ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

August 30, 2024 | Siddesh

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ(ITBP Recruitment-2024) ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆ ಪ್ರಕಟಿಸಿದೆ. ಕಿಚನ್ ಸರ್ವಿಸ್ ವಿಭಾಗದಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಮಹಿಳೆಯರಿಗೂ ಕೂಡ ಇದರಲ್ಲಿ ವಿಶೇಷ ಮೀಸಲಾತಿ ನೀಡಲಾಗಿದೆ.

ITBP Recruitment-ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವಂತಹ ಅರ್ಹತೆಗಳೇನು? ಅರ್ಜಿ ಸಲ್ಲಿಸಲು ಬೇಕಾಗಿರುವ ಇತರೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ITBP Recruitment Details-ನೇಮಕಾತಿ ಹುದ್ದೆಗಳ ವಿವರ : 

ಈ ಒಂದು ನೇಮಕಾತಿಯಲ್ಲಿ ಒಟ್ಟು 819 ಕಾನ್ಸ್ಟೇಬಲ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಿಚನ್ ಸರ್ವಿಸ್ ( Kitchen Service Department ) ವಿಭಾಗದಲ್ಲಿ ಹುದ್ದೆಗಳು ಖಾಲಿ ಇದ್ದು, ಒಟ್ಟು ಹುದ್ದೆಗಳಲ್ಲಿ 122 ಹುದ್ದೆಗಳನ್ನು ಮಹಿಳೆಯರಿಗಾಗಿ ಮೀಸಲಿಡಲಾಗಿದೆ.

ಇದನ್ನೂ ಓದಿ: Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Education Qualification-ಶೈಕ್ಷಣಿಕ ಅರ್ಹತೆಗಳ ವಿವರಗಳು : 

ಕಿಚನ್ ಸರ್ವಿಸ್ ವಿಭಾಗದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸ್ ಆಗಿ ಅದರ ಜೊತೆಗೆ ಫುಡ್ ಪ್ರೋಡಕ್ಷನ್ ಅಥವಾ ಅಡುಗೆಗೆ ಸಂಬಂಧಿಸಿದಂತೆ ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ವತಿಯಿಂದ ಕೋರ್ಸ್ ಪಡೆದು ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ: free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Age limit-ವಯೋಮಿತಿ ಅರ್ಹತೆಗಳು : 

 ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18ರಿಂದ 25 ವರ್ಷದ ವಯೋಮಿತಿಯಲ್ಲಿದ್ದವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ಅಭ್ಯರ್ಥಿಗಳು ಮೀಸಲಾತಿ ವ್ಯಾಪ್ತಿಯಲ್ಲಿ ಬರುವುದಾದರೆ ಅಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ  ಸಡಿಲಿಕೆ ನೀಡಲಾಗುವುದು.

Application fee-ಅರ್ಜಿ ಶುಲ್ಕ ವಿವರ  : 

• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಇನ್ನುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು ಆನ್ಲೈನ್ ಮೂಲಕ 100ರೂಪಾಯಿ ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Zilla Panchayat Recruitment 2024: ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ನೇಮಕಾತಿ!

Selection process ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?

 ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಮೊದಲು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಅದರಲ್ಲಿ ಅರ್ಹರಾಗುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕಾತಿ  ಮಾಡಿಕೊಳ್ಳಲಾಗುವುದು.

Important dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು: 

• ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗುವ ದಿನಾಂಕ - 02ನೇ ಸೆಪ್ಟೆಂಬರ್ 2024
• ಆನ್ಲೈನ್ ಅರ್ಜಿ ಸಲ್ಲಿಕೆ ಮುಕ್ತಾಯಗೊಳ್ಳುವ ದಿನಾಂಕ - 01ನೇ ಅಕ್ಟೋಬರ್ 2024

website links-ನೇಮಕಾತಿಯ ಪ್ರಮುಖ ಲಿಂಕುಗಳು : 

• ಅಧಿಕೃತ ಜಾಲತಾಣ - Click here

• ಅಧಿಸೂಚನೆ - Download Now

ಇದನ್ನೂ ಓದಿ:  Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: