Weather Update: ಕರ್ನಾಟಕ ಮಳೆ ಮುನ್ಸೂಚನೆ! ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭ.

Weather: ಕರ್ನಾಟಕ ಮಳೆ ಮಾಹಿತಿಯ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಅಗ್ರಗೋಣ ವ್ಯಾಪ್ತಿಯಲ್ಲಿ ಅತ್ಯಧಿಕ 153 ಮೀಲಿ ಮೀಟರ್ ಮಳೆ ದಾಖಲಾಗಿರುತ್ತದೆ.

Weather Update: ಕರ್ನಾಟಕ ಮಳೆ ಮುನ್ಸೂಚನೆ! ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭ.
Weather Update 2023

ಕರ್ನಾಟಕ ಮಳೆ ಮಾಹಿತಿಯ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಅಗ್ರಗೋಣ ವ್ಯಾಪ್ತಿಯಲ್ಲಿ ಅತ್ಯಧಿಕ 153 ಮೀಲಿ ಮೀಟರ್ ಮಳೆ ದಾಖಲಾಗಿರುತ್ತದೆ.

ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆ ದಾಖಲಾಗಿರುತ್ತದೆ.

Weather- ನಾಳೆ (28.09.2023) ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ:

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ ಹಾಗೂ ಉಡುಪಿಯ ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಇದನ್ನೂ ಓದಿ: Annabhagya September amount: ಅನ್ನಭಾಗ್ಯ ಯೋಜನೆ ಸೆಪ್ಟೆಂಬರ್ ತಿಂಗಳ ಹಣ ಬಿಡುಗಡೆ! ನಿಮ್ಮ ಖಾತೆಗೆ ಹಣ ಬಂದಿರುವುದನ್ನು ಚೆಕ್ ಮಾಡಿ.

ಚಿಕ್ಕಮಗಳೂರಿನ ಶಿೃಂಗೇರಿ, ಕೊಡಗಿನ ತಲಕಾವೇರಿ,  ಕುದುರೆಮುಖ, ಆಗುಂಬೆ ಸುತ್ತಮುತ್ತ, ಶಿವಮೊಗ್ಗದ ಶಿವಮೊಗ್ಗ, ಭದ್ರಾವತಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ಬಳ್ಳಾರಿ, ಗದಗ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ,  ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇರುತ್ತದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

Weather forecast- ಮುಂಗಾರು ಮಾರುತಗಳ ಮಾಹಿತಿ:

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಒಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಸಾಧ್ಯತೆ ಇದೆ. ಹಿಂಗಾರು ಸಾಮಾನ್ಯವಾಗಿರುವ ವರದಿಗಳು ಬರುತ್ತಿವೆ.

ರಾಜ್ಯದಾದ್ಯಂತ ಮುಂದಿನ 1 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆ:  

ಈ ನಕ್ಷೆಯಲ್ಲಿ ಕೆಂಪು ಮತ್ತು ಹಳದಿ ಬಣ್ಣದಿಂದ ಗುರುತಿಸಿದ ಜಿಲ್ಲೆಗಳಲ್ಲಿ ಅಧಿಕ ಮಳೆ ಮುನ್ಸೂಚನೆ ನೀಡಲಾಗಿದೆ, ಹಸಿರು ಮತ್ತು ನೀಲಿ ಬಣ್ಣದಿಂದ ಗುರುತಿಸಿದ ಪ್ರದೇಶದಲ್ಲಿ ಮಧ್ಯಮದಿಂದ ಸಾಮಾನ್ಯ ಮಳೆ ಮುನ್ಸೂಚನೆ ನೀಡಲಾಗಿದೆ.

ಕೃಷಿಕರಿಗೆ ಸಂಬಧಿಸಿದ ಇತರೆ ಯೋಜನೆಗಳ ಅಂಕಣಗಳು:

PM-kisan amount- ಈ ರೀತಿ  ಸಂದೇಶ ಬಂದವರಿಗಿಲ್ಲಾ ಪಿ ಎಂ ಕಿಸಾನ್ ಯೋಜನೆ ಹಣ!

Crop insurance status: ಬೆಳೆ ವಿಮೆ ಕುರಿತು ಈ ರೀತಿ ನಿಮ್ಮ ಮೊಬೈಲ್ ಗೆ ಮೆಸೇಜ್ ಬಂದಿದೆಯೇ? ಹಾಗಾದರೆ ಇದಕ್ಕೆ ಪರಿಹಾರವೇನು?

FID Number: ರೈತರು ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ!

Crop survey details- ಕೃಷಿ ಇಲಾಖೆಯಿಂದ ಸರ್ವೆ ನಂಬರ್ ವಾರು ಬೆಳೆ ಸಮೀಕ್ಷೆ ವಿವರ ಬಿಡುಗಡೆ! ನಿಮ್ಮ ಜಮೀನಿನ ಬೆಳೆ ವಿವರ ಚೆಕ್ ಮಾಡಿ.

ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ!

ನಿಮ್ಮ ಹಳ್ಳಿಯಲ್ಲಿ ಯಾವ ಸರ್ವೆ ನಂಬರ್ ಎಲ್ಲಿ ಬರುತ್ತದೆ ಎಂದು ಹೇಗೆ ತಿಳಿಯುವುದು?

ಮೀನುಗಾರಿಕೆ ಇಲಾಖೆಯಿಂದ ಶೇ. 40% ಮತ್ತು ಶೇ. 60% ರಷ್ಟು ಸಹಾಯಧನ ಯೋಜನೆಗಳಿಗೆ ಅರ್ಜಿ ಅಹ್ವಾನ.

Sheep Farming schemes: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆಯಬವುದು?

 Nrega scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಯಾವೆಲ್ಲ ಸ್ವ-ಉದ್ಯೋಗ ಮಾಡಬವುದು? ಸಹಾಯಧನ ಎಷ್ಟು? ಒದಗಿಸಬೇಕಾಗದ ಅಗತ್ಯ ದಾಖಲಾತಿಗಳು

Chaff cutter subsidy: ಶೇ 50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!