗುತ್ತಿದ್ದು ಈ ಯೋಜನೆಯಡಿ ನಿರಂತರವಾಗಿ ಸೌಲಭ್ಯವನ್ನು ಪಡೆಯಲು ಗ್ರಾಹಕರು ತಮ್ಮ Account ID ಗೆ ಆಧಾರ್ ಕಾರ್ಡ ಅನ್ನು ಜೋಡಣೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ.

Account ID ಗೆ ಆಧಾರ್ ಕಾರ್ಡ ಜೋಡಣೆಯನ್ನು ಎಲ್ಲಿ ಮಾಡಿಸಬೇಕು? Account ID ಗೆ ಆಧಾರ್ ಕಾರ್ಡ ಜೋಡಣೆ ಮಾಡಲು ಬೇಕಾಗುವ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

Gruha Jyothi Yojana-2025: ಗೃಹ ಜ್ಯೋತಿ ಯೋಜನೆ:

ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಅಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರವು ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

Gruha Jyothi Scheme Guidelines-ಗೃಹ ಜ್ಯೋತಿ ಯೋಜನೆಯ ಮಾರ್ಗಸೂಚಿ ಹೀಗಿದೆ:

1) ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.

2) ಪ್ರತಿ ತಿಂಗಳು ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.

3) ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ಲಿನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಕೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವುದು.

ಇದನ್ನೂ ಓದಿ: Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Gruha Jyothi

4) ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಟ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.

5) ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

6) ಪ್ರತಿ ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.

ಇದನ್ನೂ ಓದಿ: E-Khata-ಈ ದಿನಾಂಕದ ಒಳಗಾಗಿ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಡ್ಡಾಯ: ಸಿ ಎಂ ಸಿದ್ದರಾಮಯ್ಯ ಸೂಚನೆ!

7) ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.

8) ದಿನಾಂಕ 30-06-2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು.

10) ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ ಒಂದು ಸ್ನಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.

ಇದನ್ನೂ ಓದಿ: Voter Id List-ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Gruha Jyothi application

Account ID ಗೆ ಆಧಾರ್ ಕಾರ್ಡ ಲಿಂಕ್ ಅನ್ನು ಎಲ್ಲಿ ಮಾಡಿಸಬೇಕು?

ಈಗಾಗಲೇ Account ID ಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಿರುವವರು ಮತ್ತೊಮ್ಮೆ ಲಿಂಕ್ ಮಾಡುವ ಅವಶ್ಯಕತೆಯಿರುವುದಿಲ್ಲ ಆಧಾರ್ ಕಾರ್ಡ ಲಿಂಕ್ ಮಾಡದೇ ಇರುವ ಗ್ರಾಹಕರು ತಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಲಿಂಕ್ ಮಾಡಿಕೊಳ್ಳಬಹುದು.

Documents-ಅರ್ಜಿ ಸಲ್ಲಿಸಲು ದಾಖಲೆಗಳು:

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) ಮನೆಯ ವಿದ್ಯುತ್ ಬಿಲ್
3) ಮೊಬೈಲ್ ನಂಬರ್

ಗೃಹಜ್ಯೋತಿ ಯೋಜನೆಯ ಕುರಿತು ಉಪಯುಕ್ತ ವೆಬ್ಸೈಟ್ ಲಿಂಕ್ ಗಳು:

ಗೃಹಜ್ಯೋತಿ ಯೋಜನೆಯ ವೆಬ್ಸೈಟ್- CLICK HERE
ಗೃಹಜ್ಯೋತಿ ಯೋಜನೆ ಮಾರ್ಗಸೂಚಿ- DOWNLOAD NOW
ಗೃಹಜ್ಯೋತಿ ಯೋಜನೆಯ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಲು- CHECK STATUS

- Advertisment -
LATEST ARTICLES

Related Articles

- Advertisment -

Most Popular

- Advertisment -