Insurance Scholarship-TATA AIA ಲೈಫ್ ಇನ್ಶುರೆನ್ಸ್ ವತಿಯಿಂದ 15,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

December 10, 2025 | Siddesh
Insurance Scholarship-TATA AIA ಲೈಫ್ ಇನ್ಶುರೆನ್ಸ್ ವತಿಯಿಂದ 15,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!
Share Now:

TATA AIA ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌ನ ವತಿಯಿಂದ(TATA AIA scholarship) 2025-2026 ನೇ ಸಾಲಿನ TATA AIA ಪ್ಯಾರಾಸ್ ವಿದ್ಯಾರ್ಥಿವೇತನದ ಅಡಿಯಲ್ಲಿ ಪದವಿಪೂರ್ವ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ಟ್ರಾನ್ಸ್‌ಜೆಂಡರ್ ವಿದ್ಯಾರ್ಥಿಗಳು, ಅಂಗವಿಕಲರು, ಮಹಿಳೆಯರು ಮತ್ತು SC /ST ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಸಹಾಯ(insurance scholarship program) ಮಾಡಲು ವರ್ಷಕ್ಕೆ 15,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Old RTC And Mutation-ಮೊಬೈಲ್ ನಲ್ಲೇ ಹಳೆಯ ಪಹಣಿ ಮ್ಯುಟೇಷನ್ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಇಲ್ಲಿ ಯಾರೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿಗೆ ಸಂಭದಿಸಿದ ದಾಖಲಾಗಳಾವುವು? ಅರ್ಜಿಯನ್ನು ಯಾವೆಲ್ಲ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವುದು? ಇದರ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Who Can Apply-ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರಿರುತ್ತಾರೆ?

ಅರ್ಜಿದಾರ ವಿದ್ಯಾರ್ಥಿಗಳು ಖಾಯಂ ಭಾರತದ ನಿವಾಸಿಯಾಗಿರಬೇಕು.

ಅಭ್ಯರ್ಥಿಯು ವಾಣಿಜ್ಯ, ಅರ್ಥಶಾಸ್ತ್ರ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು, ಬ್ಯಾಂಕಿಂಗ್, ವಿಮೆ, ನಿರ್ವಹಣೆ, ಡೇಟಾ ಸೈನ್ಸ್, ಅಂಕಿಅಂಶಗಳು, ಅಪಾಯ ನಿರ್ವಹಣೆ, ಬಿ.ಕಾಂ, ಬಿ.ಎಸ್ಸಿ., ಬಿಬಿಎ, ಬಿಬಿಐ, ಬಿಎ, ಇತ್ಯಾದಿ ವೃತ್ತಿಪರ ಕ್ಷೇತ್ರಗಳಲ್ಲಿ ಪದವಿಪೂರ್ವ ಕಾರ್ಯಕ್ರಮಕ್ಕೆ ದಾಖಲಾಗಿರಬೇಕು.

ಟ್ರಾನ್ಸ್ಜೆಂಡರ್ ವಿದ್ಯಾರ್ಥಿಗಳು, ಅಂಗವಿಕಲ ವ್ಯಕ್ತಿಗಳು, ಮಹಿಳೆಯರು ಮತ್ತು ಎಸ್ಸಿ/ಎಸ್ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.

ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 5,00,000 ಮೀರಿರಬಾರದು.

ಬಡ್ಡಿ4ಸ್ಟಡಿ ಮತ್ತು ಟಾಟಾ ಎಐಎ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Maize MSP-ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಗೆ ಹೆಚ್ಚಳ! ಕ್ವಿಂಟಾಲ್ ಗೆ 2,400/- ರೂ ನಿಗದಿ!

Last date to apply-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಡಿಸೆಂಬರ್ 2025

Scholorship Amount-ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು?

TATA AIA ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌ನ ಅಡಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ 15,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.

ಇದನ್ನೂ ಓದಿ: Shrama Shakti Yojana-ಶ್ರಮ ಶಕ್ತಿ ಯೋಜನೆಯಡಿ ₹50,000 ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ!

Documents Required-ಅರ್ಜಿಗೆ ಸಂಭದಿಸಿದ ದಾಖಲಾತಿಗಳಾವುವು?

ಆಧಾರ್ ಕಾರ್ಡ/Aadhar Card

10 ಮತ್ತು 12 ನೇ ತರಗತಿಯ ಅಂಕಪಟ್ಟಿ/Marks Card

ಆದಾಯ ಪ್ರಮಾಣ ಪತ್ರ/Income Certificate

ಬ್ಯಾಂಕ್ ಪಾಸ್ ಪುಸ್ತಕ/Bank Passbook

ಜಾತಿ ಪ್ರಮಾಣಪತ್ರ/Caste Certificate

ಶಾಲಾ/ಕಾಲೇಜು ಶುಲ್ಕ ರಶೀದಿ/Fees Receipt

ಫೋಟೊ/Photocopy

ಇದನ್ನೂ ಓದಿ: Mahindra Sarathi Scholarship-ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

ಇದನ್ನೂ ಓದಿ: Kotak Scholarship-ಕೋಟಕ್ ಕನ್ಯಾ ಸ್ಕಾಲರ್‌ಶಿಪ್ ₹1.5 ಲಕ್ಷ ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

How To Apply-ಅರ್ಜಿ ಸಲ್ಲಿಸುವ ವಿಧಾನಗಳಾವುವು?

TATA AIA ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌ನ ವತಿಯಿಂದ TATA AIA ಪ್ಯಾರಾಸ್ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿ ಸಲ್ಲಿಸಲು ಅರ್ಹವಿರುವ ವಿದ್ಯಾರ್ಥಿಗಳು ಮೊದಲಿಗೆ ಈ ಲಿಂಕ್ "TATA AIA Life Insurance"ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ಅಧಿಕೃತ ವೆಬ್ಸೈಟ್ ಭೇಟಿ ಮಾಡಿದ ನಂತರ ಇಲ್ಲಿ”Apply Now” ಬಟನ್ ಮೇಲೆ ಕ್ಲಿಕ್ ಮಾಡಿ, ಮೊದಲ ಬಾರಿಗೆ ಈ ವೆಬ್ಸೈತ್ ಗೆ ಭೇಟಿ ಮಾಡುತ್ತಿರುವ ವಿದ್ಯಾರ್ಥಿಗಳು “Create an Account” ಬಟನ್ ಮೇಲೆ ಕ್ಲಿಕ್ ಮಾಡಿ ಹೊಸ ಖಾತೆಯನ್ನು ರಚಿಸಿಕೊಳ್ಳಬೇಕು. ನಂತರ “Login” ಬಟನ್ ಕ್ಲಿಕ್ ಮಾಡಿ ಲಾಗಿನ್ ಗೆ ಸಂಬಂದಿಸಿದ ಅಗತ್ಯ ವಿವರವನ್ನು ಹಾಕಿ ಲಾಗಿನ್ ಅಗಬೇಕು.

Step-3: “Login” ಆದ ಬಳಿಕ ಅರ್ಜಿ ನಮೂನೆ ಒಪನ್ ಅಗುತ್ತದೆ. ಇಲ್ಲಿ ಕೇಳುವ ಎಲ್ಲಾ ಅಗತ್ಯ ಮಾಹಿತಿಯನ್ನು ಹಾಕಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

For More Information-ಹೆಚ್ಚಿನ ಸಂಪೂರ್ಣ ಉಪಯುಕ್ತ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: Click Here

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: