Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!

May 1, 2025 | Siddesh
Gruhalakshmi-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ತಿಂಗಳ ಹಣ!
Share Now:

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬ ಯಜಮಾನಿಯ(Gruhalakshmi Amount) ಖಾತೆಗೆ ಪ್ರತಿ ತಿಂಗಳು ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡುವ ರೂ 2,000 ಆರ್ಥಿಕ ನೆರವನ್ನು ಜಮಾ ಮಾಡುವುದರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕಾ ಮಾಧ್ಯಮದ ಮೂಲಕ ತಿಳಿಸಿರುವ ನೂತನ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ತರಲಾಗಿದ್ದು ಇದರಲ್ಲಿ ಹೆಚ್ಚು ಜನಪ್ರಿಯ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಅವರು ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಒಂದೇ ಬಾರಿಗೆ 3 ತಿಂಗಳ ಹಣವನ್ನು ಜಮಾ ಮಾಡುವುದರ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!

ಈ ಲೇಖನದಲ್ಲಿ ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯ ಕುರಿತು ಪ್ರಚಲಿತದಲ್ಲಿರುವ ಇತ್ತೀಚಿನ ಸುದ್ದಿ ಮತ್ತು ಗೃಹಲಕ್ಷ್ಮಿ ಯೋಜನೆಯಡಿ ಹಣ ವರ್ಗಾವಣೆ ಮಾಹಿತಿ ಮತ್ತು ಈಗಾಗಳೇ ಈ ಯೋಜನೆಯಡಿ ಜಮಾ ಅಗಿರುವ ಹಣದ ವಿವರವನ್ನು ಫಲಾನುಭವಿಗಳು ತಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

Gruhalakshmi Pending Amount-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ! ಒಂದೇ ಬಾರಿಗೆ 3 ಮೂರು ತಿಂಗಳ ಹಣ ಬಿಡುಗಡೆ:

ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಉಳಿದಿರುವ ತಿಂಗಳ ಆರ್ಥಿಕ ನೆರವನ್ನು ಅರ್ಹ ಫಲಾನುಭವಿಗಳಿಗೆ ಜಮಾ ಮಾಡುವುದರ ಕುರಿತು ಮಾಧ್ಯಮದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ರೀತಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ "ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್‌) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

gruhalakshmi (18)

Karnataka state government-ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದು ಎರಡು ವರ್ಷ:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳಿಸುತ್ತಿರುವ ಕಾರಣದಿಂದಾಗಿ ಇದೆ ಮೇ-2025 ತಿಂಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಒಂದು ಭಾಗವಾಗಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ತಿಂಗಳ ಹಣವನ್ನು ಒಂದೇ ಬಾರಿಗೆ ವರ್ಗಾವಣೆಯನ್ನು ಮಾಡಲು ಇಲಾಖೆ ಅಧಿಕಾರಿಗಳು ಯೋಜನೆಯನ್ನು ಹಾಕಿಕೊಂಡಿದ್ದಾರೆ.

Gruhalakshmi Status check-2025: ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮಾ ವಿವರ ತಿಳಿಯುವ ವಿಧಾನ:

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಜಮಾ ಮಾಡುವ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಅಗಿರುವುದನ್ನು ಬ್ಯಾಂಕ್ ಶಾಖೆಯನ್ನು ಭೇಟಿ ಮಾಡದೇ ಮನೆಯಲ್ಲೇ ಇದ್ದು ಈ ಕೆಳಗೆ ತಿಳಿಸಿರುವ ಎರಡು ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಲು ಅವಕಾಶವಿರುತ್ತದೆ. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಇದನ್ನೂ ಓದಿ: Bangalore university-ಬೆಂಗಳೂರು ವಿಶ್ವವಿದ್ಯಾನಿಲಯದಿಂದ ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

Method-1: ಬ್ಯಾಂಕಿನ ಸಹಾಯವಾಣಿ ಸಂಖ್ಯೆಗೆ ಮಿಸ್ ಕಾಲ್ ಮಾಡಿ ತಿಳಿಯಿರಿ:

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈ ಯೋಜನೆಯ ಹಣವನ್ನು ಪಡೆಯಲು ನೀಡಿರುವ ಬ್ಯಾಂಕ್ ಅಕೌಂಟ್ ನ ಬ್ಯಾಂಕಿನ ಸಹಾಯವಾಣಿ ಸಂಖ್ಯೆಗೆ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಮಿಸ್ ಕಾಲ್ ನೀಡುವುದರ ಮೂಲಕ ಬ್ಯಾಲೆನ್ಸ್ ಚೆಕ್ ಮಾಡಿಕೊಂಡು ಈ ಯೋಜನೆಯ ಹಣ ಜಮಾ ವಿವರವನ್ನು ಮನೆಯಲ್ಲೇ ಇದ್ದು ಚೆಕ್ ಮಾಡಿಕೊಳ್ಳಬಹುದು.

