Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

May 27, 2025 | Siddesh
Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!
Share Now:

ಶಿಕ್ಷಣ ಇಲಾಖೆಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಲ್ಲಿ ಖಾಲಿ ಇರುವ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ(Guest Teacher Notification) ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಡಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು(Guest Teacher Job) ರಾಜ್ಯ ಸರ್ಕಾರವು ಮುಂದಾಗಿದ್ದು ಇದರ ಬಗ್ಗೆ ಕೆಲವು ಮಾಹಿತಿಯನ್ನು ಹಂಚಿಕೊಳ್ಳಲು ಪ್ರಕಟಣೆಯನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: Vidyadhan Scholorship-SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ!

ಈ ಅಂಕಣದಲ್ಲಿ ರಾಜ್ಯ ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ(Guest Teacher Job Application) ಹೊರಡಿಸಿರುವ ಆದೇಶದಲ್ಲಿ ಹಂಚಿಕೊಂಡಿರುವ ಸಂಪೂರ್ಣ ಮಾಹಿತಿಯನ್ನು ಮತ್ತು ಇನ್ನಿತರೆ ಪೂರಕ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

Guest Teacher Salary-ಅತಿಥಿ ಶಿಕ್ಷಕರ ನೇಮಕಾತಿ ಸಂಖ್ಯೆಗಳು:

ಸರ್ಕಾರದಿಂದ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಆದೇಶದಲ್ಲಿ ಹಂಚಿಕೊಂಡಿರುವ ಅಂಕಿ-ಅಂಶದ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

ವಿವರಶಿಕ್ಷಕರ ಸಂಖ್ಯೆ
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ40,000
ಸರ್ಕಾರಿ ಪ್ರೌಡಶಾಲೆಗಳಲ್ಲಿ11,000
ಒಟ್ಟು51,000

Guest Teacher Notification-51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶದ ವಿವರ ಹೀಗಿದೆ:

2024-25 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35000 ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 (ನಲವತ್ತೈದು ಸಾವಿರ) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗಧಿಪಡಿಸಿ ದಿನಾಂಕ: 29.05.2025 ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ, 2025-26 ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು,

ಇದನ್ನೂ ಓದಿ: Bele Parihara-38.5 ಲಕ್ಷ ರೈತರ ಖಾತೆಗೆ 3535 ಕೋಟಿ ಬೆಳೆ ಹಾನಿ ಪರಿಹಾರ!

ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತೆ ಇದ್ದು, ಪ್ರಾಥಮಿಕ/ಪ್ರೌಢಶಾಲೆಗಳನ್ನು ಪ್ರಾರಂಭಿಸಿ,

ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡುತ್ತಾ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ – ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೋಧನಾ ಪ್ರಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 45,000 ಹಾಗೂ ಪ್ರೌಢಶಾಲೆಗಳಿಗೆ 11,000 ಒಟ್ಟು 56,000 (ಐವತ್ತಾರು ಸಾವಿರ) ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪುಸ್ತಾವನೆಯಲ್ಲಿ ಸಲ್ಲಿಸಿರುತ್ತಾರೆ.

ಇದನ್ನೂ ಓದಿ: Mini Tractor Subsidy-ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಘಟಕಗಳಿಗೆ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

Guest Teacher Monthly Salary-ಪ್ರತಿ ತಿಂಗಳಿಗೆ ನಿಗದಿಪಡಿಸಿದ ವೇತನ:

ರಾಜ್ಯ ಸರ್ಕಾರದಿಂದ ನೇಮಕ ಮಾಡಿಕೊಳ್ಳುವ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳು ನಿಗದಿಪಡಿಸಿರುವ ವೇತನದ ವಿವರ ಈ ಕೆಳಗಿನಂತಿದೆ.

ವಿವರಗೌರವಧನ
ಪ್ರಾಥಮಿಕ ಅತಿಥಿ ಶಿಕ್ಷಕರಿಗೆ₹12,000
ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ₹12,500

ಇದನ್ನೂ ಓದಿ: BPL Card Benefits-ಬಿಪಿಎಲ್‌ ಕಾರ್ಡ್‌ದಾರರಿಗೆ ಇನ್ನುಂದೆ ಈ ಚಿಕಿತ್ಸೆ ಉಚಿತ!

Guest Teacher Notification-ಅಧಿಕೃತ ಆದೇಶದ ಪ್ರತಿ:

Guest Teacher Notification
Guest Teacher

Karnataka Education Department Website-ಹೆಚ್ಚಿನ ಮಾಹಿತಿಯನ್ನು ಪಡೆಯಲು ಶಿಕ್ಷಣ ಇಲಾಖೆಯ ವೆಬ್ಸೈಟ್ ಲಿಂಕ್- Click Here

WhatsApp Group Join Now
Telegram Group Join Now
Share Now: