HomeMost PopularMoneyFree job training- PSI ಹಾಗೂ ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ಉಚಿತ ತರಬೇತಿಗೆ ಅರ್ಜಿ...

Free job training- PSI ಹಾಗೂ ಪ್ಯಾರಾ ಮಿಲಿಟರಿ ಪೂರ್ವ ನೇಮಕಾತಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ!

2024-25 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಪ್ಯಾರಾ ಮೆಲಿಟರಿ ಪೂರ್ವ ನೇಮಕಾತಿ(Free PSI Pre – Recruitment Training ) ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

75 ದಿನಗಳ ಕಾಲ ವಸತಿಯುತ ಉಚಿತ ತರಬೇತಿಯನ್ನು ಕರ್ನಾಟಕ ರಾಜ್ಯದ ನಾಲ್ಕು ಕಂದಾಯ ಉಪಯೋಗಗಳಲ್ಲಿ ಪ್ರತ್ಯೇಕವಾಗಿ ತರಬೇತಿಯನ್ನು ನೀಡಲಾಗುವುದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಹಾಗೂ ಅವಶ್ಯಕ ದಿನಾಂಕಗಳ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಇದನ್ನೂ ಓದಿ: Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Free PSI Pre – Recruitment Training 2024-25  ಅರ್ಹತೆಗಳು : 

• ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ವರ್ಗಕ್ಕೆ (SC) ಸೇರಿರಬೇಕು.
• ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಟ 32 ವರ್ಷ.
• ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

• ಅರ್ಜಿ ಸಲ್ಲಿಸುವ ಪುರುಷರ ಕನಿಷ್ಠ ಎತ್ತರ 163cm ಹಾಗೂ ಮಹಿಳೆಯರ ಏತ್ತರ 153cm ಇರಬೇಕು.
• ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಯ ಕನಿಷ್ಠ ತೂಕ 50ಕೆ.ಜಿ ಹಾಗೂ ಮಹಿಳಾ ಅಭ್ಯರ್ಥಿಯ ಕನಿಷ್ಠ ತೂಕ 45 ಕೆ.ಜಿ ಕಡ್ಡಾಯ.

Selection procces-ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಪದವಿ ಶಿಕ್ಷಣದಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!

Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಆಗಸ್ಟ್ 2024

How to apply- ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ “Apply now” ಬಟನ್ ಮೇಲೆ ಒತ್ತಿ, ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದು.

How to apply on mobile-ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ:

ಪರೀಕ್ಷಾ ತರಬೇತಿ ಕೇಂದ್ರದ ಅಧಿಕೃತ ವೆಬ್ಸೈಟ್ ಅನ್ನು ಈ ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಭೇಟಿ ಮಾಡಿ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಬೇಕು.

Step-1: ಮೊದಲಿಗೆ ಈ Apply now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ “ಅರ್ಜಿ ಸಲ್ಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿ “ENTER YOUR AADHAR NUMBER” “ENTER YOUR NAME AS IN AADHAR” “Enter Text Displayed in the Captcha” ಈ ಮೂರು ಆಯ್ಕೆಗಳನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ “PROCEED” ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

ಇದನ್ನೂ ಓದಿ: Anganwadi job application-ಈ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

Step-3: ಮೇಲಿನ ವಿಧಾನ ಅನುಸರಿಸಿ ಲಾಗಿನ್ ಅದ ಬಳಿಕ ಈ ಪುಟದಲ್ಲ ಅರ್ಜಿದಾರರ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ.

Online application link-ಪ್ರಮುಖ ಲಿಂಕ್ ಗಳು : 

application link-ಅರ್ಜಿ ಲಿಂಕ್ – Apply now 
order copy-ಅಧಿಸೂಚನೆ –  Donwload Now
helpline-ಸಹಾಯವಾಣಿ ಸಂಖ್ಯೆ: 080-22207784 / 9480843235

Most Popular

Latest Articles

Related Articles