Bank A/c balance check mobile numbers-ಎಲ್ಲ ಬ್ಯಾಂಕಿನ ಸಹಾಯವಾಣಿ ಸಂಖ್ಯೆಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: Click here

ಇದನ್ನೂ ಓದಿ: Life Insurance- LIC ಜೀವನ್ ಲಾಭ್ ಯೋಜನೆ: ದಿನಕ್ಕೆ ₹80 ಪಾವತಿಸಿ ₹10 ಲಕ್ಷ ಪಡೆಯಿರಿ!

Method-2: ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಿ:

Step-1: ಫಲಾನುಭವಿಗಳು ಮೊಟ್ಟ ಮೊದಲಿಗೆ ಇಲ್ಲಿ ಕ್ಲಿಕ್ Gruhalakshmi Status Check ಮಾಡಿ ಗೂಗಲ್ ಪ್ಲೈ ಸ್ಟೋರ್ ಅನ್ನು ಪ್ರವೇಶ ಮಾಡಿ ಅಧಿಕೃತ "ಡಿಬಿಟಿ ಕರ್ನಾಟಕ/DBT Karnataka" ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Step-2: ನಂತರ ಫಲಾನುಭವಿಯ ಆಧಾರ್ ಕಾರ್ಡ ನಂಬರ್ ಅನ್ನು ನಮೂದಿಸಿ OTP ಅನ್ನು ಪಡೆದು ಈ ಅಪ್ಲಿಕೇಶನ್ ಅನ್ನು ಬಳಕೆ ಮಾಡಲು ಬಳಕೆದಾರ ಐಡಿಯನ್ನು ಮತ್ತು ಪಾಸ್ವರ್ಡ ಅನ್ನು ಕ್ರಿಯೇಟ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

Step-3: ಇದಾದ ಬಳಿಕ ರಚನೆ ಮಾಡಿಕೊಂಡಿರುವ ಪಾಸ್ವರ್ಡ ಅನ್ನು ಹಾಕಿ ಲಾಗಿನ್ ಅಗಿ "ಪಾವತಿ ಸ್ಥಿತಿ/Payment Status" ಆಯ್ಕೆಯ ಮೇಲೆ ಒತ್ತಿ ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ನೋಡಬಹುದು.

Gruhalakshmi Yojana-ಗೃಹಲಕ್ಷ್ಮಿ ಹಣ ಜಮಾ ಸ್ಥಿಗಿತವಾಗಿದ್ದರೆ ಇದಕ್ಕೆ ಕಾರಣಗಳು:

ಬ್ಯಾಂಕ್ ಖಾತೆಯಲ್ಲಿ ತಾಂತ್ರಿಕ ಸಮಸ್ಯೆ: ಬ್ಯಾಂಕ್ ಖಾತೆಗೆ NPCI ಲಿಂಕ್ ಅಥವಾ ಆಧಾರ್ ಕಾರ್ಡ ಲಿಂಕ್ ಇಲ್ಲದೇ ಇದ್ದ ಪಕ್ಷದಲ್ಲಿ ಈ ಯೋಜನೆಯ ಹಣ ಜಮಾ ಅಗುವುದು ಸ್ಥಿಗಿತವಾಗಿರುತ್ತದೆ ಇದನ್ನು ಸರಿಪಡಿಸಿಕೊಳ್ಳು ಒಮ್ಮೆ ನಿಮ್ಮ ಬ್ಯಾಂಕ್ ಶಾಖೆಯನ್ನು ಭೇಟಿ ಮಾಡಿ.

ರೇಶನ್ ಕಾರ್ಡ್‌ನಲ್ಲಿ ಹೆಡ್ ಆಫ್ ಫ್ಯಾಮಿಲಿ ವಿವರಗಳ ಸರಿಯಿಲ್ಲದಿರುವುದು: ಯೋಜನೆಯ ಪ್ರಕಾರ, ಫಲಾನುಭವಿ ಮಹಿಳೆಯೇ ರೇಶನ್ ಕಾರ್ಡ್‌ನಲ್ಲಿ ಕುಟುಂಬದ ಮುಖ್ಯಸ್ಥೆ (Head of Family) ಆಗಿರಬೇಕು. ಇದು ಸರಿಯಾಗಿ ಅಪ್‌ಡೇಟ್ ಆಗದಿದ್ದರೆ, ಅರ್ಜಿ ಅಂಗೀಕರಿಸಲ್ಪಡುವುದಿಲ್ಲ.

ಆದಾಯ ತೆರಿಗೆ ಪಾವತಿ: ಈ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಆರ್ಥಿಕ ನೆರವನ್ನು ಆದಾಯ ತೆರಿಗೆಯನ್ನು ಪಾವತಿ ಮಾಡುವವರಿಗೆ ಸ್ಥಿಗಿತ ಮಾಡಲಾಗಿದೆ.

GST ಪಾವತಿ: ಈ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಆರ್ಥಿಕ ನೆರವನ್ನು GST ಪಾವತಿ ಮಾಡುವವರಿಗೆ ಸ್ಥಿಗಿತ ಮಾಡಲಾಗಿದೆ.

WhatsApp Group Join Now
Telegram Group Join Now
Share Now: