Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

June 21, 2025 | Siddesh
Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!
Share Now:

ರಾಜ್ಯ ಸರ್ಕಾರದಿಂದ(Karnataka Government) ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ ₹ 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು(Government Insurance Scheme) ಪಡೆಯಲು ನೂತನ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ.

ಈ ಯೋಜನೆ ಜಾರಿಯಿಂದಾಗಿ ಸರಿ ಸುಮಾರು 3 ಲಕ್ಷ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ಸೇವೆಯನ್ನು(Health Insurance Scheme)ಪಡೆಯಲು ಆರ್ಥಿಕವಾಗಿ ನೆರವನ್ನು ಪಡೆಯಲು ಸಹಾಯವಾಗಲಿದೆ.

ಇದನ್ನೂ ಓದಿ: Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವೆಲ್ಲ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ? ಯಾವೆಲ್ಲ ಜಿಲ್ಲೆಗಳಿಗೆ ಅನುದಾನವನ್ನು ಒದಗಿಸಲಾಗಿದೆ ಎನ್ನುವ ಮಾಹಿತಿ ಸೇರಿದಂತೆ ₹ 5 ಲಕ್ಷಗಳವರೆಗೆ(Health Insurance) ನಗದು ರಹಿತ ಚಿಕಿತ್ಸೆಯನ್ನು ಪಡೆಯಲು ಯಾರೆಲ್ಲ ಅರ್ಹರು ಎನ್ನುವ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ:

ಇನ್ನು ಮುಂದೆ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ - ಯೋಜನೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಅನುಮೋದನೆಯನ್ನು ನೀಡಲಾಗಿದ್ದು ಈ ಕ್ರಮದಿಂದ ಅನೇಕ ಜನರಿಗೆ ಆರೋಗ್ಯ ಸೇವೆಯನ್ನು ಪಡೆಯಲು ಆರ್ಥಿಕವಾಗಿ ನೆರವು ದೊರೆಯಲಿದೆ.

ಇದನ್ನೂ ಓದಿ: Bisi uta yojana-ಬಿಸಿಯೂಟದ ಅಡುಗೆಯವರಿಗೆ ವೇತನ ಹೆಚ್ಚಳ ಮಾಡಿದ ಸರ್ಕಾರ!

Cash Less Health Insurance-ನಗದು ರಹಿತ ಚಿಕಿತ್ಸೆಯನ್ನು ಪಡೆಯಲು ಯಾರೆಲ್ಲ ಅರ್ಹರು:

ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು ಎಂದು ಯೋಜನೆಯ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

health insurance

ಇದನ್ನೂ ಓದಿ: SSP Scholarship-ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ!

Karnataka Government Cabinet Meeting-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ(Honnavar) ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇ‌ರ್ ಪ್ರದೇಶವನ್ನು ಅಪ್ಪರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ನಿರ್ಧಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ - ಯೋಜನೆಗೆ ಹಸಿರು ನಿಶಾನೆ ನೀಡಲಾಗಿದೆ.

ಸ್ಪೋಕ್ ಯೋಜನೆಯ ರೂ. 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ಇದನ್ನೂ ಓದಿ: Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

ಕಂದಾಯ ಇಲಾಖೆಯಡಿ(Revenue Department) ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟ ಬಸಾಪೂರ ಎಂದು ಮರುನಾಮಕರಣ ಮಾಡಲು ತೀರ್ಮಾನ.

ಬೀದ‌ರ್(Bidar) ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ ರೂ. 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು ರೂ 23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ.

ಇದನ್ನೂ ಓದಿ: Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್‌ ಬಡಲಾವಣೆಯಲ್ಲಿ ಖಾಲಿ ನಿವೇಶನವನ್ನು ಶೇ 50 ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡಲು ನಿರ್ಧಾರ.

ಕೊಪ್ಪಳ(Koppal) ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿನಾಲೆಯ ಮೇಲ್ಬಾಗದಲ್ಲಿ ಬ್ರಿಡ್ಜ್-ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ ರೂ.134.56 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

ರಾಯಚೂರು(Raichur) ಜಿಲ್ಲೆ ಸಿಂಧನೂರು ತಾಲ್ಲೂಕಿನ ಚನ್ನಬಸವೇಶ್ವರ (ಒಳಬಳ್ಳಾರಿ) ಏತ ನೀರಾವರಿ ಯೋಜನೆಯ ಜಾಕ್ ವೆಲ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಮಾಡುವ ರೂ.4330 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ(Karnataka Health Department) ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು ರೂ.15.97 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ನಿರ್ಧಾರ.

ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ.

ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಬೆಳೆಗಾರರಿಗೆ ಪರಿಹಾರವನ್ನು ಒದಗಿಸಿಕೊಡಲು ಕೇಂದ್ರವನ್ನು ಒತ್ತಾಯಿಸಲು ಕೃಷಿ ಸಚಿವರಿಗೆ ಸೂಚನೆ ನೀಡಲಾಗಿದೆ.

WhatsApp Group Join Now
Telegram Group Join Now
Share Now: