JK Tyre Scholarship-ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ 25,000 ವಿದ್ಯಾರ್ಥಿವೇತನಕ್ಕೆ ಅರ್ಜಿ!

January 17, 2026 | Siddesh
JK Tyre Scholarship-ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ 25,000 ವಿದ್ಯಾರ್ಥಿವೇತನಕ್ಕೆ ಅರ್ಜಿ!
Share Now:

2025-2026 ನೇ ಸಾಲಿನ ಜೆಕೆ ಟೈರ್(JK Tyre Scholarship) & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ JK ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಸಾಮಾನ್ಯ ಅಥವಾ ವೃತ್ತಿಪರ ಕ್ಷೇತ್ರಗಳಲ್ಲಿ ಪದವಿಪೂರ್ವ ಅಥವಾ ಡಿಪ್ಲೊಮಾ ಕೋರ್ಸ್‌ಗಳನ್ನು ಅನುಸರಿಸುತ್ತಿರುವ HMV ಚಾಲಕರ ಹೆಣ್ಣುಮಕ್ಕಳಿಗೆ 25,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ವಿದ್ಯಾರ್ಥಿವೇತವು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ(JK Tyre CSR Scholarship) ಮಕ್ಕಳ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಆಧಾರವಾಗಿದೆ ಹಾಗೆಯೇ ಓದಿಗೆ ಬೇಕಾದ ವೆಚ್ಚಗಳನ್ನು ಕಡಿಮೆ ಮಾಡಿ, ಉತ್ತಮ ಶಿಕ್ಷಣ ಪಡೆಯಲು ಮತ್ತು ಭವಿಷ್ಯವನ್ನು ಕಟ್ಟಿಕೊಳ್ಳಲು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವು ಬೆಂಬಲವನ್ನು ನೀಡುತ್ತದೆ.

ಇದನ್ನೂ ಓದಿ: Vasati Yojane-ರಾಜೀವ ಗಾಂಧಿ ವಸತಿ ನಿಗಮದಿಂದ ಕೇವಲ 9.7 ಲಕ್ಷಕ್ಕೆ 1BHK ಫ್ಲಾಟ್ ಪಡೆಯಲು ಅರ್ಜಿ ಆಹ್ವಾನ!

ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳಾವುವು? ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಯಾವುದು? ಇದರ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Scholorship Amount-ಈ ಯೋಜನೆಯ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನ ಪಡೆಯಬಹುದು?

JK ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ

1) ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳು: 25,000 ರೂ
2) ಸಾಮಾನ್ಯ ಪದವಿಪೂರ್ವ ಕೋರ್ಸ್‌ಗಳು: 15,000 ರೂ
3) ಡಿಪ್ಲೊಮಾ ಕೋರ್ಸ್‌ಗಳು: 15,000 ರೂ

ಇದನ್ನೂ ಓದಿ: Vermicompost subsidy-ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣಕ್ಕೆ 20,000 ಸಹಾಯಧನ!

Last Date for application-ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 22 ಜನವರಿ 2026

Eligibility Critiria for scholorship-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ‍ ವಿದ್ಯಾರ್ಥಿನಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು HMV ಚಾಲಕರ ಹೆಣ್ಣುಮಕ್ಕಳಾಗಿರಬೇಕು.

ಸಾಮಾನ್ಯ ಅಥವಾ ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳು ಅಥವಾ ಡಿಪ್ಲೊಮಾ ಕೋರ್ಸ್‌ಗಳಲ್ಲಿ ದಾಖಲಾಗಿರುವ ಮಹಿಳಾ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ₹5,00,000 ಮೀರಿರಬಾರದು.

ಜೆಕೆ ಟೈರ್ ಮತ್ತು ಬಡ್ಡಿ4ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Housing Subsidy-ಡಾ. ಬಿ.ಆರ್ ಅಬೇಡ್ಕರ್ ನಿವಾಸ ಯೋಜನೆ ಸ್ವಂತ ಮನೆ ನಿರ್ಮಾಣಕ್ಕೆ ರೂ 2.0 ಲಕ್ಷ ಸಹಾಯಧನ!

What are the documents required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

  • ವಿದ್ಯಾರ್ಥಿನಿಯ ಆಧಾರ್ ಕಾರ್ಡ
  • ಹಿಂದಿನ ವರ್ಷದ ಅಂಕಪಟ್ಟಿ
  • ಶೈಕ್ಷಣಿಕ ವರ್ಷದ ಶುಲ್ಕಗಳು
  • 10 ನೇ ಮತ್ತು 12 ನೇ ತರಗತಿಯ ಅಂಕಪಟ್ಟಿ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಪುಸ್ತಕ
  • ಶ್ರಮಿಕ ಕಾರ್ಡ
  • ಫೋಟೊ
  • ಮೊಬೈಲ್ ನಂಬರ್

ಇದನ್ನೂ ಓದಿ: Myntra Scholarship-ಮೈಂತ್ರಾ ಕಂಪನಿಯಿಂದ ರೂ 60,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

jk tyre scholorship

ಇದನ್ನೂ ಓದಿ: Bembala Bele-ಬೆಂಬಲ ಬೆಲೆ ಯೋಜನೆಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ!

Online Application Process-ಆನ್ಲೈನ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬಹುದು?

JK ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಅಡಿಯಲ್ಲಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್‌ನ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಅರ್ಜಿದಾರ‍ ವಿದ್ಯಾರ್ಥ್ನಿಯು ಮೊದಲು ಈ ಲಿಂಕ್ ಮೇಲೆ ಕ್ಲಿಕ್ "Online Application" ಮಾಡಿ ಅಧಿಕೃತ ವಿದ್ಯಾರ್ಥಿವೇತನದ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ನಂತರ ಈ ಪುಟದಲ್ಲಿ ಕಾಣುವ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ. “Create an Account” ಬಟನ್ ಮೇಲೆ ಪ್ರೆಸ್ ಮಾಡಿ ಅಗತ್ಯ ವಿವರವನ್ನು ಭರ್ತಿ ಮಾಡಿ ಹೊಸ ಖಾತೆಯನ್ನು ರಿಜಿಸ್ಟರ್ ಮಾಡಿಕೊಳ್ಳಬೇಕು.

Step-3: ತದನಂತರ “Login” ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಅರ್ಜಿ ನಮೂನೆ ಓಪನ್ ಆಗುತ್ತದೆ.

Step-4: ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ಬೇಕಾದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ “Submit” ಬಟನ್ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಸಕೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: Drone Pilot Training-ಇಲ್ಲಿದೆ ಡ್ರೋನ್ ಪೈಲಟ್ ಆಗುವ ಸುವರ್ಣಾವಕಾಶ! ಇಂದೇ ಅರ್ಜಿ ಸಲ್ಲಿಸಿ!

More enquiry for Scholorsip-ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: Read More

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: