Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

January 16, 2026 | Siddesh
Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!
Share Now:

ನಾಗರಿಕರು ರಾಜ್ಯ ಸರಕಾರದಿಂದ ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ(Dr B R Ambedkar Nivasi Yojane) ಸ್ವಂತ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಗರಿಷ್ಠ ರೂ 2.0 ಲಕ್ಷ ಆರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾವಿದ್ದು ಇಂದಿನ ಅಂಕಣದಲ್ಲಿ ಈ ಯೋಜನೆಯ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಪ್ರಕಟಿಸಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಮನೆ ನಿರ್ಮಾಣ ಮಾಡಿಕೊಳ್ಳಲು ವಿವಿಧ ಸಹಾಯಧನ ಆಧಾರಿತ ಯೋಜನೆಗಳು(Karnataka Vasati Yojane) ಜಾರಿಯಲ್ಲಿದ್ದು ಪ್ರಸ್ತುತ ಈ ಲೇಖನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆ ಬಗ್ಗೆ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಎಂದರೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಸೇರಿದಂತೆ ಇನ್ನಿತರೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎನ್ನುವ ಕನಸನ್ನು ಬಹುತೇಕ ಎಲ್ಲಾ ಜನರು ಹೊಂದಿರುತ್ತಾರೆ ಈ ನಿಟ್ಟಿನಲ್ಲಿ ಮನೆಯನ್ನು(Vasati Yojane) ನಿರ್ಮಾಣ ಮಾಡಿಕೊಳ್ಳುವ ಯೋಜನೆ ಇರುವ ಒಂದು ವರ್ಷ ಮೊದಲೇ ಯಾವೆಲ್ಲ ಸರಕಾರಿ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಬಹುದು ಎನ್ನುವ ಬಗ್ಗೆ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಿರುವುದು ಒಂದು ಉತ್ತಮ ಆಯ್ಕೆಯಾಗಿದೆ.

Dr B R Ambedkar Nivasi Yojane Application-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ವಿವರಣೆ:

ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗಕ್ಕೆ ಸೇರಿದ ವಸತಿ ರಹಿತ ನಾಗರಿಕರಿಗೆ ತಮ್ಮದೇ ಆದ ಸ್ವಂತ ಮನೆಯನ್ನು ಕಟ್ಟಿಕೊಳ್ಳಲು 2015-16 ನೇ ಸಾಲಿನಲ್ಲಿ ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆಯನ್ನು ಜಾರಿಗೆ ತಂದಿದ್ದು ರಾಜೀವ್ ಗಾಂಧಿ ವಸತಿ ನಿಗಮದ (RGRHCL) ಮೂಲಕ ಈ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದೆ. ಈ ಯೋಜನೆಯಡಿ ನಗರ ಪ್ರದೇಶದ ಫಲಾನುಭವಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿ ಆರ್ಥಿಕ ನೆರವನ್ನು ಪಡೆಯುವುದರ ಜೊತೆಗೆ ಈ ಯೋಜನೆಯಡಿ ಸಹ ಹೆಚ್ಚುವರಿಯಾಗಿ 1.5 ಲಕ್ಷ ಆರ್ಥಿಕ ನೆರವನ್ನು ಪಡೆಯಬಹುದಾಗಿದೆ.

Dr B R Ambedkar Nivasi Yojane-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುತ್ತದೆ?

ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಗ್ರಾಮೀಣ ಪ್ರದೇಶದ ಫಲಾನುಭವಿಗಳಿಗೆ 1.75 ಲಕ್ಷ ರೂ ಮತ್ತು ಹಾಗೂ ನಗರ ವ್ಯಾಪ್ತಿಯ ಫಲಾನುಭವಿಗಳಿಗೆ ರೂ 2.00 ಲಕ್ಷ ಸಹಾಯಧನವನ್ನು ಒದಗಿಸಲಾಗುತ್ತಿದೆ. ಇದಲ್ಲದೇ ನಗರ ಪ್ರದೇಶದ ಫಲಾನುಭವಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿ ಆರ್ಥಿಕ ನೆರವನ್ನು ಪಡೆಯುವುದರ ಜೊತೆಗೆ ಈ ಯೋಜನೆಯಡಿ ಸಹ ಹೆಚ್ಚುವರಿಯಾಗಿ 1.5 ಲಕ್ಷ ಆರ್ಥಿಕ ನೆರವು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

Housing Subsidy Scheme Eligibility-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವನ್ನು ಪಡೆಯಲು ಈ ಕೆಳಗಿನ ಪಟ್ಟಿಯಲ್ಲಿರುವ ಅರ್ಹತಾ ಮಾನದಂಡಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ತಮ್ಮ ಹೆಸರಿಗೆ ಮನೆಯನ್ನು ಹೊಂದಿಲ್ಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಾಗರಿಕರು ಮಾತ್ರ ಅರ್ಜಿ ಸಲ್ಲಿಸಬಹುದು.

ವಾರ್ಷಿಕ ಆದಾಯವು ಕಡಿಮೆ ಇದ್ದು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಸಬಹುದು.

ಈ ಹಿಂದೆ ವಸತಿ ಯೋಜನೆಯಡಿ ಆರ್ಥಿಕ ನೆರವನ್ನು ಪಡೆದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಮನೆ ನಿರ್ಮಾಣಕ್ಕಾಗಿ ಖಾಲಿ ಜಾಗವನ್ನು ಹೊಂದಿರುವುದು ಕಡ್ಡಾಯ.

ಇದನ್ನೂ ಓದಿ: Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

How To Apply For Housing Subsidy Scheme-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಒಂದು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಎರಡನೇಯ ವಿಧಾನ ನಿಮ್ಮ ಗ್ರಾಮ ಪಂಚಾಯಿತಿ ಕಚೇರಿಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ಫಲಾನುಭವಿಗಳು ತಮ್ಮ ಮನೆಯಿಂದಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದಕ್ಕಾಗಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.

Step-1: ಅರ್ಜಿದಾರರು ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ.

ಇದನ್ನೂ ಓದಿ: KSRTC Ticket Booking-ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ಪಡೆಯುವುದು ಇನ್ನು ಭಾರೀ ಸುಲಭ!

Dr B R Ambedkar Nivasi Yojane Application

ಇದನ್ನೂ ಓದಿ: Azeem Premji Scholarship-ಅಜೀಂ ಪ್ರೇಮ್‌ಜಿ ವತಿಯಿಂದ 30,000 ವಿದ್ಯಾರ್ಥಿವೇತನ! ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Step-2: ಈ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಮತ್ತು ಗ್ರಾಮೀಣ/ನಗರ ಪ್ರದೇಶ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ನಂತರ ತಾಲ್ಲೂಕು/ಗ್ರಾಮ ಪಂಚಾಯಿತಿ/ಗ್ರಾಮ ಪೂರ್ಣ ವಿಳಾಸ ಮತ್ತು ಪಿನ್ ಸಂಖ್ಯೆಯನ್ನು ನಮೂದಿಸಿ "ಮುಂದುವರೆಸಿ" ಬಟನ್ ಮೇಲೆ ಕ್ಲಿಕ್ ಮಾಡಿ ಮುಂದಿನ ಪೇಜ್ ಭೇಟಿ ಮಾಡಿ.

Step-3: ಇದಾದ ಬಳಿಕ ಈ ಪೇಜ್ ನಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: PM Kisan Amount-ಪಿಎಂ ಕಿಸಾನ್ ಆರ್ಥಿಕ ನೆರವು ಏರಿಕೆ ನಿರೀಕ್ಷೆ!

Required Documents For Application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಲು ನಾಗರಿಕರು ಒದಗಿಸಬೇಕಾದ ಅಗತ್ಯ ದಾಖಲೆಗಳ ಪಟ್ಟಿ ಹೀಗಿದೆ:

ಆಧಾರ್ ಕಾರ್ಡ್/Aadhar
ರೇಶನ್ ಕಾರ್ಡ/BPL Card
ಜಾತಿ ಮತ್ತು ಆದಾಯ ಪ್ರಮಾಣ ಪತ್ರ/Caste And Income Certificate
ಮನೆ ನಿರ್ಮಾಣದ ಜಾಗದ ದಾಖಲೆಗಳು/Land Documenst
ಬ್ಯಾಂಕ್ ಪಾಸ್ ಬುಕ್ ಪ್ರತಿ/Bank Pass Book
ಪಾಸ್‌ಪೋರ್ಟ್ ಸೈಜ್ ಪೋಟೋ/Photo

Notification Copy-ಪ್ರಕಟಣೆ ಪ್ರತಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ- Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: