HomeNew postsGruhalakshmi: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ...

Gruhalakshmi: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಅರ್ಥಿಕವಾಗಿ ನೆರವು ನೀಡಲು ಗೃಹಲಕ್ಷ್ಮಿ(Gruhalakshmi) ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪಡಿತರ ಚೀಟಿ ಮುಖ್ಯಸ್ಥ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ 2,000 ವನ್ನು ವರ್ಗಾಹಿಸಲಾಗುತ್ತದೆ.

ಈಗಾಗಲೇ ಈ ಯೋಜನೆಯಡಿ ಮೊದಲ ಕಂತಿನ ಹಣವನ್ನು ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಖಾತೆಗೆ ಹಣ ವರ್ಗಾಹಿಸಲಾಗಿದ್ದು ಅದರೆ ಇನ್ನು ಶೇ 20-25 % ಜನರಿಗೆ ಮೊದಲ ಕಂತಿನ ಹಣ ಬಂದಿರುವುದಿಲ್ಲ.

ಯಾಕೆ ಹಣ ಜಮಾ ಆಗಿಲ್ಲ? ಹಣ ಜಮಾ ಅಗದಿರಲು ಸೂಕ್ತ ಕಾರಣ ಹಲವು ಮಹಿಳೆಯರಿಗೆ ಇಲ್ಲ. ಇನ್ನೂ ಹಣ ಬಾರದ ಮಹಿಳೆಯರು ಮೊದಲು ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಸರ್ಕಾರ ಆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗೃಹಲಕ್ಷ್ಮಿ ಯೋಜನೆಯ ಹಣ ಯಾರು ಪಡೆದಿದ್ದಾರೆ, ಯಾರು ಹಣ ಪಡೆಯಲು ಸಾಧ್ಯವಾಗಿಲ್ಲ, ಯಾರು ಯೋಜನೆಗೆ ಅರ್ಹವಿಲ್ಲ ಎಂಬುದು ಸೇರಿದಂತೆ ಹಲವು ಮಾಹಿತಿ ಈ ಪಟ್ಟಿಯಲ್ಲಿ ಇರುತ್ತದೆ.

ಇದನ್ನೂ ಓದಿ: BPL ಮತ್ತು  APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್!  ಮಿಸ್ ಮಾಡ್ದೆ ಸುದ್ದಿ ನೋಡಿ.

ಇದನ್ನೂ ಓದಿ: ಒಂದು ಭಾರಿಯು ಅನ್ನಭಾಗ್ಯ ಯೋಜನೆಯಡಿ ಹಣ ಜಮಾ ಅಗಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮಗಳು.

Gruhalakshmi Status check- ಗೃಹಲಕ್ಷ್ಮಿ ಯೋಜನೆ ಲಿಸ್ಟ್ ಎಲ್ಲಿ ಸಿಗುತ್ತದೆ?

ಅರ್ಜಿ ಸಲ್ಲಿಸಿದ ಬಳಿಕವು ಮೊದಲ ಕಂತಿನ ಹಣ ಪಡೆಯದವರು ಒಮ್ಮೆ ನಿಮ್ಮ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಈ ಮಾಹಿತಿ ಪಡೆಯಬಹುದು. ಹಾಗೂ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಛೇರಿಗೆ(CDPO) ಭೇಟಿ ನೀಡಿ ಗೃಹಲಕ್ಷ್ಮಿ ಮೊದಲ ಕಂತಿನ ಹಣ ವರ್ಗಾವಣೆ ಸ್ಥಿತಿ ಕುರಿತು ಮಾಹಿತಿ ಪಡೆಯಬಹುದು. 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಖ್ಯಸ್ಥರಾದ CDPO ಕಚೇರಿ ಅಧಿಕಾರಿಗಳ ಬಳಿ ಆಯಾ ತಾಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಫಲಾನುಭವಿಗಳ ಪಟ್ಟಿಯಿದ್ದು, ಆ ಮೂಲಕ ಮಾಹಿತಿಯನ್ನು ತಿಳಿಯಬವುದು.

ಮುಂದುವರೆದು ಇನ್ನು ಯೋಜನೆಯ ಹಣ ಪಡೆಯದೇ ಇದ್ದವರು ನಿಮ್ಮ ರೇಷನ್ ಕಾರ್ಡ್ ಗೆ ಎಲ್ಲಾ ಸದಸ್ಯರ eKYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ eKYC  ಮಾಡಿಸಿಕೊಳ್ಳಿ.

ಇದನ್ನೂ ಓದಿ: PM-kisan amount- ಈ ರೀತಿ  ಸಂದೇಶ ಬಂದವರಿಗಿಲ್ಲಾ ಪಿ ಎಂ ಕಿಸಾನ್ ಯೋಜನೆ ಹಣ!

ರೇಷನ್ ಕಾರ್ಡ ಇ-ಕೆವೈಸಿ ಪರಿಶೀಲಿಸಿದ ಬಳಿಕ ನಿಮ್ಮ ಬ್ಯಾಂಕ್ ಅಕೌಂಟ್ ಇರುವ ಶಾಖೆಯನ್ನು ಭೇಟಿ ಮಾಡಿ ನಿಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಅಗಿದಿಯೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಿ.

ನಿಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರದಲ್ಲಿ ಮಾಹಿತಿಗಳು ಹೊಂದಾಣಿಕೆ ಆಗಿರಬೇಕು, ಅಥವಾ ಹೆಸರುಗಳಲ್ಲಿ ಏನಾದರೂ ತಪ್ಪಾಗಿದ್ದರೆ ಬೇಗನೇ ಸರಿಪಡಿಸಿಕೊಳ್ಳಿ.ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ. ಆಧಾರ್ ಲಿಂಕ್ ಮಾತ್ರವಲ್ಲ ಸೀಡಿಂಗ್ ಆಗಿ NPCI ಮ್ಯಾಪಿಂಗ್ ಕೂಡ ಆಗಿರಬೇಕಾಗುತ್ತದೆ.

ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿ ಸರಿ ಇದ್ದರು ನಿಮಗೆ ಹಣ ಬರದಿದ್ದಲ್ಲಿ ಒಮ್ಮೆ ನಿಮ್ಮ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಛೇರಿಗೆ(CDPO) ಭೇಟಿ ಮಾಡಿ ಹೆಚ್ಚಿನ ಮಾಹಿತಿ ಪಡೆಯಬವುದು. 

ನಿಮ್ಮ ತಾಲ್ಲೂಕುನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ(CDPO) ಕಚೇರಿ ವಿಳಾಸದ ಮಾಹಿತಿ

ಇಲ್ಲಿ ಕ್ಲಿಕ್ ಮಾಡಿ> CDPO Office address ನಿಮ್ಮ ತಾಲ್ಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ CDPO ಅಧಿಕಾರಿಗಳ ಕಚೇರಿ ಎಲ್ಲಿ ಇದೆ ಎನ್ನುವ ಮಾಹಿತಿಯನ್ನು ತಿಳಿದುಕೊಳ್ಳಬವುದಾಗಿದೆ.

ಇದನ್ನೂ ಓದಿ: Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

Most Popular

Latest Articles

- Advertisment -

Related Articles