Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

December 3, 2025 | Siddesh
Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!
Share Now:

ರಾಜ್ಯ ಸರಕಾರದಿಂದ ರೇಶನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ಹೆಚ್ಚುವರಿಯಾಗಿ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ(Indira Kit Distribution) ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ ಈ ನಿಟ್ಟಿನಲ್ಲಿ ಅಕ್ಕಿಯ ಬದಲು ಪ್ರತಿ ತಿಂಗಳು ವಿತರಣೆ ಮಾಡುತ್ತಿರುವ ಪಡಿತರದ ಜೊತೆಗೆ ಇಂದಿರಾ ಕಿಟ್(Indira Kit)ಅನ್ನು ವಿತರಿಸಲು ರಾಜ್ಯ ಸರಕಾರ ಅಧಿಕೃತ ಸಭೆಯನ್ನು ನಡೆಸಿ ಮಾರ್ಗಸೂಚಿಯನ್ನು ರೂಪಿಸಲಾಗಿದೆ.

ಇದನ್ನೂ ಓದಿ: Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಇಂದಿನ ಅಂಕಣದಲ್ಲಿ ರಾಜ್ಯ ಸರಕಾರದಿಂದ ಇಂದಿರಾ ಕಿಟ್ ಅನ್ನು ವಿತರಣೆ(Karnataka Food Department) ಮಾಡಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ? ಅಧಿಕೃತವಾಗಿ ಪ್ರಕಟಿಸಿರುವ ಮಾರ್ಗಸೂಚಿಗಳೇನು? ಇಂದಿರಾ ಕಿಟ್ ವಿತರಣೆಗೆ ಎಷ್ಟು ಅನುದಾನ ಅವಶ್ಯವಿದೆ? ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್ ಹೇಗೆ ಕಾರ್ಯನಿರ್ವಹಿಸುತ್ತದೆ? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Indira Kit Distribution In Karnataka-ಯೋಜನೆ ಅನುಷ್ಠಾನ ಕುರಿತಾಗಿ ನಡೆಸಿದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ:

ರಾಜ್ಯ ಸರಕಾರದಿಂದ ನೂತನವಾಗಿ ಜಾರಿಗೆ ತಂದಿರುವ ಇಂದಿರಾ ಕಿಟ್ ವಿತರಣೆ ಯೋಜನೆ ಅನುಷ್ಥಾನಕ್ಕೆ ಸಂಬಂಧಿಸಿದಂತೆ ದಿನಾಂಕ: 01 ಡಿಸೆಂಬರ್ 2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆಯ ವಿಚಾರಗಳ ಕುರಿತು ಇಂದಿರಾ ಆಹಾರ ಕಿಟ್ ಯೋಜನೆಯ ಅನುಷ್ಠಾನ ಕುರಿತು ಸಭೆ ನಡೆಸಿದರು.

ಸಭೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ (Integrated nutrition and dietary initiative for revitalizing annabhagya benefeciaries) ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು,ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲು ಕ್ರಮ ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಿದರು.

ಇದನ್ನೂ ಓದಿ: Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

ಜೊತೆಗೆ ಆಹಾರ ಕಿಟ್‍ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಠ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಹಾಗೂ ನಾಫೆಡ್ / ಎನ್.ಸಿ.ಎಫ್. ನಂತಹ ಕೇಂದ್ರ ಸರಬರಾಜು ಸಂಸ್ಥೆಗಳ ಮೂಲಕ ಅಥವಾ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತಿಳಿಸಿದರು.

Indira Kit Scheme-ಇಂದಿರಾ ಕಿಟ್ ವಿತರಣೆ ಅಂಕಿ-ಅಂಶ:

ರಾಜ್ಯ ಸರಕಾರದಿಂದ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಆಹಾರ ಧಾನ್ಯದ ಕಿಟ್ ಅನ್ನು ವಿತರಣೆ ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು ಇದಕ್ಕಾಗಿ ಅವಶ್ಯವಿರುವ ಅನುದಾನದ ವಿವರ ಈ ಕೆಳಗಿನಂತಿದೆ:

1) ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದೆ.
2) ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ಅನುದಾನ ಅವಶ್ಯವಿದೆ.
3) ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ
4) ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Indira Kit

ಇದನ್ನೂ ಓದಿ: Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

Indira Kit QR Code-ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್ ಸ್ಕ್ಯಾನ್:

ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗಬಾರದು. ಇದೇ ರೀತಿ ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು. ಅತ್ಯುತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಇದನ್ನೂ ಓದಿ: Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

Indira Kit-ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕು ಒಳಗಾಗಿ ವಿತರಣೆಗೆ ಸೂಚನೆ:

ಸರಬರಾಜಾದ ಫುಡ್ ಕಿಟ್ ಗಳನ್ನು ನಿಗಮದ ಗೋದಾಮು/ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕು ಒಳಗಾಗಿ ವಿತರಣೆ ಮಾಡಬೇಕು ಎಂದು ಸೂಚಿಸಿದರು. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: