HomeNew postsGruhalakshmi latest Update- ಈ ವರ್ಗದವರಿಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಬರಲಿದೆ!

Gruhalakshmi latest Update- ಈ ವರ್ಗದವರಿಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಬರಲಿದೆ!

Reason for gruhalakshmi amount not credited: ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು. ಈ ಯೋಜನೆಯಡಿ ರಾಜ್ಯ ಸರಕಾರವು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ ಮುಖ್ಯಸ್ಥರಿಗೆ ಪ್ರತಿ ತಿಂಗಳು ರೂ 2,000 ವರ್ಗಾವಣೆ  ಮಾಡಲಾಗುತ್ತದೆ.

ಈಗಾಗಲೇ 1.08 ಕೋಟಿ ಅರ್ಹ ಫಲಾನುಭವಿಗಳಿಗೆ ಮೊದಲ ಮತ್ತು ಎರಡನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದೆ, ಅದರೆ ಇನ್ನು ಸಹ ದೊಡ್ಡ ಸಂಕ್ಯೆಯ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣ ಜಮಾ ಅಗಿರುವುದಿಲ್ಲ. ಹಣ ಜಮಾ ಅಗದಿರಲು ಮುಖ್ಯ ಕಾರಣಗಳೇನು? ಮತ್ತು ಇದಕ್ಕೆ ಸೂಕ್ತ ಪರಿಹಾರ ಕ್ರಮ ಮತ್ತು ಸಂಪುಟ ಸಭೆಯ ನೂತನ ನಿರ್ಣಯದ ಕುರಿತು ಈ ಅಂಕಣದಲ್ಲಿ ಸಮಗ್ರ ಮಾಹಿತಿಯನ್ನು ವಿವರಿಸಲಾಗಿದೆ.

ಇದನ್ನೂ ಓದಿ:  PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

karnataka government cabinet meeting-2023: ಸಂಪುಟ ಸಭೆಯ ನೂತನ ನಿರ್ಣಯವೇನು?

ಗುರುವಾರ(19-10-2023)ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ Gruhalakshmi ಯೋಜನೆಯ ಫಲಾನುಭವಿಗಳ ಮಾರ್ಗಸೂಚಿ ಸಡಿಲಿಕೆ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಟ್ವಿಟ್ ಮಾಡಿದ್ದಾರೆ: ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿಸ್ತರಣೆ ಮಾಡಲಾಗಿದ್ದು, 854 ಕುಟುಂಬಗಳಿಗೆ ಯೋಜನೆಯ ಪ್ರಯೋಜನ ಸಿಗಲಿದೆ. ₹2.04 ಕೋಟಿ ವೆಚ್ಚವಾಗಲಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.    

ಈ ನಿರ್ಣಯದ ಪ್ರಕಾರ ಇನ್ನು ಮುಂದೆ ಈ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು(Gender minorities) ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ರೂ 2,000 ಅರ್ಥಿಕ ನೆರವನ್ನು ಪಡೆಯಬವುದು.                                                                            
Gruhalakshmi amount not credited: ಇನ್ನು ಫಲಾನುಭವಿಗಳಿಗೆ ಹಣ ಬರದಿರಲು ಕಾರಣ ಮತ್ತು ಪರಿಹಾರ ಕ್ರಮದ ವಿವರ:

ಶಿವಮೊಗ್ಗ ಜಿಲ್ಲೆಯೊಂದನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಈ ಯೋಜನೆಗೆ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 3.40 ಲಕ್ಷ ಮಹಿಳೆಯರು ಅರ್ಹ ಫಲಾನುಭವಿಗಳಾಗಿದ್ದು, ಇವರ ಖಾತೆಗೆ ತಲಾ ₹2 ಸಾವಿರ ಹಾಕಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ಹಲವು ತಾಂತ್ರಿಕ ಕಾರಣಗಳಿಂದ 3.40 ಲಕ್ಷ  ಅರ್ಹ ಮಹಿಳೆಯರಲ್ಲಿ 3.23 ಲಕ್ಷ ಜನರಿಗೆ ಮಾತ್ರವೇ ರೂ 2,000 ಜಮಾ ಅಗಿದೆ, ಉಳಿದಂತೆ 17 ಸಾವಿರ ಕುಟುಂಬದ ಯಜಮಾನಿಯರು  ಗೃಹಲಕ್ಷ್ಮಿ ಯೋಜನೆ ವಂಚಿತರಾಗಿದ್ದಾರೆ.

ಇದನ್ನೂ ಓದಿ: Gruhalakshmi 2nd Installment- ರಾಜ್ಯ ಸರಕಾರದಿಂದ ನವರಾತ್ರಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ!

ಹಣ ಬಾರದಿರಲು ಕಾರಣವೇನು?:

ಹಣ ಜಮಾ ಅಗದಿರಲು ಒಟ್ಟು ಮೂರು ಪ್ರಮುಖ ಕಾರಣಗಳನ್ನು ಗುರುತಿಸಲಾಗಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಆ ಪ್ರಮುಖ ಕಾರಣಗಳ ವಿವರ ಹೀಗಿದೆ: ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಹಾಗೂ ಬ್ಯಾಂಕ್‌ ಖಾತೆ ಹೆಸರು ಹೊಂದಾಣಿಕೆಯಾಗದೇ ಇರುವುದರಿಂದ, ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಲಿಂಕ್‌ ಆಗದಿರುವುದು ಮತ್ತು ಪ್ರತಿ ತಿಂಗಳು ಸರಿಯಾಗಿ ರೇಷನ್ ಪಡೆಯದೇ ಇ-ಕೆವೈಸಿ ದಾಖಲಾಗಿ ಅಪ್‌ಡೇಟ್‌ ಮಾಡದಿರುವುದರಿಂದಲೂ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿ ಅರ್ಹ ಫಲಾನುಭವಿಗಲಾಗಿದರು ಹಣ ಪಡೆಯಲು ಸಾಧ್ಯವಾಗಿಲ್ಲ.

ಗೃಹಲಕ್ಷ್ಮಿ ಯೋಜನೆ ಆರಂಭವಾದ ಕೆವೈಸಿ ಮಾಡಿಸದ, ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಿಸದ ಹಾಗೂ ಹೆಸರುಗಳ ಹೊಂದಾಣಿ ಆಗದ, ಪಡಿತರ ಚೀಟಿಯಲ್ಲಿ ಯಜಮಾನಿ ಆಗಿರದ ಮಹಿಳೆಯರು ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಈಗಾಗಲೇ ಸೇವಾ ಕೇಂದ್ರಗಳಿಗೆ ಮುಗಿ ಬೀಳುತ್ತಿದ್ದಾರೆ. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಸರಿಯಾದ ಸಮಯಕ್ಕೆ ತಾಂತ್ರಿಕ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಅಗುತ್ತಿಲ್ಲ. ಈಗಾಗಲೇ ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ಬದಲಾವಣೆ ಮಾಡಿಕೊಂಡವರ ಹೆಸರುಗಳು ಅಪಡೇಟ್‌ ಆಗಿ, ಇನ್ನು ಕೆಲವರಿಗೆ ಹೊಸ ಪಡಿತರ ಚೀಟಿ ಬಾರದೇ ಇರುವುದರಿಂದಲೂ ಗೃಹಲಕ್ಷ್ಮಿಗೆ ನೋಂದಣಿ ಸಾಧ್ಯವಾಗುತ್ತಿಲ್ಲ . ಇವೆಲ್ಲಾ ಸಮಸ್ಯೆಗಳಿಂದಾಗಿ 17 ಸಾವಿರ ಮಂದಿಗೆ ಗೃಹಲಕ್ಷ್ಮಿ ಭಾಗ್ಯ ಕೈಗೆಟುಕದಂತಾಗಿದೆ.

ದೊಡ್ಡ ಸಂಖ್ಯೆ ಮಹಿಳೆಯರು ಗೃಹಲಕ್ಷ್ಮಿ ನೋಂದಣಿ ಸಾಧ್ಯವಾಗದೇ ಪ್ರತಿ ನಿತ್ಯವೂ ಪರದಾಡುವಂತಾಗಿದೆ. ಇವರಿಗೆ ಮುಂದೆ ಏನು ಮಾಡಬೇಕು ಎಂಬ ಗೊಂದಲ ಉಂಟಾಗಿದೆ ಈ ಕುರಿತು ಯಾವ ಕಚೇರಿಯಲ್ಲಿ ವಿಚಾರಿಸಬೇಕು ಎನ್ನುವ ಮಾಹಿತಿಯು ಅನೇಕ ಜನರಿಗೆ ತಿಳಿದಿರುವುದಿಲ್ಲ. ಇಂಥವರು ಮೊದಲು ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮಾಡಿಸಿ, ಪಡಿತರ ಚೀಟಿಯಲ್ಲಿ ಯಜಮಾನಿಯನ್ನು ಗುರುತಿಸಿಕೊಂಡು, ಹೆಸರು ವಿಳಾಸದ ಅಥವಾ ಬ್ಯಾಂಕ್‌ ಖಾತೆಯ ಮೊಬೈಲ್‌ ಸಂಖ್ಯೆಯ ಬದಲಾವಣೆಗಳಿದ್ದರೆ ಸರಿಪಡಿಸಿಕೊಳ್ಳಬೇಕು. 

ಈ ಮಾಹಿತಿ ಸರಿಯಾಗಿ ಅಪಡೇಟ್‌ ಆದ ಮೇಲೆ ಆಯಾ ತಾಲೂಕಿನ ಸಿಡಿಪಿಒ ಕಚೇರಿ/ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌ ಸೇವಾ ಕೇಂದ್ರಗಳಿಗೆ ತೆರಳಿ, ಅಲ್ಲಿನ ಗೃಹಲಕ್ಷ್ಮಿಗಾಗಿಯೇ ಸ್ಥಾಪಿಸಿರುವ ಕೌಂಟರ್‌ನಲ್ಲಿ ನೋಂದಣಿ ಕಾರ್ಯವನ್ನು ಮಾಡಿಸಿಕೊಳ್ಳಬೇಕು. ಹೀಗೆ ನೋಂದಣಿ ಮಾಡಿಸಿಕೊಂಡ ನಂತರ ಕನಿಷ್ಠ ಒಂದು ತಿಂಗಳಾದರೂ ಕಾದರೆ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಪ್ರಯೋಜನ ಪಡೆದುಕೊಳ್ಳಬಹುದು. ಒಂದು ತಿಂಗಳಾದ ನಂತರವೂ ಖಾತೆಗೆ 2 ಸಾವಿರ ಬಾರದಿದ್ದರೆ ಸಿಡಿಪಿಒ ಕಚೇರಿಗೆ ತೆರಳಿ ತಮ್ಮ ಅರ್ಜಿಯ ಸ್ಥಿತಿ ಏನಾಗಿದೆ ಎಂಬುದನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳಬೇಕಿದೆ.

ಇದನ್ನೂ ಓದಿ: October Pension amount-2023: 77.6 ಲಕ್ಷ ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳ ಪಿಂಚಣಿ ಹಣ ಜಮೆ! ನಿಮಗೆ ಬಂತಾ ಚೆಕ್ ಮಾಡಿ.

ಇ-ಕೆವೈಸಿ ಅಗಿದ್ದರು ಹಣ ಬಾರದೇ ಇದಲ್ಲಿ ಹೀಗೆ ಮಾಡಿ:

ಒಂದೊಮ್ಮೆ ನೀವು ಮೊದಲು ನಿಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ಮಾಡಿಸಿ ನಂತರ ಪುನಃ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಗ್ರಾಮ್ ಒನ್ ಕೇಂದ್ರಕ್ಕೆ ಹೋದಾಗ ಇ-ಕೆವೈಸಿ ಅಗಿಲ್ಲ ಎಂದು ಅವರು ತಿಳಿಸಿದ್ದರೆ, ನೀವು ನಿಮ್ಮ ತಾಲ್ಲೂಕಿನ ಆಹಾರ ಇಲಾಖೆಯ ಕಚೇರಿಯನ್ನು(food inspector office) ಭೇಟಿ ಮಾಡಿ ಇ-ಕೆವೈಸಿ ಕುರಿತು ವಿಚಾರಿಸಿ ಅರ್ಜಿಯನ್ನು ಸರಿಪಡಿಸಿಕೊಳ್ಳಬೇಕು.

ನಿಮ್ಮ ತಾಲ್ಲೂಕಿನ ಆಹಾರ ಇಲಾಖೆಯ ಕಚೇರಿಯ(food inspector office) ವಿಳಾಸ ಪಡೆಯಲು ಇಲ್ಲಿ ಕ್ಲಿಕ್ ಮಾಡಿ: Click here

ನಿಮ್ಮ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ(CDPO office) ಕಚೇರಿ ವಿಳಾಸ ಇತರೆ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ: Click here

ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿಸ್ತರಣೆ ಮಾಡಲಾಗಿದ್ದು, 854 ಕುಟುಂಬಗಳಿಗೆ ಯೋಜನೆಯ ಪ್ರಯೋಜನ ಸಿಗಲಿದೆ. ₹2.04 ಕೋಟಿ ವೆಚ್ಚವಾಗಲಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.#lgbtqia #Gruhalaxmi pic.twitter.com/Cu40sZSihc — Laxmi Hebbalkar (@laxmi_hebbalkar) October 21, 2023

ಇದನ್ನೂ ಓದಿ: Kaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

Most Popular

Latest Articles

- Advertisment -

Related Articles