Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsGruhalakshmi 2nd Installment- ರಾಜ್ಯ ಸರಕಾರದಿಂದ ನವರಾತ್ರಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ...

Gruhalakshmi 2nd Installment- ರಾಜ್ಯ ಸರಕಾರದಿಂದ ನವರಾತ್ರಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ!

Gruhalakshmi amount: ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ಇದಕ್ಕಾಗಿ ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದೆ ಎಂದು ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ರಾಜ್ಯದ್ಯಂತ ಮಾಸಿಕ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1.16 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದು, ಇದರಲ್ಲಿ 1.08 ಕೋಟಿ ಮಹಿಳೆಯರಿಗೆ ಹಣ ಜಮೆಯಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಸಹಾಯಧನ ಪಾವತಿಗಾಗಿ 4,449 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಅರ್ಹ ಫಲಾನುಭವಿಗಳಿಗೆ 2ನೇ ಕಂತಿನ ಹಣ ವರ್ಗಾವಣೆ ಮಾಡಲು ಪ್ರತಿ ಜಿಲ್ಲೆಗಳಿಗೆ ರೂ 2,280 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ.

ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ. ಪ್ರಶಕ್ತ ಸಾಲಿನ ಬಜೆಟ್ ನಲ್ಲಿ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ 70,427 ಕೋಟಿ ರೂ. ಹಣ ಮೀಸಲಿಟ್ಟು ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಂದಿ ಹಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

ನಾಡಿನ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯಡಿ ಸರ್ಕಾರಿ ಸಾರಿಗೆ ಬಸ್‌ ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿ, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಇದರಿಂದ ಶಿಕ್ಷಣ, ಉದ್ಯೋಗ ಮುಂತಾದ ವಿಷಯಗಳಿಗೆ ಹೆಣ್ಣುಮಕ್ಕಳು ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ನಿರ್ಣಯ ಕೈಗೊಳ್ಳಲು ಸಾಧ್ಯವಾಗಿರುವುದು ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ. ಯೋಜನೆ ಜಾರಿಗೊಂಡ ನಂತರದ 126 ದಿನಗಳ ಅವಧಿಯಲ್ಲಿ 77 ಕೋಟಿಗೂ ಅಧಿಕ ಉಚಿತ ಪ್ರಯಾಣದ ಟಿಕೆಟ್ ನೀಡಲಾಗಿದ್ದು, ಇದಕ್ಕಾಗಿ ನಮ್ಮ ಸರ್ಕಾರವೂ 1808 ಕೋಟಿ ರೂ. ಹಣ ವಿನಿಯೋಗಿಸಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಹಿತಿ:

ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು, ಈ ಉದ್ದೇಶಕ್ಕಾಗಿ ಸರ್ಕಾರವು ರೂ. 4,449 ಕೋಟಿ ಅನುದಾನ ಬಳಕೆ ಮಾಡಿದೆ.
ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ.
– ಮುಖ್ಯಮಂತ್ರಿ

ಇದನ್ನೂ ಓದಿ: Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

Ration card e-KYC- ರೇಷನ್ ಕಾರ್ಡ ಇ-ಕೆವೈಸಿ ಕುರಿತು ಈ ಮಾಹಿತಿ ತಪ್ಪದೇ ತಿಳಿಯಿರಿ:

ಇನ್ನು ಸಹ ಹಲವು ಗ್ರಾಮೀಣ ಭಾಗದ ಮಹಿಳೆಯರಿಗೆ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಸಾಧ್ಯವಾಗದವರು ಮತ್ತು ಅರ್ಜಿ ಸಲ್ಲಿಸಿದ ಬಳಿಕವು ಹಣ ಪಡೆಯದವರು ಇ-ಕೆವೈಸಿ ಮಾಡಿಕೊಳ್ಳಬೇಕು ಒಮ್ಮೆ ನಿಮ್ಮ ತಾಲೂಕಿನ ಆಹಾರ ಇಲಾಖೆ ಕಛೇರಿಯನ್ನು ಭೇಟಿ ಮಾಡಿ ಪಡಿತರ ಚೀಟಿಯಲ್ಲಿರುವ ಕುಟುಂಬದ ಮುಖ್ಯಸ್ಥರ ಇ-ಕೆವೈಸಿ ಮಾಡಿಸಿ.

2ನೇ ಕಂತಿನ ಹಣ ಬಿಡುಗಡೆ ಟಿಪ್ಪಣಿ ಪ್ರತಿ:

ಇದನ್ನೂ ಓದಿ: October Pension amount-2023: 77.6 ಲಕ್ಷ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳ ಪಿಂಚಣಿ ಹಣ ಜಮೆ! ನಿಮಗೆ ಬಂತಾ ಚೆಕ್ ಮಾಡಿ.

Most Popular

Latest Articles

- Advertisment -

Related Articles