Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

January 25, 2025 | Siddesh
Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!
Share Now:

ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಉತ್ಪನ್ನವನ್ನು ಖರೀದಿ(Kadale MSP) ಮಾಡಲು ಕೃಷಿ ಉತ್ಪನ್ನ ಮಾರಾಟ ಇಲಾಖೆಯಿಂದ ಒಂದು ವಾರದ ಒಳಗಾಗಿ ನೋಂದಣಿಯನ್ನು ಆರಂಭಿಸಲಾಗುವುದು ಎಂದು ಇಲಾಖೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಮಾಹಿತಿ ತಿಳಿಸಿದ್ದಾರೆ.

ಆಹಾರ ಉತ್ಪನ್ನಗಳಿಗೆ ಪ್ರತಿ ವರ್ಷವು ಸಹ ಕೇಂದ್ರ ಸರಕಾರದಿಂದ ಬೆಂಬಲ ಬೆಲೆಯನ್ನು(Peanut MSP) ನಿಗದಿಪಡಿಸಿಲಾಗುತ್ತದೆ ಇದರಂತೆ ಈ ವರ್ಷವು ಸಹ ಬೆಂಬಲ ಬೆಲೆಯಲ್ಲಿ ಕಡಲೆಕಾಳುಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು ನೋಂದಣಿಯನ್ನು ಮಾಡಿಕೊಳ್ಳುವ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ.

ಇದನ್ನೂ ಓದಿ: Gruhalakshmi Amount-ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

ಬೆಂಬಲ ಬೆಲೆಯಲ್ಲಿ ಯಾವೆಲ್ಲ ಜಿಲ್ಲೆಗಳಲ್ಲಿ ಕಡಲೆಕಾಳುಗಳನ್ನು ಖರೀದಿ ಮಾಡಲಾಗುತ್ತದೆ? ಬೆಂಬಲ ಬೆಲೆಯಲ್ಲಿ ಕಡಲೆಕಾಳುಗಳನ್ನು ಮಾರಾಟ ಮಾಡಲು ಅನುಸರಿಸಬೇಕಾದ ಕ್ರಮಗಳಾವುವು? ನೋಂದಣಿ ಮಾಡಿಕೊಳ್ಳುವುದು ಹೇಗೆ? ಅಗತ್ಯ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

Kadale MSP Price-ಕೇಂದ್ರದಿಂದ ನಿಗದಿಪಡಿಸಿ ಬೆಂಬಲ ಬೆಲೆ:

ಬೆಂಬಲ ಬೆಲೆಯಲ್ಲಿ ಕಡಲೆಕಾಳುಗಳನ್ನು ಖರೀದಿ ಮಾಡಲು ರಾಜ್ಯ ಸರಕಾರದ ಮನವಿಗೆ ಕೇಂದ್ರವು ಅನುಮತಿಯನ್ನು ನೀಡಿದೆ ಎಂದು ಕೃಷಿ ಉತ್ಪನ್ನ ಮಾರಾಟ ಇಲಾಖೆಯ ಸಚಿವಾರದ ಶಿವಾನಂದ ಎಸ್. ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು, ಪ್ರತಿ ಕ್ವಿಂಟಾಲ್ ಕಡಲೆಕಾಳಿಗೆ ₹5,650 ರೂ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ ಎಂದು ತಿಳಿಸಿದ್ದಾರೆ.

Kadale Kharidi Kendra-ಯಾವೆಲ್ಲ ಜಿಲ್ಲೆಗಳಲ್ಲಿ ಖರೀದಿ ಮಾಡಲಾಗುತ್ತದೆ?

ಧಾರವಾಡ, ಗದಗ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಗಳನ್ನು ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

kadale kharidi

Kadale Kharidi Date-ನೋಂದಣಿ ಯಾವಾಗಿನಿಂದ ಆರಂಭ:

ಕಡಲೆಕಾಳುಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಇನ್ನು ಒಂದು ವಾರದ ಒಳಗಾಗಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ಅವಕಾಶವನ್ನು ರೈತರಿಗೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಇಲಾಖೆಯ ಸಚಿವರು ಮಾಹಿತಿ ತಿಳಿಸಿದ್ದಾರೆ.

Peanut MSP Registration-ಮಾರಾಟ ಮಾಡಲು ನೋಂದಣಿಯನ್ನು ರೈತರು ಎಲ್ಲಿ ಮಾಡಬೇಕು?

ಕೇಂದ್ರ ಸರ್ಕಾರ ನಾಫೆಡ್ ಮತ್ತು ಎನ್‍ಸಿಸಿಎಫ್ ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಿ ಕಡಲೆಕಾಳು ಖರೀದಿ ಮಾಡಬೇಕಾದ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ. ರೈತರು ತಮ್ಮ ಸಮೀಪದ ಟಿ.ಎ.ಪಿ.ಸಿ.ಎಂ.ಎಸ್, ಎಫ್.ಪಿ.ಒ ಹಾಗೂ ಪಿ.ಎ.ಸಿ.ಎಸ್. ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.

ಇದನ್ನೂ ಓದಿ: Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

Documents-ನೋಂದಣಿಗೆ ಅಗತ್ಯ ದಾಖಲೆಗಳು:

1) ಅರ್ಜಿದಾರರ ರೈತರ ಆಧಾರ್ ಕಾರ್ಡ ಪ್ರತಿ.
2) ಬ್ಯಾಂಕ್ ಪಾಸ್ ಬುಕ್ ಪ್ರತಿ
3) FID ನಂಬರ್
4) ಜಮೀನಿನ ಪಹಣಿ/RTC

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: