Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

Karnataka guarantee yojana: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(cm of karnataka) ನವರು ಸ್ಪಷ್ಟನೆ ನೀಡಿರುವ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ.

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!
Karnataka guarantee yojana-2024

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(cm of karnataka) ನವರು ಸ್ಪಷ್ಟನೆ ನೀಡಿರುವ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ 27 ನವೆಂಬರ್ 2023 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ 5 ಸಾವಿರ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಮುಖ್ಯಮಂತ್ರಿಗಳು, ಆಡಳಿತ ಜನರ ಬಳಿಗೆ ಹೋಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಜನರು ಸಣ್ಣ ಪುಟ್ಟ ಕೆಲಸಗಳಿಗಾಗಿ ಬೆಂಗಳೂರಿಗೆ ಬರುವಂತಾಗಬಾರದು. ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: Subsidy for Digital Media- ಶೇ 70% ಸಬ್ಸಿಡಿಯಲ್ಲಿ 5 ಲಕ್ಷದವರೆಗೆ ಸಹಾಯಧನದಲ್ಲಿ ಡಿಜಿಟಲ್ ಮಾಧ್ಯಮ ಸ್ಥಾಪನೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: HSRP number plate-2024: HSRP ನಂಬರ್ ಪ್ಲೇಟ್ ಏಕೆ? ಹಾಕಿಸಬೇಕು, ನಂಬರ್ ಪ್ಲೇಟ್ ಹೇಗಿರುತ್ತದೆ? ಇಲ್ಲಿದೆ ಆನ್ಲೈನ್ ನಲ್ಲಿ ಬುಕ್ ಮಾಡಲು ವೆಬ್ಸೈಟ್ ಲಿಂಕ್

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದ ಅವರು,

ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಜಾರಿಗೊಳಿಸಿದರೇ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂಬುದು ಸೇರಿದಂತೆ ವಿವಿಧ ರೀತಿಯ ಅಪಪ್ರಚಾರಗಳನ್ನು ಮಾಡಿದ್ದು, ಅಂತಹ ಅಪಪ್ರಚಾರಗಳಿಗೆ ಮತ್ತು ಸುಳ್ಳು ವದಂತಿಗಳಿಗೆ ಜನರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: PMFME ಯೋಜನೆಯಡಿ ಸ್ವ-ಉದ್ಯೋಗ ಆರಂಭಿಸಲು 15 ಲಕ್ಷ ದವರೆಗೆ ಶೇ 50% ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ. ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ಸಮ ಸಮಾಜ ನಿರ್ಮಿಸುವ ಮತ್ತು ಅಸಮಾನತೆ ಹೊಗಲಾಡಿಸುವ ಈ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ಅವರು ಹೇಳಿದರು.

ಮಾಧ್ಯಮದವರು ಸಹ ಗ್ಯಾರಂಟಿ ಕಾರ್ಯಕ್ರಮಗಳ ಮೌಲ್ಯಮಾಪನ ಮಾಡಿ ಎಂದು ಹೇಳಿದ ಅವರು ಗ್ಯಾರಂಟಿಗಳು ಸಹ ಅಭಿವೃದ್ಧಿ ಕಾರ್ಯಕ್ರಮಗಳೇ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ, ಶಿವರಾಜ ತಂಗಡಗಿ, ಶಾಸಕರುಗಳು, ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು. ನಂತರ ಮುಖ್ಯಮಂತ್ರಿಗಳು ಕೌಂಟರ್‌ಗಳಿಗೆ ತೆರಳಿ ಅರ್ಜಿದಾರರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಇದನ್ನೂ ಓದಿ: PMFME ಯೋಜನೆಯಡಿ ಸ್ವ-ಉದ್ಯೋಗ ಆರಂಭಿಸಲು 15 ಲಕ್ಷ ದವರೆಗೆ ಶೇ 50% ಸಹಾಯಧನ ಪಡೆಯಲು ಅರ್ಜಿ ಆಹ್ವಾನ!