Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

June 21, 2025 | Siddesh
Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!
Share Now:

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi scheme latest News) ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯನ್ನು ನೀಡಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣಕ್ಕಾಗಿ ರೂಪಿಸಲಾದ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ, ಅರ್ಹ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: Navodaya Online Application-ನವೋದಯ ಶಾಲೆ ಪ್ರವೇಶಾತಿಗೆ ಅರ್ಜಿ ಆಹ್ವಾನ!

ಇದು ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಜೊತೆಗೆ, ಅವರ ಜೀವನಮಟ್ಟವನ್ನು ಉತ್ತಮಗೊಳಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯ ಕುರಿತು ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi hebbalkar) ಅವರು ವಿಧಾನಸೌಧದಲ್ಲಿ ಜೂನ್ 19, 2025 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಯೋಜನೆಯಡಿ ಬಾಕಿ ಹಣ ಬಿಡುಗಡೆ ಮತ್ತು ಇನ್ನಿತರೆ ಅಗತ್ಯ ಮಾಹಿತಿಯನ್ನು ತಿಳಿಸಿದ್ದು ಇದರ ವಿವರ ಈ ಕೆಳಗೆ ಹಂಚಿಕೊಳ್ಳಲಾಗಿದೆ.

Gruhalakshmi Yojana-ಗೃಹಲಕ್ಷ್ಮಿ ಯೋಜನೆ ಒಂದು ಅವಲೋಕನ:

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು 2023ರಲ್ಲಿ ಜಾರಿಗೆ ಬಂದಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ.

ಈ ಯೋಜನೆಯಡಿ, ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಯಿಸಲಾಗುತ್ತದೆ, ಇದರಿಂದ ಸರ್ಕಾರದ ಸಹಾಯವು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತದೆ. ಈ ಯೋಜನೆಯು ರಾಜ್ಯದ ಸುಮಾರು 1.28 ಕೋಟಿ ಮಹಿಳೆಯರಿಗೆ ಲಾಭವನ್ನು ಒದಗಿಸಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Garden fair in bangalore-ಸಸ್ಯ ಸಂತೆಯಲ್ಲಿ ಮಾರಾಟ ಮಳಿಗೆ ನೋಂದಣಿಗೆ ಅರ್ಜಿ ಅಹ್ವಾನ!

ಗೃಹಲಕ್ಷ್ಮಿ ಯೋಜನೆಯ ಮುಖ್ಯ ಉದ್ದೇಶವೆಂದರೆ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವುದು. ಈ ಯೋಜನೆಯಿಂದಾಗಿ, ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರು ತಮ್ಮ ಕುಟುಂಬದ ದೈನಂದಿನ ಖರ್ಚುಗಳನ್ನು ಭರಿಸಲು, ತಮ್ಮ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಮತ್ತು ಸಣ್ಣ ವ್ಯಾಪಾರ ಆರಂಭಿಸಲು ಸಾಧ್ಯವಾಗಿದೆ. ಈ ಯೋಜನೆಯು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ತುಂಬಿದೆ ಮತ್ತು ಸಾಮಾಜಿಕ-ಆರ್ಥಿಕ ಬದಲಾವಣೆಯನ್ನು ತಂದಿದೆ.

Gruhalakshmi-2025: ಗೃಹಲಕ್ಷ್ಮಿ ಪಟ್ಟಿ ಪರಿಷ್ಕರಣೆ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ವಿಧಾನಸೌಧದಲ್ಲಿ ಜೂನ್ 19, 2025 ರಂದು ನಡೆದ ಸುದ್ದಿಗೋಷ್ಠಿಯಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂತಸದಾಯಕ ಸುದ್ದಿಯನ್ನು ತಿಳಿಸಿದ್ದಾರೆ. ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಅಥವಾ ಕಡಿತಗೊಳಿಸುವಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವು ವದಂತಿಗಳು ಫಲಾನುಭವಿಗಳ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹಬ್ಬಿದ್ದವು, ಆದರೆ ಸಚಿವೆಯವರು ಈ ವದಂತಿಗಳನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ.

ಇದರ ಜೊತೆಗೆ, ಪ್ರತಿ ತಿಂಗಳು ಸರಾಸರಿ 10,000 ರಿಂದ 15,000 ಹೊಸ ಫಲಾನುಭವಿಗಳು ಈ ಯೋಜನೆಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಸಚಿವೆಯವರು ತಿಳಿಸಿದ್ದಾರೆ. ಇದರಿಂದಾಗಿ, ಯೋಜನೆಯ ವ್ಯಾಪ್ತಿಯು ಇನ್ನಷ್ಟು ವಿಸ್ತರಿಸುತ್ತಿದೆ ಮತ್ತು ಹೆಚ್ಚಿನ ಮಹಿಳೆಯರಿಗೆ ಆರ್ಥಿಕ ಸಹಾಯ ದೊರೆಯುತ್ತಿದೆ. ಈ ಯೋಜನೆಯ ಹಣವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

gruhalakshmi status

ಇದನ್ನೂ ಓದಿ: Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

Karnataka Gruhalakshmi Scheme-ಏಪ್ರಿಲ್-2025 ವರೆಗೆ ಗೃಹಲಕ್ಷ್ಮಿ ಹಣ ವರ್ಗಾವಣೆ:

ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೆ ತಲಾ ರೂ 2,000/- ದಂತೆ 20 ಕಂತಿನ ಹಣವನ್ನು ಜಮಾ ಮಾಡಲಾಗಿದ್ದು ಏಪ್ರಿಲ್-2025 ರ ವರೆಗೆ ಈ ಯೋಜನೆಯಡಿ ಎಲ್ಲಾ ಅರ್ಹ ಫಲಾನುಭವಿ ಮಹಿಳೆಯರಿಗೆ ಹಣವನ್ನು ಜಮಾ ಮಾಡಲಾಗಿದೆ ಎಂದು ಸುದ್ದಿಗೊಷ್ಠಿಯಲ್ಲಿ ಮಾಹಿತಿಯನ್ನು ತಿಳಿಸಿದ್ದಾರೆ.

Gruhalakshmi Hana-ಹಣ ಬಿಡುಗಡೆಗೆ ವಿಳಂಬಕ್ಕೆ ಕಾರಣ:

ಬಹುತೇಕ ಮಹಿಳೆಯರು ಹಾಗೂ ಸಾರ್ವಜನಿಕರು ಗೃಹಲಕ್ಷ್ಮಿ ಯೋಜನೆಯಡಿ ಹಣ ಬಿಡುಗಡೆಯು ದಿನದಿಂದ ದಿನಕ್ಕೆ ಪ್ರತಿ ತಿಂಗಳು ನೀಡುತ್ತಿರುವ ರೂ 2,000/- ಆರ್ಥಿಕ ನೆರವು ತಡವಾಗಿ ಅಥವಾ ಪ್ರತಿ ತಿಂಗಳು ಸರಿಯಾಗಿ ಬ್ಯಾಂಕ್ ಖಾತೆಗೆ ಜಮಾ ಅಗುತ್ತಿಲ್ಲ ಎಂದು ದೂರುತ್ತಿದ್ದಾರೆ ಇದಕ್ಕೆ ಪ್ರಮುಖ ಕಾರಣವನ್ನು ಸಚಿವರು ತಿಳಿಸಿದ್ದು ಇದರ ವಿವರ ಹೀಗಿದೆ:

ಈ ಹಿಂದೆ ಸಂಬಂಧಪಟ್ಟ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗ ಜಮಾ ಅಗುತ್ತಿತ್ತು ಅದರೆ ಈಗ ಜಿಲ್ಲಾ ಪಂಚಾಯತಿ(ZP) ಮತ್ತು ತಾಲ್ಲೂಕು ಪಂಚಾಯತಿಗಳ(TP) ಮೂಲಕ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣವನ್ನು ಜಮಾ ಮಾಡಬೇಕು ಎನ್ನುವ ಕೇಂದ್ರದ ನಿಯಮದಿಂದಾಗಿ ಫಲಾನುಭವಿಗಳಿಗೆ ಆರ್ಥಿಕ ನೆರವನ್ನು ತಲುಪಿಸಲು ವಿಳಂಬವಾಗುತ್ತಿದೆ ಎಂದು ಮಾಹಿತಿಯನ್ನು ತಿಳಿಸಿದರು.

ಇದನ್ನೂ ಓದಿ: SSP Scholarship-ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ!

Gruhalakshmi Pending Amount-ಒಂದೆರಡು ವಾರದಲ್ಲಿ ಬಾಕಿ ಹಣ ಬಿಡುಗಡೆ:

ಗೃಹಲಕ್ಷ್ಮಿ ಯೋಜನೆಯಡಿ ಆರ್ಥಿಕ ನೆರವು ವರ್ಗಾವಣೆಯು ಬಾಕಿಯಿದ್ದು ಈ ಹಣ ಬಿಡುಗಡೆ ಕುರಿತು ಸಂಬಂಧಪಟ್ಟ ಇಲಾಖೆಗೆ ಕಡತವನ್ನು ವರ್ಗಾವಣೆ ಮಾಡಲಾಗಿದ್ದು ಉಳಿದ ತಿಂಗಳ ಹಣವೂ ಒಂದೆರಡು ವಾರಗಳಲ್ಲಿ ಜಮೆಯಾಗುವ ಭರವಸೆಯನ್ನು ಸರ್ಕಾರ ನೀಡಿದೆ.

Gruhalakshmi Account Aadhar link-ಹಣ ವರ್ಗಾವಣೆಯಲ್ಲಿ ತಾಂತ್ರಿಕ ಸಮಸ್ಯೆ ಮತ್ತು ಪರಿಹಾರಕ್ಕೆ ಕ್ರಮ:

ಗೃಹಲಕ್ಷ್ಮಿ ಯೋಜನೆಯು ಒಟ್ಟಾರೆ ಯಶಸ್ವಿಯಾಗಿದ್ದರೂ, ಕೆಲವೊಮ್ಮೆ ಹಣ ವಿತರಣೆಯಲ್ಲಿ ವಿಳಂಬವಾಗಿರುವ ದೂರುಗಳು ಕೇಳಿಬಂದಿವೆ. ಈ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ವಿಳಂಬವನ್ನು ಕಡಿಮೆ ಮಾಡಲು ಕ್ರಮ ಕೈಗೊಂಡಿದೆ.

ಉದಾಹರಣೆಗೆ, ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿ ಆಧಾರ್ ಸೀಡಿಂಗ್ ಸಮಸ್ಯೆಯಿಂದಾಗಿ ಹಣ ವರ್ಗಾವಣೆಯಾಗಿರಲಿಲ್ಲ ಮತ್ತು ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತೆ ಆಧಾರ್ ಕಾರ್ಡ, ಪಾನ್ ಕಾರ್ಡ ನೀಡಿ KYC ಮಾಡಿಕೊಳ್ಳದವರಿಗೂ ಸಹ ಆರ್ಥಿಕ ನೆರವು ಜಮಾ ಅಗಿರುವುದಿಲ್ಲ ಎಂದು ತಿಳಿಸಿದ್ದು, ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಆಧಾರ್ ಸೀಡಿಂಗ್ ಪ್ರಕ್ರಿಯೆಯನ್ನು ಸರಳಗೊಳಿಸಿದೆ ಮತ್ತು ಬಾಕಿ ಹಣವನ್ನು ಶೀಘ್ರವಾಗಿ ವರ್ಗಾಯಿಸುವಂತೆ ಕ್ರಮವಹಿಸಿದೆ.

ಇದನ್ನೂ ಓದಿ: Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

For More Information-ಇನ್ನು ಹೆಚ್ಚಿನ ಮಾಹಿತಿಗಾಗಿ:

Karnataka guarantee scheme Webiste-ಖಾತರಿ ಯೋಜನೆಗಳ ಅಧಿಕೃತ ವೆಬ್ಸೈಟ್- Click Here
Gruhalashmi DBT Status-ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ವಿವರ ತಿಳಿಯಲು ಮೊಬೈಲ್ ಅಪ್ಲಿಕೇಶನ್-Gruhalakshmi Status

WhatsApp Group Join Now
Telegram Group Join Now
Share Now: