HomeNewsITBP Constable Recruitment 2024 - 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

ITBP Constable Recruitment 2024 – 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹಲವು ಕಾನ್ಸ್ಟೇಬಲ್ ಹುದ್ದೆಗಳು(ITBP Constable Recruitment) ಖಾಲಿ ಇದ್ದು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.

ITBP Constable Recruitment 2024 – ಈ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಹುದ್ದೆಗಳಾಗಿವೆ. ಸದ್ಯಕ್ಕೆ ತಾತ್ಕಾಲಿಕ ಅವಧಿಗಾಗಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವವರು ಸಂಪೂರ್ಣ ಮಾಹಿತಿ ತಿಳಿದು ನಂತರ ಅರ್ಜಿ ಸಲ್ಲಿಸಿರಿ.

ಇದನ್ನೂ ಓದಿ: Sukanya Samriddhi Yojana-2024: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ತಪ್ಪದೇ ಈ ಕೆಲಸ ಮಾಡಿ!

Eligibility criteria- ಅರ್ಹತೆಗಳು :

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಕನಿಷ್ಠ ವಯೋಮಿತಿಯು 21 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ನೋಡುವುದಾದರೆ ಅಭ್ಯರ್ಥಿಗಳು 27 ವರ್ಷದ ಒಳಗಿರಬೇಕು.

ಇದನ್ನೂ ಓದಿ: RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Monthly salary-ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ :

ಕೇಂದ್ರ ಸರ್ಕಾರಿ ವೇತನ ನಿಯಮದ ಅನುಸಾರ ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು ₹21,700 ರಿಂದ ₹69,100 ರವರೆಗೆ ಇರಲಿದೆ.

Application fee-ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಇವರನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ:  PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

Notification details-ನೇಮಕಾತಿಯ ಪ್ರಮುಖ ದಿನಾಂಕಗಳು –

ಅರ್ಜಿ ನೋಂದಣಿ ಆರಂಭವಾಗುವ ದಿನಾಂಕ – 08 ಅಕ್ಟೋಬರ್ 2024
ಅರ್ಜಿ ನೊಂದಣಿ ಮುಕ್ತಾಯಗೊಳ್ಳುವ ದಿನಾಂಕ – 06 ನವೆಂಬರ್ 2024

ಪ್ರಮುಖ ಲಿಂಕುಗಳು –

ಅಧಿಕೃತ ಜಾಲತಾಣ – recruitment.itbpolice.nic.in

Most Popular

Latest Articles

Related Articles