Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!

December 24, 2025 | Siddesh
Gruhalakshmi Amount-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ!
Share Now:

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಗೃಹಲಕ್ಷ್ಮಿ(Gruhalakshmi Scheme) ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ 24ನೇ ಕಂತಿನ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವುದಕ್ಕೆ ಆರ್ಥಿಕ ಇಲಾಕೆ ಅನುಮೋದನೆಯನ್ನು ನೀಡಲಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮಿ(Gruhalakshmi) ಯೋಜನೆಯ ಬಾಕಿ ಹಣ ಬಿಡುಗಡೆ ಮಾಡದಿರುವುದರ ಬಗ್ಗೆ ಸರಕಾರದ ವಿರುದ್ದ ತೀರ್ವ ಅಸಮಾಧಾನ ಮತ್ತು ಆಕ್ಷೇಪಣೆಯನ್ನು ವಿರೋಧ ಪಕ್ಷದ ಶಾಸಕರು ಹೊರಹಾಕಿದ ಹಿನ್ನೆಲೆ ಮತ್ತು ಮಾಧ್ಯಮದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆಯಲ್ಲಿ ಅಗುತ್ತಿರುವ ವಿಳಂದ ಬಗ್ಗೆ ವರದಿಯಾದ ಬೆನ್ನಲ್ಲೇ ಇದರ ಬಗ್ಗೆ ಎಚ್ಚೆತ್ತುಕೊಂಡ ಸರಕಾರವು ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಮುಂದಾಗಿದೆ.

ಇದನ್ನೂ ಓದಿ: Parivartan Scholarship-ಪರಿವರ್ತನ್ ಯೋಜನೆಯಡಿ ಪದವಿ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

ಇಂದಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 24ನೇ ಕಂತಿನ ಹಣ(Gruhalakshmi 24th Installment) ಬಿಡುಗಡೆ ವಿವರ, ಗೃಹಲಕ್ಷ್ಮಿ ಫಲಾನುಭವಿಗಳು ತಮ್ಮ ಖಾತೆಗೆ ಹಣ ಜಮಾ ಅಗಿರುವುದನ್ನು ಬ್ಯಾಂಕ್ ಭೇಟಿ ಮಾಡದೇ ತಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳಬಹುದು? ಎನ್ನುವ ಮಾಹಿತಿಯನ್ನು ಸಹ ವಿವರಿಸಲಾಗಿದ್ದು, ತಪ್ಪದೇ ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರರಿಗೂ ಮಾಹಿತಿ ತಿಳಿಸಲು ಸಹಕರಿಸಿ.

Gruhalakshmi 24th Installment- ಫಲಾನುಭವಿಗಳ ಖಾತೆಗೆ 24ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ:

ಗೃಹಲಕ್ಷ್ಮಿ ಯೋಜನೆಯಡಿ 24ನೇ ಕಂತಿನ ಹಣ ಬಿಡುಗಡೆ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಮಾಹಿತಿ ವಿವರ ಹೀಗಿದೆ, ರಾಜ್ಯ ಸರಕಾರದಿಂದ ರಾಜ್ಯ ಒಟ್ಟು 1.26 ಕೋಟಿ ಪಡಿತರ ಚೀಟಿದಾರ ಮಹಿಳೆಯರ ಖಾತೆಗೆ 24ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಕ್ಕೆ ಆರ್ಥಿಕ ಇಲಾಖೆಯು ಅನುಮೋದನೆಯನ್ನು ನೀಡಿದ್ದು, ಜಿಲ್ಲಾವಾರು ಹಂತ ಹಂತವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಪ್ರಕ್ರಿಯೆ ನಡೆಯಲಿದ್ದು, ಶನಿವಾರದ/ ಒಳಗಾಗಿ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗಲಿದೆ ಎಂದು ಮಾಹಿತಿಯನ್ನು ತಿಳಿಸಿದರು.

ಇದನ್ನೂ ಓದಿ: Veterinary Subsidy Schemes-ಪಶುಪಾಲನಾ ಇಲಾಖೆಯಿಂದ ರೈತರಿಗಾಗಿ ಲಭ್ಯವಿರುವ ಸಬ್ಸಿಡಿ ಯೋಜನೆಗಳಾವುವು?

Gruhalakshmi 24th Installment Date: ಶನಿವಾರದ ಒಳಗಾಗಿ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿ ಹಣವು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಹಂತ ಹಂತವಾಗಿ ಜಿಲ್ಲಾವಾರು ಫಲಾನುಭವಿಗಳ ಖಾತೆಗೆ ಶನಿವಾರದ(27 ಡಿಸೆಂಬರ್ 2025) ಒಳಗಾಗಿ ಎಲ್ಲಾ ಮಹಿಳೆಯರಿಗೆ ಈ ಯೋಜನೆಯ ಹಣವು ಜಮಾ ಅಗಲಿದೆ ಎಂದು ಸಚಿವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Gruhalakshmi Total Amount-ಗೃಹಲಕ್ಷ್ಮಿ ಯೋಜನೆಗೆ 29,000 ಕೋಟಿ ಅನುದಾನ:

ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಪ್ರಮುಖ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಅನುಷ್ಥಾನಕ್ಕೆ 2025-26 ನೇ ಸಾಲಿನ ಬಜೆಟ್ ನಲ್ಲಿ 29,000 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಸಂಪೂರ್ಣ ಪ್ರಮಾಣದ ಅನುದಾನವನ್ನು ನಿಗದಿಪಡಿಸಿದ್ದರು ಕೂಡ ಸಮರ್ಪಕವಾಗಿ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮಾ ಅಗದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟ್ ಸಭೆಯನ್ನು ಚರ್ಚೆ ನಡೆಸಿ ತೊಂದರೆಯನ್ನು ಸರಿಪಡಿಸುವಂತೆ ಸಚಿವರಿಗೆ ಸೂಚನೆ ನೀಡಿದರು.

ಕೆಲವು ತಾಂತ್ರಿಕ ಸಮಸ್ಯೆ ಮತ್ತು ಹಣ ಬಿಡುಗಡೆ ಸಮಯದಲ್ಲಿ ಅನುಸರಿಸಬೇಕಾದ ಆಡಲಿತಾತ್ಮಕ ಅನುಮೋದನೆಯಲ್ಲಿನ ವಿಳಂಬಗಳಿಂದಾಗಿ ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: PM Surya Ghar Scheme-PM ಸೂರ್ಯಘರ್ ಯೋಜನೆಯಡಿ ಉಚಿತ ವಿದ್ಯುತ್! ಕೂಡಲೇ ಅರ್ಜಿ ಸಲ್ಲಿಸಿ!

Gruhalakshmi Amount Status Check-ಮೊಬೈಲ್ ನಲ್ಲೇ ಗೃಹಲಕ್ಷ್ಮಿ ಹಣ ಜಮಾ ಅಗಿರುವ ವಿವರ ತಿಳಿಯುವುದು ಹೇಗೆ?

ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿ ಹಣವನ್ನು ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಮೊಬೈಲ್ ನಲ್ಲೇ ಯೋಜನೆಯ ಹಣ ಜಮಾ ವಿವರವನ್ನು ಚೆಕ್ ಮಾಡಿಕೊಳ್ಳಲು ಅವಕಾಶವಿದ್ದು ಇದಕ್ಕಾಗಿ ಈ ಕೆಳಗೆ ತಿಳಿಸಿರುವ ಎರಡು ವಿಧಾನವನು ಅನುಸರಿಸಿ ಹಣ ಜಮಾ ವಿವರವನ್ನು ತಿಳಿಯಬಹುದು.

Method-1: ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ Helpline ಮೂಲಕ ಚೆಕ್ ಮಾಡಬಹುದು:

ಎಲ್ಲಾ ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಗ್ರಾಹಕರು ತಮ್ಮ ಉಳಿತಾಯ ಖಾತೆಯಲ್ಲಿ ಪ್ರಸ್ತುತ ಎಷ್ಟು ಬ್ಯಾಲೆನ್ಸ್ ಇದೆ ಎಂದು ತಮ್ಮ ಮೊಬೈಲ್ ನಲ್ಲಿ ಬ್ಯಾಂಕಿನ ಸಹಾಯವಾಣಿ ಸಂಖ್ಯೆಗೆ ಮಿಸ್ ಕಾಲ್ ನೀಡಿ ಬ್ಯಾಂಕಿನ ಬ್ರಾಂಚ್ ಅನ್ನು ಭೇಟಿ ಮಾಡದೇ ನಿಮ್ಮ ಅಕೌಂಟ್ ನಲ್ಲಿ ಎಷ್ಟು ಹಣ ಇದೆ ಎಂದು ತಿಳಿಯಬಹುದು.

ಇದನ್ನೂ ಓದಿ: RTC Crop Name-ಪಹಣಿಯಲ್ಲಿ ಬೆಳೆ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳುವುದು ಹೇಗೆ?

ಇದೇ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಿರುವ ಸುದ್ದಿಯು ನಿಮಗೆ ತಿಳಿದಾಗ ನಿಮ್ಮ ಖಾತೆಯಿರುವ ಬ್ಯಾಂಕಿನ ಮಿಲ್ಡ್ ಕಾಲ್ ಬ್ಯಾಲೆನ್ಸ್ ಚೆಕ್ ಹೆಲ್ಪ್ ಲೈನ್ ನಂಬರ್ ಗೆ ನೋಂದಾಯಿತ ಮೊಬೈಲ್ ನಂಬರ್ ನಿಂದ ಮಿಸ್ ಕಾಲ್ ಮಾಡಿ ನಿಮ್ಮ ಖಾತೆಯ ಬ್ಯಾಲೆನ್ಸ್ ಅನ್ನು ಚೆಕ್ ಮಾಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿಕೊಳ್ಳಬಹುದು.

ಎಲ್ಲಾ ಬ್ಯಾಂಕಿನ ಸಹಾಯವಾಣಿ ಸಂಖ್ಯೆಯನ್ನು ಇಲ್ಲಿ ಕ್ಲಿಕ್ ಮಾಡಿ- Bank Balance Check Helpline Numbers

Gruhalakshmi status

Method-2: "DBT Karnataka" ಮೊಬೈಲ್ ಅಪ್ಲಿಕೇಶನ್ ನಲ್ಲಿ ಜಮಾ ವಿವರ ಪಡೆಯಿರಿ:

ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರು ಗೂಗಲ್ ಪ್ಲೈ ಸ್ಟೋರ್ ಅನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಗೃಹಲಕ್ಷ್ಮಿ ಹಣ ಜಮಾ ಅಗಿರುವ ವಿವರವನ್ನು ಕಂತಿವಾರು ನಿಮ್ಮ ಮೊಬೈಲ್ ನಲ್ಲೇ ತಿಳಿಯಬಹುದು.

Step-1: ಮಹಿಳೆಯರು ಮೊದಲ ಹಂತದಲ್ಲಿ "DBT Karnataka App Link" ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

Step-2: ತದನಂತರ ಅಪ್ಲಿಕೇಶನ್ ಅನ್ನು ಒಪನ್ ಮಾಡಿ ನಿಮ್ಮ 12 ಅಂಕಿಯ ಆಧಾರ್ ಕಾರ್ಡ್ ನಂಬರ್ ಯನ್ನು ಹಾಕಿ "Get OTP" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಪಡೆದುಕೊಂಡು ಬಳಿಕ ನಮೂದಿಸಿ ಈ ಅಪ್ಲಿಕೇಶನ್ ಅನ್ನು ಬಳಕೆ ಮಾಡಲು ನಾಲ್ಕು ಅಂಕಿಯ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು "Login" ಬಟನ್ ಮೇಲೆ ಕ್ಲಿಕ್ಕ್ ಮಾಡಿ ನೀವು ರಚನೆ ಮಾಡಿಕೊಂಡಿರುವ ಪಾಸ್ವರ್ಡ ಅನ್ನು ಹಾಕಿ ಅಪ್ಲಿಕೇಶನ್ ಗೆ ಲಾಗಿನ್ ಅಗಬೇಕು.

Step-3: ಅಪ್ಲಿಕೇಶನ್ ಅನ್ನು ಲಾಗಿನ್ ಅದ ನಂತರ ಇಲ್ಲಿ ಮುಖಪುಟದಲ್ಲಿ ಕಾಣಿಸುವ "ಪಾವತಿ ಸ್ಥಿತಿ/Payment Status" ಬಟನ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಂಡು ನಂತರ "ಗೃಹಲಕ್ಷ್ಮೀ" ಎಂದು ಕಾಣಿಸುವ ಆಯ್ಕೆಯ ಬಟನ್ ಮೇಲೆ ಕ್ಲಿಕ್ ಮಾಡಿದರೆ ಇಲ್ಲಿಯವರೆಗೆ ಈ ಯೋಜನೆ ಯಡಿ ಎಷ್ಟು ಕಂತಿನ ಹಣ ಜಮಾ ಅಗಿದೆ ಎನ್ನುವ ಮಾಹಿತಿಯ ಜೊತೆಗೆ ಗೃಹಲಕ್ಷ್ಮಿ ಹಣ ಜಮಾ ದಿನಾಂಕ, UTR ನಂಬರ್, ಬ್ಯಾಂಕ್ ಖಾತೆಯ ಕೊನೆಯ 4 ಸಂಖ್ಯೆ ಇತ್ಯಾದಿ ವಿವರವನ್ನು ಇಲ್ಲಿ ನೋಡಬಹುದು.

Gruhalakshmi Scheme Website-ಗೃಹಲಕ್ಷ್ಮಿ ಯೋಜನೆಯ ಅಧಿಕೃತ ವೆಬ್ಸೈಟ್ ಲಿಂಕ್-Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: