HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

February 5, 2024 | Siddesh

ಸಾರಿಗೆ ಇಲಾಖೆಯ ಹೊಸ ಮಾರ್ಗಸೂಚಿ ಪ್ರಕಾರ ಎಲ್ಲಾ ಬಗ್ಗೆಯ ವಾಹನ ಹೊಂದಿರುವ ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಕಡ್ಡಾಯವಾಗಿ HSRP(HIGH SECURITY REGISTRATION PLATE) ನಂಬರ್ ಪ್ಲೇಟ್(HSRP number plate booking) ಅಳವಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ.

ಸಾರಿಗೆ ಇಲಾಖೆಯ ನೂತನ ಆದೇಶ ಮತ್ತು ಮಾರ್ಗಸೂಚಿಯನ್ವಯ 17 ಫೆಬ್ರವರಿ 2024 ರ ಒಳಗಾಗಿ HSRP ನಂಬರ್ ಪ್ಲೇಟ್(number plate booking) ಅನ್ನು ತಮ್ಮ ವಾಹನಗಳಿಗೆ ಹಾಕಿಸಿಕೊಳ್ಳದಿದ್ದಲ್ಲಿ ಟ್ರಾಪಿಕ್ ಪೋಲಿಸರಿಂದ ದಂಡ ಹಾಕಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ರೀತಿಯ ನಂಬರ್ ಪ್ಲೇಟ್ ಗಳನ್ನು ಆನ್ಲೈನ್ ನಲ್ಲಿ ಮಾತ್ರ ಬುಕ್ ಮಾಡಿ ಅಥವಾ ಹತ್ತಿರದ ಶೋ ರೂಮ್ ಭೇಟಿ ಮಾಡಿ ಹಾಕಿಸಿಕೊಳ್ಳಬೇಕಿರುವುದರಿಂದ ಸಾರ್ವಜನಿಕರಿಗೆ ನೆರವಾಗುವ ದೇಸೆಯಲ್ಲಿ ಈ ಕೆಳಗೆ ತಮ್ಮ ಮೊಬೈಲ್ ನಲ್ಲೇ ಯಾವ ವಿಧಾನ ಅನುಸರಿಸಿ HSRP ನಂಬರ್ ಪ್ಲೇಟ್ ಬುಕ್ ಮಾಡಬಹುದು ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ration card- ಇಂದು ಮತ್ತು ನಾಳೆ ಈ ಜಿಲ್ಲೆಗಳಲ್ಲಿ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ!

HSRP number plate booking link-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

Step-1: ಸಾರ್ವಜನಿಕರು ಮೊದಲಿಗೆ ತಮ್ಮ ಮೊಬೈಲ್ ನಲ್ಲಿ ಈ ಎರಡು ಲಿಂಕ್ ನಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಅದರ ಮೇಲೆ ಕ್ಲಿಕ್ ಮಾಡಿ https://transport.karnataka.gov.in ಅಥವಾ www.siam.in  ಅಧಿಕೃತ ವೆಬ್ಸೈಟ್ ಭೇಟಿ ಮಾಡಿ "Book HSRP" ಎಂದು ತೋರಿಸುವ ಬಟನ್ ಅನ್ನು ಕ್ಲಿಕ್ ಮಾಡಬೇಕು.

Step-2: ತದನಂತರ ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿಕೊಳ್ಳಬೇಕು. 

Step-3: ಇದಾದ ಬಳಿಕ ಮೂರನೆ ಹಂತದಲ್ಲಿ ವಾಹನದ ಮೂಲ ವಿವರಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.

ಇದನ್ನೂ ಓದಿ: Parihara grants- ಈ ಜಿಲ್ಲೆಗಳಲ್ಲಿ ಮೊದಲ ಕಂತಿನ ಬರ ಪರಿಹಾರ ರೈತರ ಖಾತೆಗೆ ಬಿಡುಗಡೆ!

Step-4: ನಂತರ ನಿಮ್ಮ ವಾಹನಕ್ಕೆ  HSRP ನಂಬರ್ ಪ್ಲೇಟ್ ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮ ಹತ್ತಿರದ ವಾಹನದ ಡೀಲರ್ ಸ್ಥಳವನ್ನು ಆಯ್ಕೆ ಮಾಡಿಕೊಂಡು ಮುಂದುವರೆಯಬೇಕು.

Step-5: ಇಲ್ಲಿ HSRP ನಂಬರ್ ಪ್ಲೇಟ್ ಗೆ  ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. 

Step-6: ಈ ಹಂತ ಮುಗಿಸಿದ ಬಳಿಕ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ಬರುತ್ತದೆ ಅದನ್ನು ನಮೂದಿಸಿ ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಪ್ಲೇಟ್ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!ಪರಿಹಾರ

ಎಲ್ಲಾ ಹಂತಗಳನ್ನು ಮುಗಿಸಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ನೀವು ಆಯ್ಕೆ ಮಾಡಿದ ಸ್ಥಳಕ್ಕೆ ಭೇಟಿ ಮಾಡಿ ನಿಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅನ್ನು ಹಾಕಿಸಿಕೊಳ್ಳಬೇಕು.

HSRP number plate booking helpline- ನಂಬರ್ ಪ್ಲೇಟ್ ಬುಕಿಂಗ್ ಕುರಿತು ಯಾವುದೇ ಬಗ್ಗೆ ತಾಂತ್ರಿಕ ಸಹಾಯಕ್ಕೆ 9449863429 ಮತ್ತು 9449863426 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: